60 ನೇ ತಿಂಗಳ ಸಾಹಿತ್ಯ, ಸಾಂಸ್ಕೃತಿಕ ಸಂಭ್ರಮ
ಮಾಲೂರು: ದೇಶ ಸುಭಿಕ್ಷತೆಯಿಂದ ಇರಬೇಕಾದರೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಬಾಪೂಜಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಂ.ವಿ. ಹನುಮಂತಯ್ಯ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸ್ಥಳೀಯ ಚೈತನ್ಯಕಲಾನಿಕೇತನ ಆಯೋಜಿಸಿದ್ದ 60 ನೇ ತಿಂಗಳ ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಂಭ್ರಮ-ಕವಿಗೋಷ್ಠಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದಲ್ಲಿ ನಡೆದಿರುವ ಹೋರಾಟಗಳಿಗೆ ಪ್ರೇರಣಾತ್ಮಕವಾಗಿ ಸಾಹಿತ್ಯ ಚಟುವಟಿಕೆಗಳು ಪ್ರಭಾವ ಬೀರಿದ್ದು, ಜನತೆಯಲ್ಲಿ ಜಾಗೃತಿ ಮೂಡಿಸುವಂಹ ಕೆಲಸ ಮಾಡಿವೆ ಎಂದರು. ಸಂಸ್ಥೆಯ ಅಧ್ಯಕ್ಷ ಹಾಗೂ ಕವಿ ಜ.ಮು. ಚಂದ್ರ ಪ್ರಾಸ್ಥಾವಿಕ ನುಡಿಗಳನ್ನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ. ವೆಂಕಟೇಶಪ್ಪ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಕಲಾ ಪದವಿ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದು, ಏಳು ಚಿನ್ನದ ಪದಕ ಗಳಿಸಿದ್ದ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿ ಚವರಮಂಗಲ ಗ್ರಾಮದ ತಿಮ್ಮರಾಯಪ್ಪ ರವರನ್ನು ಅತ್ಮೀಯವಾಗಿ ಸನ್ಮಾನಿಸಲಾಯಿತು. ಕರವೇ ಗೌರವಾಧ್ಯಕ್ಷ ಕಲಾವಿದ ಸ್ವಾಮಿ, ಬಂಗಾರಪೇಟೆ ಕವಿ ಕಾವ್ಯ ವೇದಿಕೆಯ ಅಧ್ಯಕ್ಷ ಜಿ.ಟಿ. ರಾಮಚಂದ್ರಪ್ಪ, ಕಾರ್ಯದರ್ಶಿ ಲಕ್ಷ್ಮಯ್ಯ, ಕೋಲಾರ ಚಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಣಬೆ ಪಾಪೇಗೌಡ, ಸಿರಿಗನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಗಬ್ಬೂರ್ ಇದ್ದರು.ನಂತರ ನಡೆದ ಕವಿಗೋಷ್ಠಿಯಲ್ಲಿ ಡಾ.ನಾ. ಮುನಿರಾಜು, ದೊಡ್ಡಕಲ್ಲಹಳ್ಳಿ ನಾರಾಯಣಪ್ಪ,ಬಿ.ಎಚ್. ಸುರೇಶ್, ಶೀನಿಧಿ ಶ್ರೀನಿವಾಸ್, ಸತೀಶ್ ಕಾಟೇರಿ, ಲಕ್ಷ್ಮಿಕಾಂತ್, ತಿಮ್ಮಸಂದ್ರ ನಾಗರಾಜ್, ಡಾ. ವೇಣುಗೋಪಾಲ್, ಕೃಷ್ಣನಾಯಕ್, ಕುಂತೂರು ಚಂದ್ರಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

