ಕೋಲಾರ

'ಸರ್ಕಾರಿ ಯೋಜನೆ ಸದ್ಬಳಕೆಯಾಗಲಿ'

Published On :

ಗುಡಿಬಂಡೆ: ರೈತರಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ವಿವಿಧ ಇಲಾಖೆಗಳ ಮೂಲಕ ಜಾರಿಗೆ ತರುತ್ತಿದ್ದು, ಇವುಗಳ ಸೌಲಭ್ಯವನ್ನು ರೈತರು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಅಭಿವೃದ್ಧಿ ಹೊಂದಬೇಕೆಂದು ಸ್ಥಳೀಯ ವಾಹಿನಿ ಅಭಿವೃದ್ಧಿ ಸಂಸ್ಥೆಯ ಯೋಜನಾ ನಿರ್ದೇಶಕ ಎಚ್.ಆರ್. ಸುರೇಶ್ ಸಲಹೆ ನೀಡಿದರು.
ಪಟ್ಟಣದ ಆದಿನಾರಾಯಣಸ್ವಾಮಿ ಕಲ್ಯಾಣ ಮಂಟಪದಲ್ಲಿ ತೋಟಗಾರಿಕಾ ಇಲಾಖೆ ಹಮ್ಮಿಕೊಂಡಿದ್ದ ಹಣ್ಣು ತರಕಾರಿಗಳ ಸಂಸ್ಕರಣೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ರೈತರು ಬೇಳೆಯುವ ಹಣ್ಣು ತರಕಾರಿಗಳಿಂದ ವಿವಿಧ ರೀತಿಯ ಪದಾರ್ಥಗಳನ್ನು ತಯಾರಿಸಿ ಅದರಿಂದ ಹೆಚ್ಚು ಲಾಭ ಗಳಿಸಬಹುದಾಗಿದೆ. ಆದರೆ ತರಬೇತಿ ಕೊರತೆಯಿಂದಾಗಿ ರೈತರು ತಾವು ಬೆಳೆದ ತರಕಾರಿ ಹಣ್ಣುಗಳನ್ನು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಿ, ಖಾಸಗಿ ಸಂಸ್ಥೆಗಳು ರೈತ ಬೆಳೆದ ಬೆಳೆಯಿಂದಲೇ ತಯಾರಿಸಿರುವ ವಿವಿಧ ಪದಾರ್ಥಗಳನ್ನು ಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ರೈತರು ಕೇವಲ ಹಣ್ಣು ತರಕಾರಿಗಳನ್ನು ಬೆಳೆಯುವುದು ಮಾತ್ರವಲ್ಲದೇ, ಅವುಗಳಿಂದ ತಯಾರಿಸಬಹುದಾದ ಪದಾರ್ಥಗಳ ಬಗ್ಗೆ ತರಬೇತಿ ಪಡೆಯುವುದು ಅವಶ್ಯಕವಾಗಿದೆ ಎಂದರು.
ತಾಪಂ ಸದಸ್ಯ ನಾರಾಯಣಸ್ವಾಮಿ, ರೈತರು ಮಾರುಕಟ್ಟೆಯಲ್ಲಿ ಮಾರುವ ಹಣ್ಣು ತರಕಾರಿಗಳನ್ನೇ ಖಾಸಗಿ ಸಂಸ್ಥೆಗಳು ಕಡಿಮೆ ಬೆಲೆಗೆ ಖರೀದಿ ಮಾಡಿ, ಅವುಗಳಿಂದ ವಿವಿಧ ರೀತಿಯ ಪದಾರ್ಥಗಳನ್ನು ಮಾಡಿ ಹೆಚ್ಚು ಲಾಭಕ್ಕೆ ಅದೇ ರೈತನಿಗೆ ಮಾರುತ್ತಿದ್ದಾರೆ ಆದರೆ ರೈತನೆ ಯಾವ ರೀತಿ ಆಹಾರ ಪದಾರ್ಥಗಳನ್ನು ತಯಾರಿ ಮಾಡಬಹುದು ಎಂಬುದನ್ನು ತಿಳಿದುಕೊಂಡರೇ ತಮ್ಮ ಮನೆಯಲ್ಲಿಯೇ ಅವುಗಳನ್ನು ತಯಾರಿಸಿಕೊಳ್ಳಬಹುದಾಗಿ ಎಂದರು.
ಈ ಸಂದರ್ಭದಲ್ಲಿ ಪಟ್ಟಣ ಹಾಗೂ ಗ್ರಾಮಗಳಿಂದ ಬಂದಿದ್ದ ಮಹಿಳಾ ಸಂಘಗಳ ಸದಸ್ಯರು ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ತಯಾರಿಸುವ ಬಗ್ಗೆ ತರಬೇತಿ ಪಡೆದರು. ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್, ಎಲ್ಲೋಡು ಗ್ರಾಪಂ ಸದಸ್ಯ ಅಶ್ವತ್ಥರೆಡ್ಡಿ, ಸೋಮೇನಹಳ್ಳಿ ಎ.ಇ. ಪ್ರಸಾದ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.