ಕೋಲಾರ

ಆಟೋ ಪಲ್ಟಿ; ಮಹಿಳೆ ಸಾವು

Published On :

ಚಿಂತಾಮಣಿ: ಸರಕು ಸಾಗಾಣಿಕೆ ಆಟೋದಲ್ಲಿ ತರಕಾರಿ ತುಂಬಿಕೊಂಡು ಮಾರುಕಟ್ಟೆಗೆ ಹೋಗುತ್ತಿದ್ದ ವಾಹನ ಪಲ್ಟಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯ ನಲಮಾಚನಹಳ್ಳಿ ಗೇಟ್ ಬಳಿ ಸೋಮವಾರ ನಡೆದಿದೆ.
ಚಿಂತಾಮಣಿ-ಬಾಗೇಪಲ್ಲಿ ಮಾರ್ಗದ ನಲಮಾಚನಹಳ್ಳಿ ಗೇಟ್ ಬಳಿ ಶಿಡ್ಲಘಟ್ಟ ತಾಲೂಕಿನ ನಾಚಗಾನಹಳ್ಳಿ ಗ್ರಾಮದ ಶೋಭ(24) ಎಂಬವರು ಚಿಂತಾಮಣಿ ನಗರಕ್ಕೆ ಸೊಪ್ಪು ಮಾರಾಟ ಮಾಡಲು ಆಟೋದಲ್ಲಿ ಸೊಪ್ಪಿನ ಕಟ್ಟುಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿ ಹೊಡೆದು ಮಹಿಳೆ ವಾಹನ ಕೆಳಗೆ ಸಿಕ್ಕಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವಾಹನ ವಶಪಡಿಸಿಕೊಂಡು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಧ್ವಜಾರೋಹಣದ ಕಂಬ ಕಳವು
ಗುಡಿಬಂಡೆ: ರಾಷ್ಟ್ರೀಯ ಹಬ್ಬಗಳ ದಿನಗಳಲ್ಲಿ ಧ್ವಜಾರೋಹಣ ಮಾಡಲು ಪಟ್ಟಣದ ತಾಲೂಕು ಕಚೇರಿ ಮುಂಭಾಗ ನೆಟ್ಟಿದ್ದ ಪೈಪನ್ನು ದುಷ್ಕರ್ಮಿಗಳು ಕಳವು ಮಾಡಿರುವ ಘಟನೆ ನಡೆದಿದೆ. ಈ ಸ್ಥಳಕ್ಕೆ ಕೂಗಳತೆ ದೂರದಲ್ಲಿ ಪೊಲೀಸ್ ಠಾಣೆ ಇದ್ದರೂ ಕೃತ್ಯ ಎಸಗಿರುವುದು ಪೊಲೀಸರ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡಿಸುವಂತಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.