ಕೋಲಾರ

'ಮಹಿಳೆಯರು ಸ್ವಾವಲಂಬಿ ಜೀವನ ನಡೆಸಿ'

Published On :

ಚಿಕ್ಕಬಳ್ಳಾಪುರ: ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಮುಂದಾಗಬೇಕೆಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಎನ್. ಬೆಳ್ಳುಂಕೆ ಸಲಹೆ ನೀಡಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಾಗೂ ಜಿಲ್ಲಾ ಸಾಂತ್ವನ ಕೇಂದ್ರ ಆಯೋಜಿಸಿದ್ದ ಮಹಿಳೆಯರ ಹಕ್ಕು, ದೌರ್ಜನ್ಯಗಳ ಕಾಯ್ದೆ ಬಗ್ಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರ ಶೋಷಣೆ, ದೌರ್ಜನ್ಯಗಳ ಪ್ರಕರಣಗಳಲ್ಲಿ ಪ್ರತ್ಯಕ್ಷವಾಗಿ ಪುರುಷರು ಭಾಗಿಯಾಗಿರುವುದು ಕಂಡು ಬರುತ್ತಿದೆಯಾದರೂ ಸಹ ಮಹಿಳೆಯರಿಗೆ ಮಹಿಳೆಯರೇ ಶತ್ರು ಎನ್ನುವಂತೆ ಪರೋಕ್ಷವಾಗಿ ಇನ್ನೊಬ್ಬ ಮಹಿಳೆಗೆ ಅನ್ಯಾಯವಾಗುವುದರಲ್ಲಿ ಹೆಚ್ಚಿಗೆ ಮಹಿಳೆಯರ ಪಾತ್ರವಿರುವಂತಹುದು ದುರಾದೃಷ್ಟಕರ ಎಂದರು. ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವುದು, ಶೋಷಣೆ ಮತ್ತು ದೌರ್ಜನ್ಯದಿಂದ ಮುಕ್ತರಾಗುವುದು ಮಹಿಳೆಯರ ಕೈಯಲ್ಲಿಯೇ ಇದೆ.ಆದರೆ, ಇದಕ್ಕೆ ಪ್ರತಿಯೊಬ್ಬರು ಸಹಕಾರ ನೀಡಬೇಕಾಗಿದೆ ಎಂದರು.
ಪ್ರಸ್ತುತ ಸಮಾಜದ ದಿಕ್ಕು ತಪ್ಪಿಸುವ ಅಹಿತಕರ ವಾತಾವರಣ ಸೃಷ್ಟಿಸುವಂತಹುದು, ಅನಿರೀಕ್ಷಿತ ಘಟನೆಗಳ ವೈಭವೀಕರಣದಿಂದ ಕೆಟ್ಟ ಪ್ರಭಾವ ಬೀರುವಂತಹುದೂ ಹೆಚ್ಚಿಗೆ ಸಮಾಜಲದಲ್ಲಿ ನಡೆಯುತ್ತಿವೆ. ಇದಕ್ಕೆ ದೂರದರ್ಶನದಲ್ಲಿ ಪ್ರಸಾರವಾಗುತ್ತಿರುವ ಕೆಲ ಧಾರವಾಹಿಗಳೇ ನಿದರ್ಶನಗಳಾಗಿವೆ ಎಂದ ಅವರು, ಸಮಾಜವನ್ನು ಸರಿಯಾದ ದಾರಿಯಲ್ಲಿ ಕರೆದುಕೊಂಡು ಹೋಗುವಂತಹ  ರೀತಿಯಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿಯನ್ನು ಹೊಂದಬೇಕಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.