ಕೋಲಾರ

ಪರಮಶಿವಯ್ಯ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

Published On :


ಕೋಲಾರ: ಬಯಲು ಸೀಮೆ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆಗೆ ಬದಲು ಪರಮಶಿವಯ್ಯ ವರದಿ ಆಧಾರಿತ ಯೋಜನೆ ಜಾರಿಗೆ ತರಬೇಕೆಂದು ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ನಗರದ ಸರ್ಕಾರಿ ಬಸ್ ನಿಲ್ದಾಣ ಬಳಿ  ಪ್ರತಿಭಟನೆ ನಡೆಸಿ ಜನಪ್ರತಿನಿಧಿಗಳ ಭೂತದಹನ ಮಾಡಿದರು.
ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ರಾಜ್ಯ ಸರ್ಕಾರ ವಿಫಲವಾಗಿದೆ ಹಾಗೂ ಜನಪ್ರತಿನಿಧಿಗಳು ಈ ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆಂದು ಪ್ರತಿಭಟನಾಕಾರರು ದೂರಿದರು.
ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸದ ಸರ್ಕಾರದ ಧೋರಣೆ ಖಂಡಿಸಿ ಶ್ರೀನಿವಾಸಪುರ ತಾಲೂಕಿನ ನೀಲಟೂರು ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರ ನಾಮಫಲಕ ಹಾಕಿದ್ದಾರೆ, ಇದನ್ನೇ ಮಾರ್ಗದರ್ಶನವಾಗಿಟ್ಟುಕೊಂಡು ಜಿಲ್ಲೆಯ ಎಲ್ಲಾ ಗ್ರಾಮಗಳ ರೈತರು, ಕೂಲಿಕಾರ್ಮಿಕರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳು ಸೇರಿ ಸಾರ್ವತ್ರಿಕ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಗೆ ನೀಡಿದರು.
ಮುಖಂಡರಾದ ಕೋಟಿಗಾನಹಳ್ಳಿ ಗಣೇಶ್ ಗೌಡ, ಸಿ.ವಿ.ಪ್ರಭಾಕರ್ ಗೌಡ, ಡಿ. ಕೃಷ್ಣಪ್ಪ, ಮುನಿವೆಂಕಟಪ್ಪ, ಚೌಡೇಗೌಡ, ನಾರಾಯಣಸ್ವಾಮಿ, ಮುಜೀಬಬ್ಪಾಷ, ವೀರಾಪುರ ಮಂಜುನಾಥ್, ವೆಂಕಟಚಲಪತಿ, ಕೂತಂಡಹಳ್ಳಿ ನಾರಾಯಣಸ್ವಾಮಿ, ಅಗ್ರಹಾರ ಸೋಮೇನಹಳ್ಳಿ ನಾರಾಯಣಸ್ವಾಮಿ, ಬಂಗಾರಪೇಟೆ ತಾಲ್ಲೂಕು ಅಧ್ಯಕ್ಷ ತೊರಗನದೊಡ್ಡಿ ಮಂಜುನಾಥ್, ಶ್ರೀನಿವಾಸಪುರ ತಾಲೂಕು ಅಧ್ಯಕ್ಷ ಕೃಷ್ಣಾರೆಡ್ಡಿ, ಎಂ. ಜಗದೀಶ್, ನಾಗೇಶ್ ಗೌಡ, ಲಕ್ಷ್ಮಯ್ಯಗೌಡ, ಮುದ್ದೇಗೌಡ, ಕೆ.ಎಚ್. ವೆಂಕಟಪ್ಪ, ರಾಮೇಗೌಡ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.