ಕೋಲಾರ

ರೈಲು ದರ ಹೆಚ್ಚಳ: ಸಿಪಿಎಂ ಪ್ರತಿಭಟನೆ

Published On :

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ರೈಲು ಪ್ರಯಾಣ ದರವನ್ನು ಏರಿಕೆ ಮಾಡಿರುವುದನ್ನು ವಿರೋಧಿಸಿ ಸಿಪಿಎಂ ಕಾರ್ಯಕರ್ತರು ನಗರದಲ್ಲಿ ರೈಲು ಸಂಚಾರವನ್ನು ತಡೆದು ಅಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿನ ರೇಲ್ವೆ ನಿಲ್ದಾಣದಲ್ಲಿ ಚಿಕ್ಕಬಳ್ಳಾಪುರ-ಬೆಂಗಳೂರು ರೈಲಿನ ಸಂಚಾರ ಕೆಲ ಕಾಲದವರೆಗೂ ತಡೆದ ಪ್ರತಿಭಟನಾಕಾರರು, ಈ ಕೂಡಲೇ ಏರಿಕೆ ಮಾಡಿರುವ ದರವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು.  ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, 'ಬೆಲೆ ಏರಿಕೆಯನ್ನು ಮೆಟ್ಟಿಲು ಮಾಡಿಕೊಂಡು ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ, ರೈಲು ಪ್ರಯಾಣ ದರ ಹೆಚ್ಚಳ ಮಾಡಿರುವುದು ದುರದೃಷ್ಟಕರ' ಎಂದು ವಿಷಾದ ವ್ಯಕ್ತಪಡಿಸಿದರು. ಕೂಡಲೇ ಏರಿಕೆ ಮಾಡಿರುವ ರೈಲು ದರವನ್ನು ಮತ್ತು ಸರಕು ಸಾಗಣಿಕೆ ದರವನ್ನು ಕಡಿಮೆ ಮಾಡಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ  ಸಿಪಿಎಂ ತಾಲ್ಲೂಕು ಕಾರ್ಯದರ್ಶಿ ಬಿ.ಎನ್.ಮುನಿಕೃಷ್ಣಪ್ಪ, ಡಿವೈಎಫ್‌ನ ಶಿವಪ್ಪ, ಎಸ್‌ಎಪ್‌ಐನ ರಾಜಶೇಖರ್, ಆರತಿ ಮುನೀಂದ್ರ, ಕೆ.ವಿ.ವೆಂಕಟಲಕ್ಷಮ್ಮ, ಸಿ.ಎನ್.ರವಿ, ಎಂ.ಕೃಷ್ಣ ಪಾಲ್ಗೋಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.