ಕೋಲಾರ

ವಕೀಲೆ ವಿರುದ್ಧ ರೌಡಿಶೀಟ್: ಕಲಾಪ ಬಹಿಷ್ಕರಿಸಿ, ಪ್ರತಿಭಟಿಸಿದ ವಕೀಲರು

Published On :

ಕೆಜಿಎಫ್: ಕೆಜಿಎಫ್ ಸಿವಿಲ್ ನ್ಯಾಯಾಲಯದ ವಕೀಲೆ ಹಾಗೂ ಬಾರ್ ಕೌನ್ಸಿಲ್ ಸದಸ್ಯೆ ವೆನ್ನಿಲಾ ವಿರುದ್ಧ ಉರಿಗಾಂ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಪವನ್‌ಕುಮಾರ್ ರೌಡಿಪಟ್ಟಿ ತೆರೆದಿರುವುದನ್ನು ಖಂಡಿಸಿ ಕೆಜಿಎಫ್ ವಕೀಲರ ಸಂಘದ ಉಪಾಧ್ಯಕ್ಷ ಗೋಪಿ ಅವರ ನೇತೃತ್ವದಲ್ಲಿ ವಕೀಲರು ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ವಕೀಲೆ ವೆನ್ನಿಲಾ ಅವರು ಯಾವುದೇ ಉಗ್ರ ಸಂಘಟನೆಗೆ ಸೇರಿದವರಲ್ಲ. ಯಾವುದೇ ಹತ್ಯೆ ಮುಂತಾದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿಲ್ಲ.  ಕೇವಲ ಸಾಮಾನ್ಯ ದೂರು ಬಂದಿರುವ ಹಿನ್ನಲೆಯಲ್ಲಿ ಅವರ ವಿರುದ್ಧ ಸಿಪಿಐ ಪವನ್‌ಕುಮಾರ್ ರೌಡಿ ಪಟ್ಟಿ ತೆರೆದಿದ್ದಾರೆ. ಅಲ್ಲದೆ ಎರಡು ದಿನಗಳ ಕಾಲ ಅವರನ್ನು ಠಾಣೆಗೆ ಕರೆಸಿ ಮಾನಸಿಕ ಕಿರುಕುಳ ನೀಡಿ, ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದ್ದರಿಂದ ಈ ಕೂಡಲೇ ವೆನ್ನಿಲಾ ಮೇಲೆ ಹಾಕಿರುವ ಪ್ರಕರಣವನ್ನು ಕೈಬಿಡಬೇಕು ಎಂದು ಒತ್ತಾಯಿಸಿ ವಕೀಲರು ನ್ಯಾಯಾಲಯದ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ವಕೀಲರಾದ ತಂಗರಾಜ್, ಜೀವಿತಾ, ನೂರ್‌ಜಾನ್, ತಿರುವರಂಗಮ್, ಜಿ.ವಿನೋದ್‌ಕುಮಾರ್, ಎಂ.ಅಸೋಕನ್, ಗಾಯತ್ರಿ, ಸಿ.ಆರ್. ವಿಜಯಕುಮಾರ್ ಮತ್ತಿತರರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.