ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ವಚ್ಛತೆ ಅರಿವು ಮೂಡಿಸಿ
ಕೋಲಾರ: ವೈಯುಕ್ತಿಕ ಸ್ವಚ್ಛತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಶಿಕ್ಷಕರು ಗಮನ ನೀಡಬೇಕೆಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜಗದೀಶ್ ಸಲಹೆ ನೀಡಿದರು. ತಾಲೂಕಿನ ನರಸಾಪುರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ವೈಯುಕ್ತಿಕ ಸ್ವಚ್ಛತಾ ಜಾಗೃತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ವೈಯಕ್ತಿಕ ಸ್ವಚ್ಚತೆ: ಶುಚಿತ್ವದ ಅಭ್ಯಾಸಗಳನ್ನು ಕಲಿಕೆಯ ಜೊತೆ ಜೊತೆಯಲ್ಲಿ ಮಕ್ಕಳಿಗೆ ಮನನ ಮಾಡಿಕೊಡುವ ಜವಾಬ್ದಾರಿಯನ್ನು ಶಿಕ್ಷಕರು ಹೊತ್ತು ಪರಿಸರ ಸ್ವಚ್ಛತೆ, ಶೌಚಾಲಯ ಬಳಕೆ ಮತ್ತು ವೈಯಕ್ತಿಕ ಸ್ವಚ್ಚತೆಗೆ ಸಂಬಂಧಿಸಿದಂತೆ ಮಕ್ಕಳಿಗೆ ಮಾರ್ಗದರ್ಶನ ನೀಡುವ ಮೂಲಕ ಮಕ್ಕಳು ಆರೋಗ್ಯವಂತರಾಗಲು ಶ್ರಮಿಸಬೇಕಾಗಿದೆ ಎಂದರು.
ತಾಲೂಕು ಪಂಚಾಯಿತಿ ನಿರ್ಮಲ ಭಾರತ ಅಭಿಯಾನ ಸಂಯೋಜಕ ಜಿ. ಶ್ರೀನಿವಾಸ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಅನೈರ್ಮಲ್ಯದ ಅಭ್ಯಾಸಗಳನ್ನು ತೊಡೆದುಹಾಕಿ ನಿರ್ಮಲ ಪರಿಸರವನ್ನು ರೂಪಿಸಲು ವಿದ್ಯಾರ್ಥಿಗಳು ನೆರವಾಗಬೇಕಾಗಿದ್ದು, ಶಾಲೆ, ಮನೆಗಳಲ್ಲಿ ಪರಿಸರ, ವೈಯಕ್ತಿಕ ಸ್ವಚ್ಚತೆಗೆ ಹೆಚ್ಚಿನ ಒಲವು ತೋರಬೇಕು ಎಂದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು. ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಲಕ್ಷಣ್, ಉಪಾಧ್ಯಕ್ಷೆ ಸರಸ್ವತಿ, ಪ್ರೌಢಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಭಾನು ಪ್ರಕಾಶ್, ಮುಖ್ಯೋಪಾದ್ಯಾಯ ಬಿ. ಸೊಣ್ಣೇಗೌಡ, ಭಾರತ ಸೇವಾದಳ ಜಿಲ್ಲಾ ಸಂಘಟಕ ವಿ. ಮಂಜುನಾಥ್, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಂ. ಕೊಳ್ಳಪ್ಪ, ಬಿ. ಹನುಮಾನ್ ಸಿಂಗ್, ಶಿಕ್ಷಕ ಮುಖಂಡ ಇಂಚರ ನಾರಾಯಣಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

