ಕೋಲಾರ

ರೈಲ್ವೆ ಪ್ರಯಾಣ ದರ ಏರಿಕೆಗೆ ಆಕ್ರೋಶ: ಸಿಪಿಎಂ ಕಾರ್ಯಕರ್ತ ಪ್ರತಿಭಟನೆ

Published On :

ಬಾಗೇಪಲ್ಲಿ: ಕೇಂದ್ರ ಸರ್ಕಾರ ಏರಿಸಿರುವ ರೈಲ್ವೆ ಪ್ರಯಾಣ ದರವನ್ನು ತಕ್ಷಣ ಇಳಿಸಬೇಕೆಂದು ಒತ್ತಾಯಿಸಿ ಸಿಪಿಎಂ ಕಾರ್ಯಕರ್ತರು ಇಲ್ಲಿನ ಉಪ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪಟ್ಟಣದ ಸುಂದರಯ್ಯ ಭವನದಿಂದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಬಂದ ಕಾರ್ಯಕರ್ತರು ಉಪ ಅಂಚೆ ಕಚೇರಿ ಮುಂದೆ ಧರಣಿ ಕುಳಿತರು.  ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ತಾಲೂಕು ಸಿಪಿಎಂ ಕಾರ್ಯದರ್ಶಿ ಎಂ.ಎನ್. ರಘುರಾಮರೆಡ್ಡಿ, ಕೇಂದ್ರದಲ್ಲಿ ಕೆಲವೇ ತಿಂಗಳು ಹಿಂದೆ ಅಧಿಕಾರಕ್ಕೆ ಏರಿರುವ ಬಿಜೆಪಿ ಸರ್ಕಾರ ಕಾಂಗ್ರೆಸ್ ಧೋರಣೆಗಳನ್ನು ಮುಂದುವರೆಸಿದೆ ಎಂದು ಆರೋಪಿಸಿದರು.
ಚುನಾವಣೆಗೂ ಮುನ್ನ ದೇಶಾದ್ಯಂತ ಹಬ್ಬರದ ಪ್ರಚಾರ ಮಾಡಿ ಅಧಿಕಾರ ಬಂದ ಕೂಡಲೇ ರೈಲ್ವೆ ದರವನ್ನು 14.2 ಏರಿಸಿ ಜನಸಾಮಾನ್ಯರ ಮೇಲೆ ಬರೆ ಎಳೆದಿದೆ. ಹಾಗೆಯೇ ಸರಕು ಸಾಗಾಣಿಕೆ ದರವನ್ನು 6.2 ರಷ್ಟು ಹೆಚ್ಚಿಸಿ ಜನರು ಹೆಚ್ಚಿನ ಆರ್ಥಿಕ ಹೊರೆ ಹೊರುವಂತೆ ಮಾಡಿದೆ. ದೇಶದ ಜನರ ಆಶೋತ್ತರಗಳನ್ನು ಈಡೇರಿಸಲು ಜನಪರ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಪಿಎಂ ಮುಖಂಡ ಮಂಜುನಾಥರೆಡ್ಡಿ ಮಾತನಾಡಿ, ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿವೆ. ಇದರ ನಡುವೆ ಸಾಮಾನ್ಯರು ಜನರು ಬಳಸುವ ಗ್ಯಾಸ್ ಪ್ರತಿ ಸಿಲಿಂಡರ್‌ಗೆ 10 ರೂ.ಗಳನ್ನು ಏರಿಕೆ ಮಾಡಲು ಹೊರಟಿರುವುದು ದುರಂತ ಸಂಗತಿ ಎಂದರು.
ಪ್ರತಿಭಟನೆಯಲ್ಲಿ ಮುಖಂಡರಾದ ಆರ್. ಚಂದ್ರಶೇಖರ ರೆಡ್ಡಿ, ಗೋವರ್ಧನಚಾರಿ, ವಾಲ್ಮೀಕಿ ಅಶ್ವಥ್ಥಪ್ಪ,ಪುರಸಭೆಮಾಜಿ ಸದಸ್ಯ ಜಿ. ಕೃಷ್ಣಪ್ಪ, ಹೆಚ್.ಎ. ರಾಮಲಿಂಗಪ್ಪ, ವಕೀಲ ಸಿ.ರವಿ, ನಾಗರಾಜು ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.