ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ
ಚಿಕ್ಕಬಳ್ಳಾಪುರ: ಶಾಲಾ ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ತಾಲೂಕಿನ ಬಚ್ಚಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಜಿತ್ ಪ್ರಸಾದ್, ಗಿಡಗಳನ್ನು ನೆಡುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಪರಿಸರವನ್ನು ಉಳಿಸುವ ಕೆಲಸವೂ ಪ್ರಾಮಾಣಿಕವಾಗಿ ನಡೆಯಬೇಕೆಂದರು.
ಮಿತ್ರ ಶಾಲಾ ಪ್ರಶಸ್ತಿ: ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಕುರಿತ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಹೆಚ್ಚಿಗೆ ಹಮ್ಮಿಕೊಳ್ಳಲು ಸೂಚನೆ ನೀಡಲಾಗಿದೆ. ಅಲ್ಲದೇ ಜಿಲ್ಲಾ ಮತ್ತು ವಿಭಾಗ ಮಟ್ಟದಲ್ಲಿ ಪರಿಸರ ಮಿತ್ರ ಶಾಲಾ ಪ್ರಶಸ್ತಿಯನ್ನು ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು.
ನವ ಕರ್ನಾಟಕದ ಪರಿಸರ ಸಂರಕ್ಷಣಾ ವೇದಿಕೆಯ ರಾಜಾಧ್ಯಕ್ಷ ನೀರಜ್ ರೆಡ್ಡಿ, ಶಾಲಾ ಮುಖ್ಯ ಶಿಕ್ಷಕ ವಿ.ಗೋಪಾಲ ಕೃಷ್ಣ, ಗುಂಪು ಮರದ ಆನಂದ್, ವನ್ಯಜೀವಿಗಳ ಸಂರಕ್ಷಕ ಸ್ನೇಕ್ ಪೃಥ್ವಿ , ವಿಷಯ ಪರಿವೀಕ್ಷಕ ರಾಮಕೃಷ್ಣ, ಪರಿಸರ ಅಧಿಕಾರಿ ಸಿ.ಆರ್ .ಮಂಜುನಾಥ್ ಹಾಗೂ ಉಪ ಪರಿಸರ ಅಧಿಕಾರಿ ಕೆ.ಎನ್.ಮಂಜು,ಮುಖಂಡ ವೆಂಕಟರಾಮ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

