ದ್ವಿತೀಯ ಪಿಯು ಪರೀಕ್ಷೆ: ಅವ್ಯವಸ್ಥೆಗೆ ಆಸ್ಪದ ಬೇಡ
ಕೋಲಾರ: ರಾಜ್ಯಾದ್ಯಂತ ಮಾ.12 ರಿಂದ ಆರಂಭಗೊಳ್ಳಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 16,380 ವಿದಾರ್ಥಿಗಳು ಕುಳಿತಿದ್ದು, ಯಾವುದೇ ಅವ್ಯವಸ್ಥೆಗಳಿಗೆ ಆಸ್ಪದ ನೀಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ವಿನೋತ್ ಪ್ರಿಯಾ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಕಾರ್ಯಗಳ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
1378ಮಂದಿ ಪುನರಾವರ್ತಿತ ಅಭ್ಯರ್ಥಿಗಳು, 860 ಅಭ್ಯರ್ಥಿಗಳು ಸೇರಿದಂತೆ ಒಟ್ಟಾರೆ 16380 ಮಂದಿ ಪರೀಕ್ಷೆ ತೆಗೆದುಕೊಂಡಿದ್ದು, ಅವರಲ್ಲಿ 8431 ಬಾಲಕರು, 7949 ಬಾಲಕಿಯರು ಸೇರಿದ್ದಾರೆಂದರು.
ಪರೀಕ್ಷಾ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು, ಜಾಗೃತದಳ ರಚನೆ, ಪ್ರಶ್ನೆ ಪತ್ರಿಕೆ ಬಂಡಲ್ ಸಂರಕ್ಷಣೆ ಸೇರಿದಂತೆ ಎಲ್ಲಾ ಅಗತ್ಯ ಕ್ರಮ ಕೈಗೊಂಡು ಯಾವುದೇ ಅನುಮಾನಗಳಿಗೆ ಆಸ್ಪದ ನೀಡದಂತೆ ಎಚ್ಚರವಹಿಸಲು ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಜಿ. ದೊರೆಸ್ವಾಮಿ ಸಭೆಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಒಟ್ಟು23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಇದರಲ್ಲಿ ಸರ್ಕಾರಿ ಪದವಿ ಪೂರ್ವಕಾಲೇಜುಗಳ 16, ಅನುದಾನಿತ ಕಾಲೇಜುಗಳ 3 ಮತ್ತು ಅನುದಾರ ರಹಿತ 4ಕಾಲೇಜು ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಕೆಜಿಎಫ್ನ ಉರಿಗಾಂ ಸರ್ಕಾರಿ ಪದವಿ ಪೂರ್ವಕಾಲೇಜನ್ನು ಅತಿ ಸೂಕ್ಷ್ಮ, ಶ್ರೀನಿವಾಸಪುರ ಮತ್ತು ಬಂಗಾರಪೇಟೆಯ ಬಾಲಕರ ಪದವಿಪೂರ್ವಕಾಲೇಜುಗಳನ್ನು ಸೂಕ್ಷ್ಮ ಕೇಂದ್ರಗಳೆಂದು ಗುರುತಿಸಲಾಗಿದೆ ಎಂದರು.
ಪರೀಕ್ಷೆಯಲ್ಲಿ ಯಾವುದೇ ದುರಾಚಾರಗಳಿಗೆ ಅವಕಾಶವಿಲ್ಲದಂತೆ ಎಚ್ಚರ ವಹಿಸಿರುವ ಪಿಯು ಇಲಾಖೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ 8 ಜಾಗೃತದಳಗಳನ್ನು ರಚಿಸಿದೆ.
ಪರೀಕ್ಷೆಗಳು ಸುಗಮವಾಗಿ ನಡೆಯುವಂತಾಗಲು ಪರೀಕ್ಷಾ ದಿನಗಳಂದು ಕೇಂದ್ರಗಳ ಸುತ್ತ 200ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡುವುದು ಮತ್ತು ಆಯಾ ಕೇಂದ್ರಗಳಿಗೆ ಅಗತ್ಯವಾದ ರಕ್ಷಣೆಗೆ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಬಂದೋಬಸ್ತ್ಗೆ ಕೋರುವಂತೆ ಸೂಚಿಸಲಾಯಿತು.
ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ ಕೇಂದ್ರಗಳನ್ನು ಬೆಳಗ್ಗೆ 9 ರವರೆಗೂ ತೆರೆಯದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ, ಪರೀಕ್ಷೆ ನಡೆಯುವ ಮಾ.12 ರಿಂದ 27 ರವರೆಗೂ ಮನೆ ಪಾಠ ಇಲ್ಲವೇ ಖಾಸಗಿ ಟೂಷನ್ಗೆ ಅವಕಾಶವಿಲ್ಲವೆಂದು ಸಿಇಒ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ ಜಮೀಲ್ ಖಾನ್, ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ವರದರಾಜ್, ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಎ.ಎನ್. ನಾಗೇಂದ್ರಪ್ರಸಾದ್, ಪ್ರಾಂಶುಪಾಲರಾದ ಜೂನಿಯರ್ ಕಾಲೇಜಿನ ಎಸ್.ವಿ.ವೆಂಕಟಸ್ವಾಮಿ, ಬಾಲಕಿಯರ ಪಿಯು ಕಾಲೇಜಿನ ಕೃಷ್ಣಮೂರ್ತಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

