ಕೋಲಾರ

ವಿದ್ಯುತ್ ಬರ

Published On :

ಬಂಗಾರಪೇಟೆ: ತಾಲೂಕಿನಲ್ಲಿ ವಿದ್ಯುತ್ ಅಸಮರ್ಪಕ ಪೂರೈಕೆಯಿಂದಾಗಿ ದಿನವೂ ಗ್ರಾಹಕರು ಪರದಾಡುವಂತಾಗಿದೆ.
 ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲೋಡ್‌ಶೆಡ್ಡಿಂಗ್ ಜಾರಿಗೊಳಿಸಿದೆಯಾದರೂ, ಅಲ್ಪ ಸ್ಪಲ್ಪ ನೀಡುತ್ತಿರುವ ವಿದ್ಯುತ್ ವೂರೈಕೆಯೂ ಸರ್ಪಕವಾಗಿಲ್ಲದಿರುವುದರಿಂದ ಗ್ರಾಹಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ.
ತಾಲೂಕಿನಲ್ಲಿ ಮಳೆಯಿಲ್ಲದೆ ಬಹುತೇಕ ಕೊಳವೆ ಬಾವಿಗಳು ಬತ್ತಿ ಹೋಗಿವೆ. ಅಂತರ್ಜಲ ಕುಸಿದಿದ್ದರೂ ರೈತರು ಜೀವನಕ್ಕಾಗಿ ಪಾತಾಳದಲ್ಲಿನ ನೀರನ್ನು ಹೊರ ತೆಗೆದು ವಿವಿಧ ಬೆಳೆಗಳನ್ನು ಬೆಳೆದು ಜೀವನ ನಡೆಸುತ್ತಿದ್ದಾರೆ. ಆದರೆ ದಿನಕ್ಕೆ ಕನಿಷ್ಠ 7 ರಿಂದ 8ಗಂಟೆ ಗುಣಮಟ್ಟದ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಇಂದರಿಂದಾಗಿ ರೈತರು ಕೃಷಿ ಬಿಟ್ಟು ಬದುಕಿಗಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸರ್ಕಾರ ಬರ ಪೀಡಿತ ತಾಲೂಕುಗಳಿಗೆ ಯಾವುದೇ ಕಾರಣಕ್ಕೂ ವಿದ್ಯುತ್ ಕೊರತೆ ಮಾಡದೆ ಕೃಷಿ ಪಂಪ್‌ಸೆಟ್‌ಗಳಿಗೆ ಕನಿಷ್ಠ 7ಗಂಟೆ ತ್ರಿಫೆಸ್ ವಿದ್ಯುತ್ ಸರಬರಾಜು ಮಾಡಬೇಕು. ತಾಲೂಕಿನ ಎಳೇಸಂದ್ರದಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಘಟಕ ಆರಂಭಿಸಿದ್ದು ಅಲ್ಲಿ ಉತ್ಪಾದನೆ ಆಗುವ ವಿದ್ಯುತ್ ಕೆಲವು ಹಳ್ಳಿಗಳಿಗೆ ವಿತರಣೆ ಮಾಡುತ್ತಿದೆ. ಆದರೆ ಬೂದಿಕೋಟೆ ಹೋಬಳಿ ಜನರಿಗೆ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ.
ವಿದ್ಯುತ್ ಸಮಸ್ಯೆ:
ವಿದ್ಯುತ್ ಸಮಸ್ಯೆಯಿಂದಾಗಿ ಕುಡಿಯುವ ನೀರಿಗೆ ಎಲ್ಲಿಲ್ಲದ ಹಾಹಾಕಾರ ಉಂಟಾಗಿದೆ. ಜಿಲ್ಲೆಗೆ 150ರಿಂದ 160 ಮೆಗಾವ್ಯಾಟ್ ವಿದ್ಯುತ್ ಬೇಕಾಗಿದ್ದು ಈಗ ಪೂರೈಕೆಯಾಗುತ್ತಿರುವುದು ಕೇವಲ 80 ಮೆಗಾವ್ಯಾಟ್ ಮಾತ್ರ. ಜಿಲ್ಲೆಯ ಎಲ್ಲ ಶಾಸಕರು ವಿಧಾನಸಭೆ ಅಧಿವೇಶನದಲ್ಲಿ ವಿದ್ಯುತ್ ಸಮಸ್ಯೆ ಬಗ್ಗೆ ಧ್ವನಿ ಎತ್ತಿ ನಮ್ಮ ಪಾಲಿನ ವಿದ್ಯುತ್ ಪೂರೈಕೆಗೆ ಒತ್ತಾಯಿಸಬೇಕು ಹಾಗೂ ಸೋಲಾರ್ ಘಟಕಗಳ ಸ್ಥಾಪನೆಗೆ ಮುಂದಾಗಬೇಕು ಎಂದು ತಾಲೂಕಿನ ಜನತೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.