ಕೋಲಾರ

ಸಹಭಾಗಿತ್ವದಿಂದ ಉತ್ತಮ ಆಡಳಿತ ಸಾಧ್ಯ

Published On :

ಗೌರಿಬಿದನೂರು: ಆಡಳಿತದಲ್ಲಿ ಜನರ ಸಹಭಾಗಿತ್ವದಿಂದ ಉತ್ತಮ ಆಡಳಿತ ನೀಡಲು ಸಾಧ್ಯ ಎಂದು ರಾಜ್ಯ ಸಕಾಲ ಮಿಷನ್ ಸಹಾಯ ಕಮೀಷನರ್ ಬಿ.ಎನ್. ವರಪ್ರಸಾದರೆಡ್ಡಿ ಅಭಿಪ್ರಾಯ ಪಟ್ಟರು.
ಪಟ್ಟಣದ ಡಾ.ಎಚ್.ಎನ್. ಕಲಾಭವನದಲ್ಲಿ ನಡೆದ ಲಯನ್ ಸಂಸ್ಥೆಯ 2014-2015ರ ನೂತನ ಆಡಳಿತ ಮಂಡಲಿ ಸದಸ್ಯರ ಪದವೀ ಸ್ವೀಕಾರ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಸ್ಥಳೀಯ ಲಯನ್ ಸಂಸ್ಥೆಯಲ್ಲಿ ನೂತನ ಸದಸ್ಯರಾಗಿ ಪ್ರಮಾಣ ವಚನ, ಸನ್ಮಾನ ಸ್ವೀಕರಿಸಿದ ತಹಸೀಲ್ದಾರ್ ಡಾ.ಎನ್. ಭಾಸ್ಕರ್ ಮಾತನಾಡಿದರು. ನಿರ್ಗಮಿತ ಅಧ್ಯಕ್ಷ ಡಾ.ಎಂ.ಎನ್. ಶ್ರೀದರ್ ಅಧಿಕಾರ ಅವಧಿಯಲ್ಲಿ ನಡೆದ ಸೇವಾ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ರಾಜ್ಯಪಾಲ ಬಿ. ಮೋಹನ್ ನೂತನ ಸದಸ್ಯರಿಗೆ ಪ್ರಮಾಣ ವಚನ ಭೋಧಿಸಿದರು. ಎಚ್.ಕೆ. ಗಿರಿಧರ್ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋಧಿಸಿದರು. ಅಧ್ಯಕ್ಷರಾಗಿ ಡಾ. ಗುಂಡೂರಾವ್, ಕಾರ್ಯದರ್ಶಿಯಾಗಿ ಆರ್.ಜೆ. ಶ್ರೇಣಿಕ್, ಕೋಶಾಧಿಕಾರಿಯಾಗಿ ಡಾ.ಎನ್.ಎಂ. ರಾಜು, ಅಧ್ಯಕ್ಷರಾಗಿ ಮೂರನೇ ಬಾರಿಗೆ ಪಾರ್ವತಮ್ಮ ಪ್ರಮಾಣ ವಚನ ಸ್ವೀಕರಿಸಿದರು. ಬಿ.ಎನ್. ರಾಮಯ್ಯ ಇದ್ದರು. ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.