ಕುಡಿವ ನೀರು ಪೂರೈಸದಿದ್ದರೆ ಪಿಡಿಒ ಅಮಾನತು: ಎಚ್ಚರಿಕೆ
ಬಂಗಾರಪೇಟೆ: ಕ್ಷೇತ್ರದಲ್ಲಿ ಎಲ್ಲಿಯಾದರೂ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪ್ರತಿಭಟನೆ ಮಾಡಿದರೆ ಅದರ ಹೊಣೆಯನ್ನು ಪಿಡಿಒಗಳ ಮೇಲೆ ಹೊರಸಿ ಅಮಾನತು ಮಾಡಲಾಗುವುದು ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಎಚ್ಚರಿಸಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ 26 ಪಂಚಾಯ್ತಿಗಳ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡುತ್ತಾ ಕುಡಿಯುವ ನೀರಿಗಾಗಿ ಸರ್ಕಾರ ಕೊರತೆಯಿಲ್ಲದಷ್ಟು ಹಣ ನೀಡುತ್ತಿದೆ. ಅದನ್ನು ಬಳಸಿಕೊಂಡು ಯಾವ ಗ್ರಾಮದಲ್ಲಿಯೂ ಸಮಸ್ಯೆ ಬಾರದಂತೆ ನೀವು ಎಚ್ಚರವಹಿಸಬೇಕು. ಅಗತ್ಯ ಬಿದ್ದರೆ ಟ್ಯಾಂಕರ್ ಮೂಲಕವಾದರೂ ಪೂರೈಸಬೇಕು ಅದು ಬಿಟ್ಟು ವಿನಾಕಾರಣ ಅವರು ತಾಪಂ ಕಚೇರಿ ಮುಂದೆ ಬಂದು ಪ್ರತಿಭಟನೆ ಮಾಡಿದರೆ ಅದಕ್ಕೆ ನಿಮ್ಮನ್ನು ಹೊಣೆ ಮಾಡಿ ಕರ್ತವ್ಯ ನಿರ್ಲಕ್ಷ್ಯತನ ಆರೋಪದ ಮೇಲೆ ಅಮಾನುಗೊಳಿಸುವುದಾಗಿ ಎಚ್ಚರಿಸಿದರು.
ಅಪೂರ್ಣ ಮನೆ ಪೂರ್ಣಗೊಳಿಸಿ: ಕಳೆದ ಒಂದು ವರ್ಷದಲ್ಲಿ ಕ್ಷೇತ್ರಕ್ಕೆ ಬಂದು 500 ಮನೆಗಳ ಸ್ಥಿತಿ ಗತಿಗಳೇನು, ಈವರೆಗೂ ಎಷ್ಟು ಮನೆಗಳು ಪೂರ್ಣಗೊಂಡಿವೆ ಎಂದು ಪ್ರಶ್ನಿಸಿದ ಅವರು, ಅಪೂರ್ಣ ಮನೆಗಳನ್ನು ಮುಂದಿನ ತಿಂಗಳು ಅಂತ್ಯದವರೆಗೆ ಪೂರ್ಣಗೊಳಿಸುವಂತೆ ಸೂಚಿಸಿದರು.
ಇದುವರೆಗೂ ಪಿಡಿಒ ತಮ್ಮ ಬಳಿ ಸಮಸ್ಯೆಗಳ ಬಗ್ಗೆ ಹೇಳಿಕೊಂಡಿಲ್ಲ. ಯಾವುದೇ ಬೇಯವಿಲ್ಲದೆ ಮುಕ್ತವಾಗಿ ಚರ್ಚಿಸಿ ನನಗೆ ಗ್ರಾಮಸ್ಥರಿಂದ ಸಮಸ್ಯೆಗಳು ಬರಬಾರದು. ತಿಂಗಳಿಗೊಮ್ಮ ಪಿಡಿಒಗಳ ಪ್ರಗತಿ ಪರಿಶೀಲನೆ ಮಾಡುವೆ ಎಂದು ತಿಳಿಸಿದರು.
ಸಾಧನೆ ಪುಸ್ತಕ ಬಿಡುಗಡೆ: ಇದೇ ವೇಳೆ ಶಾಸಕರು ತಮ್ಮ ಒಂದು ವರ್ಷದ ಸಾಧನೆ ಬಿಂಬಿಸುವ ಕಿರು ಪುಸ್ತಕವನ್ನು ಬಿಡುಗಡೆ ಮಾಡಿದರು. ಸಭೆಯಲ್ಲಿ ಜಿಪಂ ಎಇಇ ವೆಂಕಟೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

