ಹಕ್ಕುಗಳ ಬಗ್ಗೆ ಮಹಿಳೆಯರು ಜಾಗೃತರಾಗಿ
ಕೋಲಾರ: ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಬೇಕು ಹಾಗೂ ಇತರರನ್ನು ಜಾಗೃತಗೊಳಿಸಬೇಕೆಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರೇಣುಕಾಪ್ರಸಾದ್ ಕರೆ ನೀಡಿದರು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಸರ್ಕಾರಿ ಮಹಿಳಾ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಅಭಿವೃದ್ಧಿ ಸಮಿತಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ, ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಮಹಿಳಾ ಹಕ್ಕುಗಳನ್ನು ಎತ್ತಿ ಹಿಡಿಯಲು ನ್ಯಾಯಾಂಗ ವ್ಯವಸ್ಥೆ ಸದಾ ಕಂಕಣ ಬದ್ದವಾಗಿದೆ. ಮಹಿಳಾ ದಿನಾಚರಣೆಗಳು ಒಂದು ದಿನಕ್ಕೆ ಸೀಮಿತವಾಗದೆ ವರ್ಷ ಪೂರ್ತಿ ಹಬ್ಬದ ರೀತಿಯಲ್ಲಿ ಆಚರಿಸುವ ಮೂಲಕ ಕಾನೂನುಗಳ ಬಗ್ಗೆ ಮಹಿಳೆಯರಿಗೆ ಹೆಚ್ಚಿನ ಅರಿವು ಮೂಡಿಸುವಂತಾಗಬೇಕಾಗಿದೆ ಎಂದರು.
ನಗರ ಪ್ರದೇಶದ ಮಹಿಳೆಯರಿಗಿಂತ ಗ್ರಾಮೀಣ ಮಹಿಳೆಯರು ತಮ್ಮ ಹಕ್ಕುಗಳಿಂದ ಹೆಚ್ಚು ವಂಚಿತರಾಗಿದ್ದು ಇವರನ್ನು ಸಮಾಜದ ಮುಖ್ಯವಾಹಿನಿಗೆ ತರುವಂತಾಗಬೇಕೆಂದು ತಿಳಿಸಿದರು. ಮಹಿಳೆಗೆ ಸಂವಿಧಾನದಲ್ಲಿ ಸಮಾನ ಅವಕಾಶಗಳನ್ನು ನೀಡಿದೆಯಾದರೂ ಅವಕಾಶಗಳು ಸಿಗದಿದ್ದಾಗ, ಕೇಂದ್ರ ಸರ್ಕಾರ ಶೇ.33 ಮೀಸಲಾತಿ ಕುರಿತು ಚರ್ಚೆ ನಡೆಸಿದ್ದು, ಆ ಪ್ರಕ್ರಿಯೆಯಲ್ಲಿ ಮುಂದುವರೆದಿರುವುದು ಗಮನಾರ್ಹವಾದ ಬೆಳವಣಿಗೆಯಾದರೂ ಅದು ಕ್ರಮೇಣ ಶೇ.50 ಮೀಸಲಾತಿ ಹೆಚ್ಚಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
2ನೇ ಅಪರ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶೆ ಶಕುಂತಲ ಹಾಗೂ ಕೌಟುಂಬಿಕ ನ್ಯಾಯಾಲಯದ ಮನಗೋಳಿ ಪ್ರೇಮಾವತಿ ಮಲ್ಲಿಕಾರ್ಜುನ್ರವರು ಮಹಿಳೆ ಮತ್ತು ಕಾನೂನುಗಳ ಬಗ್ಗೆ ಉಪನ್ಯಾಸ ನೀಡಿದರು.
ಸರ್ಕಾರಿ ಮಹಿಳಾ ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ಆಂಜಿನಪ್ಪ ಅಧ್ಯಕ್ಷತೆ ವಹಿಸಿದ್ದರು. 2 ನೇ ಅಪರ ಜಿಲ್ಲಾ ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಗಬಾಲಯ್ಯ, 1ನೇ ಅಪರ ಸಿವಿಲ್ ನ್ಯಾಯಾಧೀಶೆ ಕೆ.ಜಿ. ಚಿಂತಾ, ಪ್ರಧಾನ ಸಿವಿಲ್ .ಕುಮಾರ್, 2ನೇ ಅಪರ ಸಿವಿಲ್ನ್ಯಾಯಾಧೀಶ ಆರ್. ನಟೇಶ್, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ನಡುಪಳ್ಳಿ ಕೃಷ್ಣಮೂರ್ತಿ, ಯಶಸ್ವಿಸಿನಿ ಮಹಿಳಾ ಸಂಸ್ಥೆಯ ಕಾರ್ಯದರ್ಶಿ ಕೆ.ಎಸ್ .ನಾಗವೇಣಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

