ಕೋಲಾರ

ಜು.1ರಿಂದ ಕೋಲಾರ ನಗರದಲ್ಲಿ ಪ್ಲಾಸ್ಟಿಕ್ ನಿಷೇಧ

Published On :

ಕೋಲಾರ: ನಗರದಲ್ಲಿ ಜುಲೈ 1 ರಿಂದ ಪ್ಲಾಸ್ಟಿಕ್ ಮಾರಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗುತ್ತಿದ್ದು,  ವ್ಯಾಪಾರಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ನಗರಸಭೆ ಅಧ್ಯಕ್ಷ ಎಂ.ಬಿ.ಮುಬಾರಕ್ ಮನವಿ ಮಾಡಿದರು.
ನಗರಸಭೆಯಲ್ಲಿ ಮಂಗಳವಾರ ಫುಟ್ಪಾತ್ ವ್ಯಾಪಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅತಿಯಾಗಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದರಿಂದ ನಗರದಲ್ಲಿ ಕಸ ವಿಲೇವಾರಿಗೆ ತೊಂದರೆಯಾಗುತ್ತಿದೆ. ಅನೇಕ ಸಾರಿ ಪ್ಲಾಸ್ಟಿಕ್ ಮಾರಾಟ ನಿಷೇಧಕ್ಕೆ ನಗರಸಭೆಯಿಂದ ಕ್ರಮಗಳನ್ನು ಕೈಗೊಂಡಿದ್ದರೂ ವ್ಯಾಪಾರಿಗಳ ಹಾಗೂ ಜನತೆಯ ಅಸಹಕಾರದಿಂದ ಉದ್ದೇಶ ಈಡೇರಿಲ್ಲ ಎಂದು ತಿಳಿಸಿದರು.
ಪ್ಲಾಸ್ಟಿಕ್ ಬಳಕೆಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರ ಸಾಕಷ್ಟು ಎಚ್ಚರಿಕೆಯನ್ನು ನೀಡಿದೆ. ನ್ಯಾಯಾಲಯಗಳು ಸಹ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಸೂಚನೆ ನೀಡಿರುವುದರಿಂದ ನಗರದಲ್ಲಿ ಜುಲೈ 1ರಿಂದ ಪ್ಲಾಸ್ಟಿಕ್ ನಿಷೇಧ ಕಡ್ಡಾಯಗೊಳಿಸುತ್ತಿರುವುದರಿಂದ ಪ್ರತಿಯೊಬ್ಬರು ಕಾನೂನು ಪಾಲನೆ ಮಾಡಿ ನಗರವನ್ನು ಪ್ಲಾಸ್ಟಿಕ್‌ನಿಂದ ಮುಕ್ತಗೊಳಿಸುವಂತೆ ಕೋರಿದರು.
ಡಿವೈಎಸ್ಪಿ ಅಶೋಕ್‌ಕುಮಾರ್ ಮಾತನಾಡಿದರು. ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಸಾಕಮ್ಮ, ಆಯುಕ್ತರಾದ ಜಗದೀಶ್, ಮ್ಯಾನೇಜರ್ ಶಿವಪ್ರಕಾಶ್, ಸಿಪಿಐ ಶಿವಕುಮಾರ್, ಆರೋಗ್ಯ ನಿರೀಕ್ಷಕ ರಮೇಶ್ ಇದ್ದರು. ಸುಮಾರು 250ಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಗುರುತಿನ ಚೀಟಿ: ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ-ವಹೀವಾಟು ನಡೆಸಲು ನಗರಸಭೆಯಿಂದ ಸೂಕ್ತವಾದ ಸ್ಥಳವನ್ನು ನಿಗದಿ ಮಾಡಲಾಗುತ್ತದೆ. ಯಾವುದೇ ವ್ಯಾಪಾರಿಗಳು ತಮಗಿಷ್ಟ ಬಂದ ಕಡೆ ಅಂಗಡಿ ಇಡುವಂತಿಲ್ಲ. ವ್ಯಾಪಾರಿಗಳು ಸಂಘ ಮಾಡಿಕೊಂಡು ಸದಸ್ಯರ ಪಟ್ಟಿಯನ್ನು ನಗರಸಭೆಗೆ ನೀಡಬೇಕು ಎಂದು ತಿಳಿಸಿದರು.
ನಗರಸಭೆಯಲ್ಲಿ 100 ಪಾವತಿಸಿ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು. ಸದಸ್ಯರಲ್ಲದವರಿಗೆ ನಗರಸಭೆಯಿಂದ ಪರವಾನಗಿ ನೀಡುವುದಿಲ್ಲ, ನೋಂದಾಯಿತ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಲಾಗುತ್ತದೆ. ಇದರಿಂದ ಸರ್ಕಾರದಿಂದ ಸಿಗುವ ಸಾಲ ಸೌಲಭ್ಯ ಸೇರಿದಂತೆ ಇನ್ನಿತರ ಪ್ರಯೋಜನಗಳನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.