ಕೋಲಾರ

ನೀರು ನಿರ್ವಹಣೆಯಲ್ಲಿ ಪುರಸಭೆ ವಿಫಲ

Published On :

ಬಂಗಾರಪೇಟೆ: ಪಟ್ಟಣದ ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಅಧಿಕಾರಿ ವೃಂದ ಸಮರ್ಪಕವಾಗಿ ನೀರು ಪೂರೈಕೆ ಮಾಡುವಲ್ಲಿ ವಿಫಲವಾಗಿದ್ದಾರೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಮ್ಮ ಅಸಮಧಾನವನ್ನು ವ್ಯಕ್ತಪಡಿಸಿದರು.
ಪಟ್ಟಣದ ಗಾಂಧಿನಗರ ರಸ್ತೆಗಳಿಗೆ ಎಂ.ಬಸಪ್ಪ ರಸ್ತೆ, ಮತ್ತೊಂದು ರಸ್ತೆಗೆ ಎನ್.ಮುನಿಸ್ವಾಮಿ ರಸ್ತೆ ಎಂದು ನಾಮಕರಣ ಮಾಡಿದ ಬಳಿಕ ಮಾತನಾಡಿದರು. ಈ ಹಿಂದೆ ಪುರಸಭೆ ಆಡಳಿತ ಮಂಡಳಿ ಇರದ ಕಾರಣ ಸಿಬ್ಬಂದಿ ಹಾಗೂ ಮುಖ್ಯಾಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಿಲ್ಲ. ನಂತರ ಅಧಿಕಾರಕ್ಕೆ ಬಂದ ಪುರಸಭೆ ಅಧ್ಯಕ್ಷರು ಮತ್ತು ಸದಸ್ಯರು ಸಹ ಸರಿಯಾಗಿ ಕುಡಿಯುವ ನೀರಿನ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.
2 ಕೋಟಿ ಹಣವನ್ನು ಮಂಜೂರು ಮಾಡುವಲ್ಲಿ ಜಿಲ್ಲಾಧಿಕಾರಿಗಳು ಡಿಎಂಎಗೆ ಬರೆದಿರುವ ಕಾರಣ ಕಾಮಗಾರಿ ಚಾಲನೆ ನೀಡಲು ತಡವಾಗುತ್ತಿದ್ದು, ಇದಕ್ಕೆ ಕಾನೂನಿನ ತೊಡಕಿದೆ. ಆದುದರಿಂದ ಸರ್ಕಾರಕ್ಕೆ ಮನವಿ ಮಾಡಿದ್ದು, ಕಾನೂನನ್ನು ಸಡಿಲ ಮಾಡಲು ಆದೇಶಿಸಲು ಸಚಿವರ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.
ಇನ್ನು ಮೂರು ತಿಂಗಳೊಳಗಾಗಿ ಡಬಲ್ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು. ಇದಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಿದರು. ಪುರಸಭೆ ಅಧ್ಯಕ್ಷೆ ಗಂಗಮ್ಮ ರಂಗರಾಮಯ್ಯ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎ.ಪಾರ್ಥಸಾರಥಿ, ಭಾಗ್ಯಮ್ಮ, ಷಫಿ, ವೆಂಕಟೇಶಗೌಡ, ಸಿ.ಅಪ್ಪಯ್ಯಗೌಡ, ಆದಿನಾರಾಯಣಪ್ಪ, ವೆಂಕಟೇಶಪ್ಪ, ರಾಮಕೃಷ್ಣಪ್ಪ, ಚಂದ್ರಪ್ಪ, ಪುರಸಭೆ ಮುಖ್ಯಾಧಿಕಾರಿ ಜಹೀರ್ ಅಬ್ಬಾಸ್, ಶ್ರೀನಿವಾಸಮೂರ್ತಿ ಆರೋಗ್ಯಾಧಿಕಾರಿ ಗೋವಿಂದರಾಜು, ಗಿರೀಶ್ ಸೇರಿದಂತೆ ಅನೇಕರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.