ಅಕ್ರಮ ಮರಳು ಸಾಗಣೆ; ಮಾಹಿತಿ ನೀಡಿದರೂ ಜಗ್ಗದ ಪೊಲೀಸರು
ಚಿಂತಾಮಣಿ: ಗಡಿಭಾಗಗಳಿಂದ ರಾತ್ರಿ ವೇಳೆ ಸುಮಾರು 12 ಕ್ಕೂ ಹೆಚ್ಚು ಲಾರಿಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿರುವಾಗ ನಾಗರಿಕರು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದರೂ ನಿರ್ಲಕ್ಷ್ಯ ವಹಿಸಿದ ಪೊಲೀಸರ ವಿರುದ್ಧ ಸಾರ್ವಜನಿಕರು ಕಿಡಿ ಕಾರಿದ್ದಾರೆ.
ತಾಲೂಕಿನ ಅಂಕಾಲಮಡುಗು, ಚಿಲಕಲನೇರ್ಪು, ಇರಗಂಪಲ್ಲಿ, ಬಟ್ಲಹಳ್ಳಿ ಸೇರಿದಂತೆ ಹಲವು ಪ್ರದೇಶಗಳಿಂದ ಪ್ರಭಾವಿಗಳ ಕುಮ್ಮಕ್ಕಿನಿಂದ ರಾತ್ರಿ ವೇಳೆ ರಾಜಾರೋಷವಾಗಿ ಮರಳು ಸಾಗಿಸುತ್ತಿದ್ದರೂ ಸ್ಥಳೀಯ ಪೊಲೀಸರು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. ನಗರದ ಡಿಎಸ್ಸೆಸ್ ಜಿಲ್ಲಾ ಸಂಚಾಲಕ ಜಿ.ನಾರಾಯಣಸ್ವಾಮಿ ಮತ್ತು ನಾಗರಾಜ್ ಎಂಬವರು ಬೆಳಗಿನ ಜಾವ ಬರುತ್ತಿರುವಾಗ ತಾಲೂಕಿನ ನಲ್ಲರಾಳ್ಳಹಳ್ಳಿ ಕ್ರಾಸ್ ಮುಖಾಂತರ ಸುಮಾರು 12 ಲಾರಿಗಳಲ್ಲಿ ಮರಳು ಸಾಗಿಸುತ್ತಿರುವುದನ್ನು ಕಂಡು ಪೊಲೀಸರಿಗೆ ದೂರು ನೀಡಿದ್ದರೂ ನಿರ್ಲ್ಕ್ಷ್ಯ ತೋರಿದ್ದಾರೆಂದು ಆರೋಪ ಮಾಡಿದ್ದಾರೆ.
ಕೆಂಚಾರ್ಲಹಳ್ಳಿ ಠಾಣೆ ಹಾಗೂ ಬಟ್ಲಹಳ್ಳಿ ಠಾಣೆ, ಗ್ರಾಮಾಂತರ ಠಾಣೆ ಪೊಲೀಸರಿಗೆ ಅಕ್ರಮ ಮರಳು ಸಾಗಾಣಿಕೆ ಬಗ್ಗೆ ದೂರು ನೀಡಿದ್ದರೂ ಫೋನ್ ತೆಯದೆ, ಲಾರಿಗಳ ಚಾಲಕರಿಂದ ಮಾಮೂಲಿ ಪಡೆದು ವಾಹನಗಳನ್ನು ಮುಂದಕ್ಕೆ ಬಿಡುತ್ತಿದ್ದರು ಎಂದು ಜಿ. ನಾರಾಯಣಸ್ವಾಮಿ ದೂರಿನಲ್ಲಿ ತಿಳಿಸಿದ್ದಾರೆ. ಕಡೆಗೂ ಕುರುಟಹಳ್ಳಿ ಬೈಪಾಸ್ ಬಳಿ ನಗರಠಾಣೆ ಸಬ್ಇನ್ಸ್ಪೆಕ್ಟರ್ ಟಿ. ಮುರಳಿ ಮತ್ತು ಸಹಾಯಕ ಸಬ್ಇನ್ಸ್ಪೆಕ್ಟರ್ ಮುನಿಬೀರಪ್ಪ ಕಾರ್ಯಾಚರಣೆ ನಡೆಸಿ ಮರಳು ತುಂಬಿದ 6 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಸುದ್ದಿ ತಿಳಿದ ಹಲವು ರಾಜಕೀಯ ಮುಖಂಡರು ಪೊಲೀಸರ ಮೇಲೆ ಒತ್ತಡ ಹೇರಿ ಲಾರಿಗಳನ್ನು ಬಿಡುಗಡೆಗೊಳಿಸುವ ಪ್ರಯತ್ನವೂ ನಡೆದಿದೆ ಎನ್ನಲಾಗಿದೆ. ನಾಗರಿಕರು ಪೊಲೀಸರ ನಿರ್ಲಕ್ಷ್ಯದ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ನೀಡಲು ಮುಂದಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

