ಖುರ್ಷಿದ್ವಿರುದ್ಧ ಬಿಜೆಪಿ ಪ್ರತಿಭಟನೆ
ಕೋಲಾರ: ಇತ್ತೀಚೆಗೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರ ಸಚಿವ ಖುರ್ಷಿದ್ ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಕೋಲಾರದಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನರೇಂದ್ರ ಮೋದಿಯನ್ನು ನಪುಂಸಕ ಎಂದು ಖುರ್ಷಿದ್ ಟೀಕಿಸುವ ಮೂಲಕ ಕಾಂಗ್ರೆಸ್ ಸಂಸ್ಕೃತಿಯನ್ನು ಹೊರ ಹಾಕಿದ್ದಾರೆಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಓಂಶಕ್ತಿ ಚಲಪತಿ ತಿರುಗೇಟು ನೀಡಿದರು.
ಖುರ್ಷಿದ್ ಕೂಡಲೇ ಕ್ಷಮೆಯಾಚಿಸದಿದ್ದರೆ ದೇಶಾಧ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ ಮುಖಂಡರಾದ ಜಯಂತಿಲಾಲ್, ಜಮೀಲ್, ಮಮತ, ರತ್ನಮ್ಮ ಇನ್ನಿತರರು ಇದ್ದರು.
ಗ್ರಾಮ ಲೆಕ್ಕಾಧಿಕಾರಿ ಲೋಕಾ ಬಲೆಗೆ
ಬಂಗಾರಪೇಟೆ: ಜಮೀನು ಖಾತೆ ಬದಲಾವಣೆಗಾಗಿ ರೈತರೊಬ್ಬರಿಂದ ನಾಲ್ಕು ಸಾವಿರ ಲಂಚ ಪಡೆಯುವಾಗ ಗ್ರಾಮ ಲೆಕ್ಕಾಧಿಕಾರಿಯೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣ ಸೋಮವಾರ ಸಂಜೆ ನಡೆದಿದೆ. ತಾಲೂಕಿನ ಕಾಮಸಮುದ್ರ ಹೋಬಳಿಯ ತೊಪ್ಪನಹಳ್ಳಿ ಕಂದಾಯ ವೃತ್ತದ ಗ್ರಾಮ ಲೆಕ್ಕಾಧಿಕಾರಿ ಕೆ.ವಿ. ಜಗದೀಶ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ತೊಪ್ಪನಹಳ್ಳಿ ಪಂಚಾಯ್ತಿ ಚಾಮನಹಳ್ಳಿ ಗ್ರಾಮದ ರಾಮರೆಡ್ಡಿ ಎಂಬುವರ ಖಾತೆ ಬದಲಾವಣೆಗಾಗಿ ಎರಡು ತಿಂಗಳ ಹಿಂದೆ ಗ್ರಾಮ ಲೆಕ್ಕಾಧಿಕಾರಿ ಜಗದೀಶ್ರನ್ನು ಸಂಪರ್ಕಿಸಿದ್ದರು. ಆದರೆ ಜಗದೀಶ್ ಖಾತೆ ಬದಲಾವಣೆಗಾಗಿ 15 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ರಾಮರೆಡ್ಡಿ ಮೊದಲ ಕಂತಿನಂತೆ ನಾಲ್ಕು ಸಾವಿರ ಕೊಟ್ಟಿದ್ದು, ಸೋಮವಾರ ಕಾಮಸಮುದ್ರ ನಾಡ ಕಚೇರಿಯ ಬಳಿ ನಾಲ್ಕು ಸಾವಿರ ಹಣ ನೀಡುವಾಗ ಕೋಲಾರದ ಲೋಕಾಯುಕ್ತ ಎಸ್ಪಿ ಮೋಹನ್ ದಾಸ್ ನೇತೃತ್ವದಲ್ಲಿ ದಾಳಿ ಮಾಡಿ ಗ್ರಾಮ ಲೆಕ್ಕಾಧಿಕಾರಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ದಾಳಿಯಲ್ಲಿ ಡಿವೈಎಸ್ಪಿ ರಾಮಮೂರ್ತಿ, ವೃತ್ತ ನಿರೀಕ್ಷಕ ಅಶ್ವತ್ಥನಾರಾಯಣ ಮತ್ತು ಸಿಬ್ಬಂದಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

