ಪ್ರವೇಶ ಪತ್ರಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಕೆಜಿಎಫ್: ದ್ವಿತಿಯ ಪಿಯು ವಿದ್ಯಾರ್ಥಿಗಳಿಗೆ ಮಂಜೂರಾಗಿರುವ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲು ಕೆಜಿಎಫ್ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿ ವಿನಾಕಾರಣ ತೊಂದರೆ ನೀಡುತ್ತಿರುವುದಾಗಿ ಆರೋಪಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು.
ಪ್ರಥಮ ದರ್ಜೆ ಕಾಲೇಜಿನ ಸುಮಾರು 250ಕ್ಕೂ ಹೆಚ್ಚು ಪಿಯು ವಿದ್ಯಾರ್ಥಿಗಳಿಗೆ ಇಲಾಖೆ ವತಿಯಿಂದ ಮಂಜೂರಾಗಿರುವ ಪ್ರವಶ ಪತ್ರಗಳನ್ನು ವಿತರಿಸಲು ಹಾಜರಾತಿ ಕಡಿಮೆ ಇರುವ ನೆಪ ಹೇಳಿ ಕಾಲೇಜಿನ ಆಡಳಿತ ಮಂಡಳಿ ನಿರಾಕರಿಸುತ್ತಿದೆ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಪಾಲ್ಗೊಳ್ಳಲು ಪರದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಪ್ರತಿಭಟನೆಯಲ್ಲಿ ಎಸ್ಎಫ್ಐ ಅಧ್ಯಕ್ಷ ವಿಶ್ವೇಶ್ವರಸ್ವಾಮಿ, ಕಾರ್ಯದರ್ಶಿ ಅಮೀತ್, ಉಪಾಧ್ಯಕ್ಷ ಕಿರಣ್ಕುಮಾರ್, ವಿದ್ಯಾರ್ಥಿಗಳಾದ ಅರಿವಳಗನ್, ಸಂತೋಷ್, ವೇಣು, ಮಂಜುನಾಥ್, ಶಬ್ಬಾಸ್, ಸತೀಶ್, ರಮೇಶ್, ವೆಂಕಟೇಶ್ ಇದ್ದರು.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಕೆಜಿಎಫ್: ಕ್ಷೇತ್ರದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವಲ್ಲಿ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಕರವೇ ಕಾರ್ಯಕರ್ತರು ನಾಡಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಉಪಾಧ್ಯಕ್ಷ ಎ. ಚಂದರ್, ನಗರದ ಪ್ರಮುಖ ರಸ್ತೆಗಳು ಹಳ್ಳಗಳಿಂದ ಕೂಡಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ಉಂಟಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುತ್ತಿಲ್ಲ, ಸ್ವಚ್ಛತೆ ಇಲ್ಲದೆ ದುರ್ನಾತ ಬೀರುತ್ತಿದೆ. ಆದರೆ ನಗರಸಭೆ ಆಯುಕ್ತರಾಗಲೀ, ಆರೋಗ್ಯ ಅಧಿಕಾರಿಗಳಾಗಲೀ ಅಥವಾ ಕ್ಷೇತ್ರದ ಜನಪ್ರತಿನಿಧಿಗಳಾಗಲೀ ಸಮಸ್ಯೆ ನಿವಾರಿಲು ಮುಂದಾಗಿಲ್ಲ ಎಂದು ಆರೋಪಿಸಿದರು. ತಾಲೂಕು ಅಧ್ಯಕ್ಷ ಎಂ. ಶಶಿಧರನ್ ಮಾತನಾಡಿದರು. ಪ್ರತಿಭಟನೆಯಲ್ಲಿ ತಾಲೂಕು ಪ್ರಧಾನ ಕಾರ್ಯದರ್ಶಿ ಆನಂದಾಚಾರಿ, ನಗರಾಧ್ಯಕ್ಷ ಸೈಯದ್ಆಸ್ಲಂ, ಕಾರ್ಯದರ್ಶಿ ಎಂ. ವೆಂಕಟೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

