ಆರ್ಎಸ್ಎಸ್ ವಿಚಾರದ ಪುಸ್ತಕಗಳಿಗೆ ವಿರೋಧ
ಕೋಲಾರ: ಪ್ರೊ.ಹಂಪಣ್ಣ ನೇತೃತ್ವದ ಸಮಿತಿ ಸರ್ಕಾರಿ ಪ್ರೌಢಶಾಲಾ ಗ್ರಂಥಾಲಯಗಳಿಗೆ ಆರೆಸ್ಸೆಸ್ ವಿಚಾರಧಾರೆಗಳಿರುವ ಪುಸ್ತಕಗಳನ್ನು ಸರಬರಾಜು ಮಾಡಲು ಶಿಫಾರಸ್ಸು ಮಾಡಿರುವುದನ್ನು ಖಂಡಿಸಿ ಎಸ್ಎಫ್ಐ ಮತ್ತು ಡಿವೈಎಫ್ಐ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿನ ತಪ್ಪುಗಳನ್ನು ಸರಿಪಡಿಸಿ ಶಿಕ್ಷಣ ಕ್ಷೇತ್ರವನ್ನು ಶುದ್ಧೀಕರಿಸಿ ವೈಚಾರಿಕ ಸಾಹಿತ್ಯಗಳನ್ನು ಗ್ರಂಥಾಲಯಗಳಿಗೆ ಸರಬರಾಜು ಮಾಡುವ ಬದಲು ಕೋಮು ದ್ವೇಷ ಬಿತ್ತುವ ಪುಸ್ತಕಗಳನ್ನು ಸರಬರಾಜು ಮಾಡಲು ಕಾಂಗ್ರೆಸ್ ಸರ್ಕಾರ ಚಿಂತನೆ ಮಾಡುತ್ತಿರುವುದು ಸರಿಯಲ್ಲವೆಂದರು.ಎಸ್ಎಫ್ಐ ಜಿಲ್ಲಾಧ್ಯಕ್ಷ ಕೆ. ವಾಸುದೇವರೆಡ್ಡಿ, ರಾಜ್ಯ ಸಮಿತಿ ಸದಸ್ಯ ಸಿ. ಅಮರೇಶ್, ತಾಲೂಕು ಅಧ್ಯಕ್ಷ ಮುಸ್ತಾಫ್, ಕಾರ್ಯದರ್ಶಿ ಎನ್. ಮಾರ್ಕಂಡಯ್ಯ, ಡಿವೈಎಫ್ಐ ಜಿಲ್ಲಾ ಉಪಾಧ್ಯಕ್ಷ ವಿಜಯಕೃಷ್ಣ ಇದ್ದರು.
ಡಿಸಿಸಿ ಬ್ಯಾಂಕ್ ಮತ ಎಣಿಕೆ ನಾಳೆ
ಕೋಲಾರ: ರಾಜ್ಯ ಹೈಕೋರ್ಟ್ನ ನಿರ್ದೇಶನದಂತೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರ ಚುನಾವಣೆಯ ಮತ ಎಣಿಕೆ ಕಾರ್ಯ ಮಾ.3ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ಕೋಲಾರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ ಎಂದು ಚುನಾವಣಾಧಿಕಾರಿಗಳಾದ ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ. ಕಳೆದ ವರ್ಷ ನವೆಂಬರ್ನಲ್ಲಿ ಡಿಸಿಸಿ ಬ್ಯಾಂಕಿನ ಅದ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಜೆಡಿಎಸ್ನ ನಾಗನಾಳ ಸೋಮಣ್ಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಮುಂದಿನ ತೀರ್ಪು ಪ್ರಕಟಣೆಯವರೆಗೆ ಫಲಿತಾಂಶ ಪ್ರಕಟಿಸದಂತೆ ಸೂಚಿಸಿತ್ತು. ಇದರಿಂತೆ ಮತಗಳನ್ನು ಪ್ರತ್ಯೇಕ ಮತಪಟ್ಟಿಗೆಯಲ್ಲಿ ಇಟ್ಟು ಮೊಹರು ಹಾಕಲಾಗಿತ್ತು. ಇದೀಗ ನ್ಯಾಯಾಲಯ ನಾಮಿನಿಗಳ ಮತ ಎಣಿಕೆಗೆ ಅನುಮತಿ ನೀಡಿರುವುದರಿಂದ ಮತ ಎಣಿಕೆ ಮಾ.3ಕ್ಕೆ ನಿಗದಿ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

