ಕೋಲಾರ

ಮೂಲ ಸೌಕರ್ಯ ವೀಕ್ಷಿಸಿದ ಪೌರಾಯುಕ್ತ

Published On :

ಚಿಂತಾಮಣಿ: ನೂತನವಾಗಿ ಅಧಿಕಾರ ಸ್ವೀಕರಿಸಿದ ನಗರಸಭೆ ಪೌರಾಯುಕ್ತ ಪದ್ಮನಾಭ್ ಭಾನುವಾರ ಬೆಳಿಗ್ಗೆ ನಗರದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ವೀಕ್ಷಣೆ ಮಾಡಿದರು.
ನಗರದ ಪ್ರಮುಖ ಬಡಾವಣೆಗಳಾದ ಎನ್.ಆರ್. ಬಡಾವಣೆ, ಸೊಣ್ಣಶೆಟ್ಟಹಳ್ಳಿ, ವಿನೋಬ ಕಾಲೋನಿ, ಚೇಳೂರು ರಸ್ತೆ, ಆಜಾದ್ ಚೌಕ, ಐಡಿಎಂಸಿ ಕಾಂಪ್ಲೆಕ್ ಸೇರಿದಂತೆ ಇನ್ನೂ ಹಲವು ಬಡಾವಣೆಗಳಿಗೆ ಭೇಟಿ ನೀಡಿ ನಗರದಲ್ಲಿ ಸ್ವಚ್ಛ ಕುಡಿಯುವ ನೀರಿನ ಸಮಸ್ಯೆ ಇನ್ನೂ ಹಲವು ಮೂಲಭೂತ ಸೌಲಭ್ಯಗಳು ಸಂಬಂಧಪಟ್ಟ ಅಧಿಕಾರಿಗಳ ಮತ್ತು ಸಿಬ್ಬಂದಿಯಲ್ಲಿ ಸಮನ್ವಯ ಕೊರತೆ ಇದೆ. ಪ್ಲಾಸ್ಟಿಕ್ ನಿಷೇಧವಿದ್ದರೂ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ನಗರಸಭೆಯ ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ. ನೋಡಿಯೂ ನೋಡದಂತೆ ವರ್ತನೆ ಮಾಡುತ್ತಿರುವ ನಗರಸಭೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ನಗರಸಭೆ ಪೌರಾಯುಕ್ತ ಪದ್ಮನಾಭ್ ಕಿಡಿಕಾರಿದರು. ತಕ್ಷಣ ಅಧಿಕಾರಿಗಳು ಇತ್ತ ಗಮನಹರಿಸಿ, ನಗರದ ಪ್ರಮುಖ ಬಡಾವಣೆಗಳ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಆದೇಶಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಿಯಾವುಲ್ಲಾ ರೆಹಮಾನ್, ನೀರಿನ ಕಿರಿಯ ಅಭಿಯಂತರರು ಗೌತಮ್, ಆರೋಗ್ಯ ಅಧಿಕಾರಿ ಪ್ರದೀಪ್, ಸಿ.ಕೆ. ಬಾಬು ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.