ಲೋಕೋಪಯೋಗಿ ಇಲಾಖೆ ಅನುಮತಿ ಇಲ್ಲದೆ ವಿಭಜಕ ಧ್ವಂಸ: ಭುಗಿಲೆದ್ದ ವಿವಾದ
ಬಾಗೇಪಲ್ಲಿ: ಪಟ್ಟಣಕ್ಕೆ ಹೊರವಲಯದಲ್ಲಿ ಕರ್ನಾಟಕ ಗೃಹ ಮಂಡಳಿ ಖಾಸಗಿಯವರ ಸಹಭಾಗಿತ್ವದಲ್ಲಿ ನಿರ್ಮಿಸಿರುವ ಹೊಸ ಲೇ ಔಟ್‌ಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಲೋಕೋಪಯೋಗಿ ಇಲಾಖೆ ಅನುಮತಿಯಿಲ್ಲದೆ ರಸ್ತೆಯ ವಿಭಜಕವನ್ನು ಕಿತ್ತು ಹಾಕಿರುವ ಘಟನೆ ನಡೆದಿದೆ.
ಪಟ್ಟಣದ ಹೊರ ವಲಯದ ಜಡಲಭೈರವೇಶ್ವರ ಸ್ವಾಮಿ ದೇವಾಲಯದ ಸಮೀಪದಲ್ಲಿ ಕರ್ನಾಟಕ ಗೃಹ ಮಂಡಳಿ ಖಾಸಗಿ ಸಹಭಾಗಿತ್ವದಲ್ಲಿ ಹೊಸ ಲೇಔಟ್ ನಿರ್ಮಿಸಲಾಗಿದೆ. ಈಗಾಗಲೇ ಜಡಲ ಭೈರವೇಶ್ವರ ದೇವಾಲಯದ ಪಕ್ಕದಲ್ಲಿ ಮತ್ತು ಹೊಸಹುಡ್ಯ ರಸ್ತೆಯ ಸರ್ಕಾರಿ ಸಾರಿಗೆ ಸಂಸ್ಥೆ ಡಿಪೋ ಎದುರಿನಲ್ಲಿ ಒಂದೊಂದು ಸಂಪರ್ಕ ರಸ್ತೆಯನ್ನು ನಿರ್ಮಿಸಲಾಗಿದೆ. ಈಗ ಹೊಸದಾಗಿ ಷಾದಿ ಮಹಲ್ ಪಕ್ಕದಿಂದ ಲೇಔಟ್‌ಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ಬರುವ ಡಿವಿಜಿ ರಸ್ತೆಯಲ್ಲಿನ ವಿಭಜಕವನ್ನು ಜೆಸಿಬಿ ಯಂತ್ರ ಬಳಸಿ ಕಿತ್ತು ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಟಿ.ಬಿ. ಕ್ರಾಸ್‌ನಿಂದ ನ್ಯಾಷನಲ್ ಕಾಲೇಜಿನವರೆಗೂ ರಸ್ತೆ ನಿರ್ಮಿಸಿ, ಮಧ್ಯೆದಲ್ಲಿ ಡಿವೈಡರ್ ನಿರ್ಮಿಸಲಾಗಿದೆ. ಈ ಹಿಂದೆ ಅಲ್ಲಲ್ಲಿ ವಿಭಜಕಗಳನ್ನು ತೆರವುಗೊಳಿಸಿದ್ದನ್ನು ಗಮನಿಸಿದ ಲೋಕೋಪಯೋಗಿ ಇಲಾಖೆ ಎಲ್ಲಾ ಕಡೆಗಳಲ್ಲಿ ಮುಚ್ಚಿದ್ದಲ್ಲದೆ ಎಲ್ಲಾದರೂ ವಿಭಜಕವನ್ನು ತೆರವುಗೊಳಿಸಿದರೆ, ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿತ್ತು. ಆದರೆ, ಈಗ ಷಾದಿಮಹಲ್ ಸಮೀಪ ರಾತ್ರೋರಾತ್ರಿ ರಸ್ತೆ ವಿಭಜಕವನ್ನು ಜೆಸಿಬಿ ಬಳಸಿ ತೆರವುಗೊಳಿಸಿರುವುದು ಸಾರ್ವಜನಿಕರಲ್ಲಿ ಆಶ್ಚರ್ಯವನ್ನುಂಟು ಮಾಡಿದೆ. ಇಲಾಖೆಯ ಯಾವುದೇ ಪೂರ್ವಾನುಮತಿಯಿಲ್ಲದೆ ರಸ್ತೆ ವಿಭಜಕವನ್ನು ಕಿತ್ತುಹಾಕಿರುವುದು ವಿವಾದಕ್ಕೆ ತಿರುಗುತ್ತಿದೆ. ಯಾವುದೇ ಪೂರ್ವಾನುಮತಿಯಿಲ್ಲದೇ ಅಕ್ರಮವಾಗಿ ರಸ್ತೆ ವಿಭಜಕವನ್ನು ಕಿತ್ತು ಹಾಕಿರುವವರ ವಿರುದ್ಧ ಕ್ರಮ ಜರುಗಿಸುವಂತೆ ಲೋಕೋಪಯೋಗಿ ಇಲಾಖೆ ಎಇ ನಾರಾಯಣ ರೆಡ್ಡಿ ಪೊಲೀಸರಿಗೆ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

