ಕೋಲಾರ

ಸಚಿವರ ಹೇಳಿಕೆ ಖಂಡಿಸಿ ಪ್ರತಿಭಟನೆ

Published On :

ಮಾಲೂರು: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರನ್ನು ನಪುಂಸಕ ಎಂಬ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಸಲ್ಮಾನ್ ಖುರ್ಷಿದ್ ಅವರ ಹೇಳಿಕೆ ಖಂಡಿಸಿ ಇಲ್ಲಿನ ಬಿಜೆಪಿ ಯುವ ಮೋರ್ಚಾ ಸೋಮವಾರ ರಸ್ತೆ ತಡೆ ನಡೆಸಿದರು.
ಪಟ್ಟಣದ ಮಹಾರಾಜ ವೃತ್ತದಿಂದ ಮಾರಿಕಾಂಬ ವೃತ್ತದ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ವೃತ್ತದಲ್ಲಿ ಕೇಂದ್ರ ಸಚಿವ ಖುರ್ಷಿದ್ ರವರ ಪ್ರತಿಕೃತಿ ದಹನ ಮಾಡಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ಸುಬ್ರಮಣ್ಯರೆಡ್ಡಿ, ದೇಶದಲ್ಲಿ ಸುನಾಮಿಯಂತೆ ಎದ್ದಿರುವ ಮೋದಿ ಹವಾ ತಡೆಯಲಾಗದೆ ಕಾಂಗ್ರೆಸ್ ಮುಖಂಡರು ಅತಿರೇಕದ ಹೇಳಿಕೆನೀಡುತ್ತಿದ್ದಾರೆ.
ಹಿರಿಯ ಸಚಿವ ಈ ರೀತಿಯಲ್ಲಿ ಕೀಳು ಮಟ್ಟದ ಭಾಷೆ ಪ್ರಯೋಗ ಮಾಡುತ್ತಿದ್ದಾರೆ ಎಂದರೆ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಸೋಲಿನ ಅರಿವು ಉಂಟಾಗಿದೆ ಎಂದರು.
ಜಿಪಂ ಮಾಜಿ ಸದಸ್ಯ ರಾಮೇಗೌಡ ಮಾತನಾಡಿ, ಮೋದಿ ಅವರ ವರ್ಚಸ್ಸು ತಡೆಯಲಾಗದೆ ಕೀಳು ಮಟ್ಟದ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ತಮ್ಮ ಚಾಳಿ ನಿಲ್ಲಿಸಿದರೆ ಸರಿ. ಇಲ್ಲದಿದ್ದರೆ ಯುವ ಬಿಜೆಪಿ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.
ಜಿಲ್ಲಾ ಯುವ ಮೋರ್ಚಾದ ಕಾರ್ಯದರ್ಶಿ ಪ್ರಮೋದ್, ತಾಲೂಕು ಅಧ್ಯಕ್ಷ ಅಪ್ಪಿರಾಜು, ಪುರಸಭೆ ಸದಸ್ಯ ರಾಮಮೂರ್ತಿ, ಭಾರತಮ್ಮ, ಹನುಮಂತ ರೆಡ್ಡಿ, ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.