ಕೋಲಾರ

ಲೋಕಸಭಾ ಚುನಾವಣೆಗೆ ಸಿದ್ಧರಾಗಿ

Published On :

ಶಿಡ್ಲಘಟ್ಟ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಯಶಸ್ವಿಯಾಗಿ ನಡೆಸಲು ಅಧಿಕಾರಿಗಳು ಸಿದ್ಧರಾಗಬೇಕೆಂದು ಜಿಲ್ಲಾಧಿಕಾರಿ ವಿಶಾಲ್ ಸೂಚಿಸಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲೂಕುಗಳ ಅಧಿಕಾರಿಗಳನ್ನೊಳಗೊಂಡ ಸಭೆಯಲ್ಲಿ ಮಾತನಾಡಿದ ಅವರು, 2014 ರ ಲೋಕಸಭಾ ಚುನಾವಣೆಯನ್ನು ಯಶಸ್ವಿಯಾಗಿ ನಡೆಸುವ ದೃಷ್ಟಿಯಿಂದ ಎಲ್ಲಾ ಅಧಿಕಾರಿಗಳು ಪ್ರಾಮಾಣಿಕರಾಗಿ ಕಾರ್ಯ ನಿರ್ವಹಿಸಬೇಕು, ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಾಗಲಿ, ಯಾವುದೇ ಪಕ್ಷದ ಅಭ್ಯರ್ಥಿಗಳಿಗೆ ಮತಗಳನ್ನು ನೀಡುವಂತೆ ಪ್ರಚೋದನೆ ಮಾಡಬಾರದು, ನೀತಿ ಸಂಹಿತೆ ಜಾರಿಯಲ್ಲಿರುವಾಗ ಅದಕ್ಕೆ ವಿರುಧ್ದವಾಗಿ ಕೆಲಸ ಮಾಡುವಂತಹವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕೆಂದರು.
ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲೂಕುಗಳೆರಡು ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವುದರಿಂದ ಸ್ಥಳೀಯವಾಗಿರುವ ಅಧಿಕಾರಿಗಳು ಚುನಾವಣೆ ಮುಗಿಯುವವರೆಗೂ ಬೇರೆ ಕಡೆಗೆ ನಿಯೋಜನೆ ಮಾಡಿಸಿಕೊಳ್ಳಬೇಕು, ಸತತವಾಗಿ ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಬೇರೆ ಕಡೆಗೆ ಹೋಗಬೇಕು.
 ಚುನಾವಣೆಯಾದ ನಂತರ ನೀವು ನಿಮ್ಮ ಮೂಲಸ್ಥಾನಕ್ಕೆ ಬರಬಹುದು.
  ಅಧಿಕಾರಿಗಳನ್ನು ಯಾವ ಯಾವ ಕೆಲಸದ ಮೇರೆಗೆ ನಿಯೋಜನೆ ಮಾಡಲಾಗಿರುತ್ತದೋ ಅಂತಹ ಕೆಲಸ ಮಾಡುವಾಗ ಯಾವುದೇ ಒತ್ತಡ, ಪ್ರಭಾವಗಳಿಗೆ ಒಳಗಾಗದಂತೆ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳು ಬಹಳ ಜಾಗ್ರತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು. ಕೋಲಾರ ಜಿಲ್ಲಾಧಿಕಾರಿ ರವಿ ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಹಾಗೂ ಶಿಡ್ಲಘಟ್ಟ ತಾಲೂಕುಗಳು ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿದವುಗಳಾಗಿದ್ದು, ಯಾವುದೇ ಗೊಂದಲಗಳಿಲ್ಲದೆ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಬೇಕಾಗಿರುವುದರಿಂದ ಎಲ್ಲಾ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.
 ಸಭೆಯಲ್ಲಿ ಶಿಡ್ಲಘಟ್ಟ ತಹಸೀಲ್ದಾರ್ ಜಿ.ಎ. ನಾರಾಯಣಸ್ವಾಮಿ ಸೇರಿದಂತೆ ಚಿಂತಾಮಣಿ ಹಾಗೂ ಶಿಡ್ಲಘಟ್ಟ ತಾಲೂಕಿನ ಎಲ್ಲಾ ಅಧಿಕಾರಿಗಳು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.