ಕೋಲಾರ

'ಮಹಿಳೆಯರು ಮುಖ್ಯ ವಾಹಿನಿಗೆ ಬರಲಿ'

Published On :

ಶಿಡ್ಲಘಟ್ಟ: ಮಹಿಳೆಯರನ್ನು ಮುಖ್ಯ ವಾಹಿನಿಗೆ ತರುವುದೆ ಮಹಿಳಾ ದಿನಾಚರಣೆಯ ಉದ್ದೇಶ ಎಂದು ಪ್ರಧಾನ ಸಿವಿಲ್‌ನ್ಯಾಯಾಧೀಶ ಎಸ್. ಮಹೇಶ್ ಹೇಳಿರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಸಮಾಜಕ್ಕೆ ಮಹಿಳೆಯರ ಕೊಡುಗೆ ಅಪಾರವಾಗಿದ್ದು ಅವರಿಗೆ ಗೌರವ ಕೊಡಲು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ದೇಶದಲ್ಲಿ ಪ್ರತಿ 34 ನಿಮಿಷಕ್ಕೊಂದು ಅತ್ಯಾಚಾರ, ಪ್ರತಿ 47 ನಿಮಿಷಕ್ಕೊಂದು ಲೈಂಗಿಕ ದೌರ್ಜನ್ಯ, ಪ್ರತಿ 93 ನಿಮಿಷಗಳಿಗೊಂದು ವರದಕ್ಷಿಣೆ ಸಾವು ಸಂಬವಿಸುತ್ತಿದೆ. ಕಾನೂನು ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯಕ್ಕೆ ಕಠಿಣ ಶಿಕ್ಷೆ ನೀಡುತ್ತಿದ್ದರೂ ಜಾಗೃತಿ ಹೊರತು ಅತ್ಯಾಚಾರ ಪ್ರಕರಣಗಳು ಕಡಿಮೆಯಾಗುವುದಿಲ್ಲವೆಂದು ಹೇಳಿದರು.
ವೃತ್ತ ನಿರೀಕ್ಷಕ ಶ್ರೀನಿವಾಸ ಮೂರ್ತಿ ಮಾತನಾಡಿ, ಮಹಿಳೆಯರ ಕಳ್ಳ ಸಾಗಾಣಿಕೆ ಮೂಲ ಮಹಿಳೆಯರೆ ಆಗಿದ್ದು ಗ್ರಾಮದಲ್ಲಿ ಪರಿಚಯವಾಗುವ ಹೊಸಬರನ್ನು ನಂಬಬಾರದೆಂದು ತಿಳಿಸಿದರು. ಕಾಲೇಜಿನ ಆವರಣದಲ್ಲಿ ಸ್ತ್ರೀ ಶಕ್ತಿ ಗುಂಪುಗಳಿಂದ ತಯಾರಿಸಿದ ವಸ್ತುಗಳ ಮಾರಾಟ ಮಳಿಗೆ ಏರ್ಪಡಿಸಲಾಗಿತ್ತು.
ತಹಸೀಲ್ದಾರ್ ನಾರಾಯಣಸ್ವಾಮಿ, ವಕೀಲ ಪಾಪಿರೆಡ್ಡಿ, ಪ್ರಾಂಶುಪಾಲ ನಾರಾಯಣಸ್ವಾಮಿ, ಶಿಶು ಅಭಿವೃದ್ಧಿ ಯೋಜನಾದಿಕಾರಿ ಆರ್. ಪ್ರಕಾಶ್, ಡಾ. ವಿಜಯ ವೆಂಕಟರಾಮ್, ವಕೀಲೆ ನೌತಾಜ್ ಇದ್ದರು.

ಮಹಿಳಾ ದಿನಚರಣೆ ಅಂಗವಾಗಿ ಸೈಕಲ್ ಜಾಥಾ
ಶಿಡ್ಲಘಟ್ಟ: ಅಂತಾರಾಷ್ಟ್ರೀಯ ಮಹಿಳಾ ದಿನಚರಣೆ ಅಂಗವಾಗಿ ಸೈಕಲ್ ಜಾಥಾ ಹಾಗೂ ಬೀದಿ ನಾಟಕ ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ನ್ಯಾಯಾಲಯದ ಆವರಣದಿಂದ ಪ್ರಥಮ ದರ್ಜೆ ಕಾಲೇಜಿನ ವರೆಗೆ ಸೈಕಲ್ ಜಾಥಾ ಹಮ್ಮಿಕೊಂಡಿದ್ದು, ಜಾಥಾದಲ್ಲಿ ಪ್ರಧಾನ ಸಿವಿಲ್‌ನ್ಯಾಯಧೀಶರಾದ  ಎಸ್. ಮಹೇಶ್, ವಕೀಲರು ಹಾಗೂ ಶಾಲಾ ವಿದ್ಯಾರ್ಥಿನಿಯರು ಪಾಲ್ಗೂಂಡಿದ್ದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ಎದುರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾಲೂರಿನ ತಾಯಿಬೇರು ಜನಪದ ಕಲಾ ತಂಡದಿಂದ ಮಹಿಳೆಯರ ಮೇಲೆ ಅಗುತ್ತಿರುವ ದೌರ್ಜನ್ಯದ ಬಗ್ಗೆ ಹಾಗೂ ಹೆಣ್ಣು ಮಕ್ಕಳ ಮಾರಾಟ ಜಾಲದ ಬಗ್ಗೆ ಬೀದಿ ನಾಟಕ ಹಮ್ಮಿಕೊಳ್ಳಲಾಗಿತ್ತು. ಪ್ರಧಾನ ಸಿವಿಲ್‌ನ್ಯಾಯಾಧೀಶರಾದ ಎಸ್. ಮಹೇಶ್, ಪ್ರಾಂಶುಪಾಲ ನಾರಾಯಣಸ್ವಾಮಿ, ವಕೀಲ ಪಾಪಿರೆಡ್ಡಿ, ತಹಸೀಲ್ದಾರ್ ನಾರಾಯಣಸ್ವಾಮಿ, ವೃತ್ತ ನಿರೀಕ್ಷಕ ಶ್ರೀನಿವಾಸ ಮೂರ್ತಿ ನಾಟಕ ಪ್ರದರ್ಶನದಲ್ಲಿ ಪಾಲ್ಗೂಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.