ಕೋಲಾರ

ನಾಡು-ನುಡಿಗೀತೆ ಅಭಿಯಾನ ಕಾರ್ಯಕ್ರಮ

Published On :

ಚಿಂತಾಮಣಿ: ಭಾರತೀಯ ಸಂಸ್ಕೃತಿ, ಸಂಗೀತ, ಸಾಹಿತ್ಯ, ಕಲೆ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿ ದೇಶಾಭಿಮಾನ ಬೆಳೆಸಿ ಎಂದು ಸರ್ವ ಶಿಕ್ಷಣ ಅಭಿಯಾನ ಜಿಲ್ಲಾ ಉಪ ಸಮನ್ವ ಅಧಿಕಾರಿ ಚಂದ್ರಶೇಖರಬಾಬು ಅಭಿಪ್ರಾಯಪಟ್ಟರು.
ಸರ್ಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ 3 ದಿನಗಳ ನಾಡು-ನುಡಿಗೀತೆ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿ, ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ನಾಡು-ನುಡಿ ಅಭಿರುಚಿ ಮೂಡಿಸುವ ಈ ತರಬೇತಿ ಖ್ಯಾತ ಸಿನಿಮಾ ಗಾಯಕಿಯರಿಂದ ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು. ಅಭಿಯಾನಕ್ಕೆ ಚಾಲನೆ ನೀಡಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ. ರಂಗಯ್ಯ ಮಾತನಾಡಿದರು. ಗಾಯಕಿ ಜ್ಯೋತಿರವಿಪ್ರಕಾಶ್ ಮಾತನಾಡಿದರು. ಪ್ರವಚನಕಾರ ಟಿ.ಎಲ್. ಆನಂದ್, ಗಾಯಕಿ ಸುಮಾಪ್ರಸಾದ್, ಅನಿರುದ್ಧ, ಶಿವಾರೆಡ್ಡಿ, ಕೃಷ್ಣಮೂರ್ತಿ ಇದ್ದರು.

ಜಾನಪದ ಅಕಾಡೆಮಿಗೆ ಸೂಕ್ತ ಆಯ್ಕೆ


ಕೋಲಾರ: ರಾಜ್ಯ ಜಾನಪದ ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ಖ್ಯಾತ ಗಾಯಕ ಪಿಚ್ಚಳ್ಳಿ ಶ್ರೀನಿವಾಸ್ ಆಯ್ಕೆ ಸೂಕ್ತವಾಗಿದೆ ಎಂದು ಜಿಲ್ಲಾ ಅಹಿಂದ ಸಂಚಾಲಕ ಎಂ. ಅಶ್ವತ್ಥನಾರಾಯಣಗೌಡ ತಿಳಿಸಿದ್ದಾರೆ. ಜಾನಪದ ಕಲಾವಿದ, ಹೋರಾಟದ ಹಾಡುಗಳ ಮೂಲಕ ನಾಡಿನ ಜನರ ಗಮನ ಸೆಳೆದಿರುವ ಪಿಚ್ಚಹಳ್ಳಿ ಶ್ರೀನಿವಾಸ್ ಅವರನ್ನು ನೇಮಕ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಷಿತರ ಬಗ್ಗೆ ಇರುವ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ನೂತನ ಅಧ್ಯಕ್ಷರು ರಾಜ್ಯದಲ್ಲಿ ಜಾನಪದ ಕಲೆಯನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸುವ ಮೂಲಕ ರಾಜ್ಯ ಸರ್ಕಾರದ ಆಶಯಗಳನ್ನು ಸಕಾರಗೊಳಿಸಬೇಕೆಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇವರು ತಮ್ಮ ವೃತ್ತಿ ಬದುಕಿನಲ್ಲಿ ತೋರಿದ ಪ್ರಾಮಾಣಿಕ, ಶಿಸ್ತಿನ, ಕಠಿಣ ಪರಿಶ್ರಮದ ಮತ್ತು ವೃತ್ತಿ ಬದ್ಧತೆಯಿಂದ ಈ ಹಂತಕ್ಕೆ ಬೆಳೆದಿದ್ದು, ಜಿಲ್ಲೆಗೆ ಸಂದ ಗೌರವವಾಗಿರುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.