ಅಂಗನವಾಡಿಯಲ್ಲಿ ಮದ್ಯಮಾರಾಟ; ಶಿಕ್ಷಕಿ ವರ್ಗಾವಣೆಗೆ ಆಗ್ರಹ
ಗುಡಿಬಂಡೆ: ತಾಲೂಕಿನ ಚೌಟಕುಂಟಹಳ್ಳಿ ಅಂಗನವಾಡಿ ಕೇಂದ್ರದ ಶಿಕ್ಷಕಿ ರಾತ್ರಿ ವೇಳೆ ಅಂಗನವಾಡಿ ಕೇಂದ್ರದಲ್ಲಿ ಮದ್ಯಮಾರಾಟ ಮಾಡುತ್ತಿದ್ದು, ಮಕ್ಕಳಿಗೆ, ಬಾಣಂತಿಯರಿಗೆ, ಗರ್ಭಿಣಿಯರಿಗೆ ಪಡಿತರ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಅಂಗನವಾಡಿ ಕೇಂದ್ರಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಅಂಗನವಾಡಿ ಶಿಕ್ಷಕಿ ಸುಜಾತಮ್ಮ ಚೌಟಕುಂಟಹಳ್ಳಿ ಗ್ರಾಮದಲ್ಲಿ 22 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಕಳೆದ 6 ತಿಂಗಳಿಂದ ಅಂಗನವಾಡಿ ಕೇಂದ್ರಕ್ಕೆ ಸರಿಯಾಗಿ ಬರುವುದಿಲ್ಲ. ಅಂಗನವಾಡಿ ಕೇಂದ್ರದ ಬೀರುವಿನಲ್ಲಿ ಮದ್ಯದ ಬಾಟಲಿಗಳನ್ನು ಇಟ್ಟು ಮಾರಾಟ ಮಾಡಿದ್ದಾರೆ ಎಂದು ಗ್ರಾಮದ ಚಿಕ್ಕಪ್ಪಯ್ಯ ದೂರಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಕೇಳಿದರೆ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮಕ್ಕಳಿಗೆ, ಬಾಣಂತಿಯರಿಗೆ, ಗರ್ಭಿಣಿಯರಿಗೆ ಪ್ರತಿ ತಿಂಗಳು ಬರುವ ಪಡಿತರ ನೀಡುತ್ತಿಲ್ಲ. ಹೆಣ್ಣು ಮಕ್ಕಳ ಭಾಗ್ಯಲಕ್ಷ್ಮಿ ಬಾಂಡ್ ಮಾಡಿಸಬೇಕಾದರೆ ಲಂಚನೀಡಬೇಕು, ಅಂಗವಾಡಿ ಕೇಂದ್ರಕ್ಕೆ ಬಂದಿರುವ ಗ್ಯಾಸ್ ಸಿಲಿಂಡರ್ ಅವರ ಸ್ವಂತಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿಚಾರಿಸಿದರೆ ನಿಂದಿಸುತ್ತಿದ್ದಾರೆ. ಕೂಡಲೇ ಅವರನ್ನು ವರ್ಗಾವಣೆ ಮಾಡಿ, ಹೊಸ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ನೂತನ ಪದಾಧಿಕಾರಿಗಳಿಗೆ ಅಭಿನಂದನೆ
ಶಿಡ್ಲಘಟ್ಟ: ಎಲ್ಲರ ಸಹಕಾರದೊಂದಿಗೆ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕೆಂದು ಕೋಲಾರ-ಚಿಕ್ಕಬಳ್ಳಾಪುರ ಹಾಲು ಓಕ್ಕೂಟದ ಅಧ್ಯಕ್ಷ ಕೆ. ಗುಡಿಯಪ್ಪ ತಿಳಿಸಿದರು. ತಾಲ್ಲೂಕಿನ ಬೆಳ್ಳೂಟಿ ಹಾಲು ಉತ್ಫಾದಕರ ಸಹಕಾರ ಸಂಘಕ್ಕೆ ಆಯ್ಕೆಯಾದ ನೂತನ ಅಧ್ಯಕ್ಷ-ನಿರ್ದೇಶಕರಿಗೆ ಸಂಘದಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ರಾಜ್ಯದಲ್ಲಿ 55 ಲಕ್ಷ ಲೀಟರ್ ಹಾಲು ಉತ್ಫಾದನೆ ಮಾಡಿ ದಾಖಲೆ ನಿರ್ಮಿಸಿದೆ, ಕೋಚಿಮುಲ್‌ನಿಂದ ಪ್ರತಿ ದಿನ 9ಲಕ್ಷ 77ಸಾವಿರದ 800 ಲೀಟರ್ ಹಾಲು ಉತ್ಫಾದನೆ ಮಾಡುತ್ತಿದ್ದು ದಾಖಲೆ ನಿರ್ಮಿಸಿದ್ದೇವೆ ಎಂದರು. ಬಿ.ಎಸ್. ಯಡಿಯೂರಪ್ಪ ರವರು ಹೈನುಗಾರರ ಕಷ್ಟಗಳನ್ನು ಮನಗಂಡು ಲೀಟರ್‌ಗೆ 2 ರು. ಬೆಂಬಲಬೆಲೆ ನೀಡಿದ್ದು, ನಂತರ ಬಂದ ಸಿದ್ದರಾಮಯ್ಯ ರವರು 4 ರು. ಬೆಂಬಲ ಬೆಲೆ ನೀಡಿರುವುದರಿಂದ ಹಾಲು ಉತ್ಫಾದನೆಯಲ್ಲಿ ಏರಿಕೆಯಾಗಿದೆ ಎಂದರು. ಇದೇ ಸಂದರ್ಭದಲ್ಲಿ ಹಾಲು ಉತ್ಫಾದಕರ ಸಹಕಾರ ಸಂಘಕ್ಕೆ ನೂತನವಾಗಿ ಆಯ್ಕೆ ಯಾಗಿರುವ ನಿರ್ದೇಶಕರು ಕೋಚಿಮುಲ್ ಅಧ್ಯಕ್ಷ ಕೆ. ಗುಡಿಯಪ್ಪರನ್ನು ಸನ್ಮಾನಿಸಿದರು. ಜಿಪಂ ಸದಸ್ಯ ಎಸ್.ಎಂ. ನಾರಾಯಣಸ್ವಾಮಿ, ತಾಪಂ ಸದಸ್ಯ ವೆಂಕಟೇಶ್, ಮುನಿಕೃಷ್ಣಪ್ಪಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

