ಕೋಲಾರ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ

Published On :

ಗೌರಿಬಿದನೂರು: ತಮ್ಮ ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಂತ್ಯ ರೈತಸಂಘದ ತಾಲೂಕು ಘಟಕವು ತಾಲೂಕಿನ ಡಿ. ಪಾಳ್ಯ ಗ್ರಾಮಪಂಚಾಯ್ತಿ ಮುಂದೆ ಅರ್ನಿರ್ಧಿಷ್ಟ ಧರಣಿ ನಡೆಸಿದರು.
ರಸ್ತೆಯನ್ನು ದುರಸ್ತಿಗೊಳಿಸುವುದು, ನರೇಗಾ ಕಾಮಗಾರಿಯನ್ನು ಪ್ರಾರಂಭಿಸುವುದು, ಬಡವರ ನಿವೇಶನವನ್ನು ಅಕ್ರವಾಗಿ ಬೇರೆಯವರಿಗೆ ಖಾತೆ ಮಾಡಿರುವುದನ್ನು ರದ್ದುಗೊಳಿಸಬೇಕು. ಪಂಚಾಯ್ತಿಯ ಭ್ರಷ್ಟ ಅಧಿಕಾರಿಗಳನ್ನು ತನಿಖೆ ನಡೆಸುವುದು, ಜನತಾಕಾಲೋನಿಗೆ ಶೀಘ್ರ ವಿದ್ಯುತ್ ಸಂಪರ್ಕ ಕಲ್ಪಿಸುವುದು, ಊರ ಬಾಗಿಲಿನಿಂದ ಸ್ಮಶಾನಕ್ಕೆ ಹೋಗುವ ರಸ್ತೆಗೆ ಡಾಂಬರೀಕರಣಗೊಳಿಸುವುದು ಬೇಡಿಕೆಗಳಲ್ಲಿ ಸೇರಿತ್ತು. ಶೌಚಾಲಯ ನಿರ್ಮಿಸಿಕೊಂಡವರಿಗೆ ತಕ್ಷಣ ಬಿಲ್ ಪಾವತಿಸುವುದು, ಖಾತೆ ನಂ. 820 ಮತ್ತು 1388 ನಿವೇಶನವನ್ನು ತಕ್ಷಣವೇ ಅಳತೆ ನಡೆಸಿ ಅಕ್ರಮವಾಗಿ ಅನುಭವದಲ್ಲಿರುವದನ್ನು ತೆರವುಗೊಳಿಸುವುದೂ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ಅಧ್ಯಕ್ಷ ರಾಜು, ಕಾರ್ಯದರ್ಶಿ ರವಿಚಂದ್ರಾರೆಡ್ಡಿ, ಕೃಷಿ ಕೂಲಿಕಾರ್ಮಿಕರ ಸಂಘದ ಅಧ್ಯಕ್ಷ ಸಿ.ಸಿ. ಅಶ್ವತ್ಥಪ್ಪ, ಕಾರ್ಯದರ್ಶಿ ಚಿಕ್ಕನಾಯ್ದ, ಅನ್ವರ್ ಬಾಷಾ, ಲತೀಪ್, ಬುಡೇನ್, ನರಸಿಂಹಮೂರ್ತಿ,ಮಂಜುನಾಥ್, ಕೃಷ್ಣಪ್ಪ, ಅಂಜದ್ ಬಾಷ, ನರಸಮ್ಮ, ಕಿಶೋರ್ ಮುಂತಾದವರು ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.
ಗೆಲವು ಖಚಿತ: ವೈಎಎನ್
ಶ್ರೀನಿವಾಸಪುರ: ಆಗ್ನೇಯ ಪದವಿಧರ ಕ್ಷೇತ್ರದಿಂದ ವಿಧಾನ ಪರಿಷತ್ ಸ್ಪರ್ಧಿಸಿರುವ ಡಾ. ಶಿವಯೋಗಿಸ್ವಾವು ಗೆಲವು ಶತಸಿದ್ಧ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಆಡಳಿತಾವಧಿಯಲ್ಲಿ ಶಿಕ್ಷಣ ಮತ್ತು ಶಿಕ್ಷಕರ ಹಾಗೂ ನಿರುದ್ಯೋಗ ಪದವಿಧರರ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಇದು ಗೆಲವಿಗೆ ಸಹಕಾರಿಯಾಗಿದೆ. ಜೊತೆಗೆ ಪಕ್ಷೇತರ ಅಭ್ಯರ್ಥಿ ವೆಂಕಟಶಿವಾರೆಡ್ಡಿ ಕಣದಿಂದ ಹಿಂದೆ ಸೆರೆದು, ಶಿವಯೋಗಿಸ್ವಾವು ಅವರಿಗೆ ಬೆಂಬಲ ಸೂಚಿಸಿದರುವುದೂ ಗೆಲವಿಗೆ ಸಹಕಾರಿಯಾಗಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.