ಸಾವಿನ ಪ್ರಕರಣ ತನಿಖೆಗೆ ಅಡ್ಡಿ: ಪ್ರತಿಭಟನೆ
ಶಿಡ್ಲಘಟ್ಟ: ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ತಿಮ್ಮರಾಯಪ್ಪ ಎಂಬುವವರ ಸಾವಿನ ತನಿಖೆಗೆ ಅಡ್ಡಿಪಡಿಸುತ್ತಿರುವ ತಿಮ್ಮರಾಯಪ್ಪ ಅವರ ಮಗ ಮುನಿರಾಜು ಅವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಗ್ರಾಮಾಂತರ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.
ಪಟ್ಟಣದ ಗ್ರಾಮಾಂತರ ಠಾಣೆಯ ಮುಂದೆ ಪ್ರತಿಭಟನೆ ನಡೆಸಿರುವ ಅವರು ಕಳೆದ ತಿಂಗಳು ತಿಮ್ಮರಾಯಪ್ಪ ಶವವು ಬೈರನಾಯಕನಹಳ್ಳಿಯ ಬಳಿ ಪಾಳುಬಾವಿಯಲ್ಲಿ ಸಿಕ್ಕಿತ್ತು. ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮ್ಮರಾಯಪ್ಪನ ದೊಡ್ಡ ಮಗ ನಾರಾಯಣಸ್ವಾಮಿ ಎಂಬುವವರು ದೂರು ಕೊಟ್ಟಿದ್ದಾರೆ.
ಕ್ರಮಕ್ಕೆ ಆಗ್ರಹ: ಪೋಲಿಸರು ಪ್ರಕರಣದ ತನಿಖೆಯನ್ನು ಸರಿಯಾದ ರೀತಿಯಲ್ಲಿ ನಡೆಸುತ್ತಿದ್ದರೂ ಕೂಡಾ ಎರಡನೇ ಮಗ ಮುನಿರಾಜು ಪೋಲಿಸ್ ಇಲಾಖೆಯ ಮೇಲಾಧಿಕಾರಿಗಳಿಗೆ ದೂರು ನೀಡಿ, ನಾರಾಯಣಸ್ವಾಮಿ ಸೇರಿದಂತೆ ಗ್ರಾಮಸ್ಥರಲ್ಲಿ ಭಯದ ವಾತಾವರಣವನ್ನುಂಟು ಮಾಡುತ್ತಿದ್ದಾರೆ. ಆದ್ದರಿಂದ ಮುನಿರಾಜು ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸಿ.ಎಂ.ಮುನಿಯಪ್ಪ, ತಾಲೂಕು ಸಂಚಾಲಕ ವೆಂಕಟೇಶ್, ಲಕ್ಷ್ಮೀನಾರಾಯಣ, ಟಿ.ಎ.ಚಲಪತಿ, ಹುಜುಗೂರು ವೆಂಕಟೇಶ್, ನಾರಾಯಣಸ್ವಾಮಿ, ಮಟ್ಟಿನಾರಾಯಣಸ್ವಾಮಿ, ಮುಂತಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

