28 ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧೆ: ಮಾರಸಂದ್ರ ಮುನಿಯಪ್ಪ
ಕೋಲಾರ: ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಎಸ್ಪಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಸ್ಪರ್ಧಿಸಲಿದೆ, ಕನಿಷ್ಠ 4 ಕ್ಷೇತ್ರಗಳಲ್ಲಿ ಪಕ್ಷ ಗೆಲುವು ಸಾಧಿಸಲಿದೆ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ತಿಳಿಸಿದರು.
ನಗರದ ಡೂಂಲೈಟ್ ವೃತ್ತದ ಬಳಿ ಬಿಎಸ್ಪಿಯ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿ, ಕಾಂಗ್ರೆಸ್ ಹಾಗೂ ಬಿಜೆಪಿಯ ಝಂಡಾ ಮಾತ್ರ ಬೇರೆ, ಅಜೆಂಡಾ ಒಂದೇ ಆಗಿದೆ. ಕೋಲಾರ ಕ್ಷೇತ್ರದಿಂದ ಸತತವಾಗಿ ಆರು ಬಾರಿ ಗೆದ್ದಿರುವ ಕೆ.ಎಚ್. ಮುನಿಯಪ್ಪ ಸಾಧನೆ ಏನು, ಕಳೆದ 30 ವರ್ಷಗಳಲ್ಲಿ 2 ಸಾವಿರ ಕೋಟಿ ರು.ಆಸ್ತಿ ಮಾಡಿದ್ದು ಇದಕ್ಕೆ ತಮ್ಮ ಬಳಿ ದಾಖಲೆಗಳಿವೆ ಎಂದರು.
ಪ್ರತಿ ಚುನಾವಣೆಯ ಸಂದರ್ಭಲ್ಲಿ ತಮ್ಮ ವಿರುದ್ಧ ಪ್ರಬಲ ಅಭ್ಯರ್ಥಿಗಳು ಸ್ಪರ್ಧಿಸದಂತೆ ತಂತ್ರಗಾರಿಕೆ ಮಾಡುವಲ್ಲಿ ನಿಪುಣರಾಗಿದ್ದಾರೆ, ಹಣಕೊಟ್ಟು ದುರ್ಬಲ ಅಭ್ಯರ್ಥಿಗಳನ್ನು ಇವರೇ ಹಾಕಿಸಿಕೊಂಡು ಕುತಂತ್ರ ರಾಜಕಾರಣ ಮಾಡುತ್ತಿರುವುದೇ ಮುನಿಯಪ್ಪನವರ ಸಾಧನೆ ಎಂದು ಟೀಕಿಸಿದರು. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂತರ್ಜಲಮಟ್ಟ 2 ಸಾವಿರ ಅಡಿಗೆ ಹೋಗಿದೆ. ಜನತೆ ಫ್ಲೋರೈಡ್ ನೀರು ಕುಡಿದು ಜೀವನ ನಡೆಸುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ಪ್ರಾಮಾಣಿಕ ಕೆಲಸವನ್ನು ಜಿಲ್ಲೆಯ ಸಂಸದರು, ಶಾಸಕರು ಮಾಡಿಲ್ಲ ಎಂದು ಆರೋಪಿಸಿದರು. ಉತ್ತರ ಪ್ರದೇಶದ ವಿಧಾನಪರಿಷತ್ ಸದಸ್ಯ, ಕರ್ನಾಟಕದ ಉಸ್ತುವಾರಿ ವಹಿಸಿರುವ ಅಶೋಕ್ ಸಿದ್ಧಾರ್ಥ ಮಾತನಾಡಿ, ಈ ಬಾರಿಯೂ ಹಂಗಿನ ಲೋಕಸಭೆ ಸೃಷ್ಟಿಯಾಗಲಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ದುರಾಡಳಿತದಿಂದ ಈ ಬಾರಿಯ ಚುನಾವಣೆಯಲ್ಲಿ ಬಿಎಸ್ಪಿ ಹೆಚ್ಚು ಸ್ಥಾನಗಳಲ್ಲಿ ಗೆದ್ದು ದೊಡ್ಡ ಮೂರನೇ ಪಕ್ಷವಾಗಿ ಹೊರಹೊಮ್ಮಿ ಮಾಯಾವತಿ ಅವರು ಪ್ರಧಾನಿಯಾಗಲಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

