ಕೋಲಾರ

ನೂತನ ಅಂಗನವಾಡಿ ನಿರ್ಮಾಣಕ್ಕೆ ಒತ್ತಾಯ

Published On :

ಟೇಕಲ್: ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಕೆಲವು ಹಳ್ಳಿಗಳಲ್ಲಿ ಮಕ್ಕಳಿಗೆ ಶಿಕ್ಷಣಕ್ಕೆ ಬೇಕಾದ ಯಾವುದೇ ಸೌಲಭ್ಯ ಕಲ್ಪಿಸದೆ ಇರುವುದು ನಿಜಕ್ಕೂ ಶೋಚನೀಯ. ಇದಕ್ಕೆ ಒಂದು ಉದಾಹರಣೆ ಎಂದರೆ ಟೇಕಲ್‌ನ ಹುಳದೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವೆಂಕಟರಾಜನಹಳ್ಳಿ ಗ್ರಾಮದಲ್ಲಿ ಪುಟಾಣಿ ಮಕ್ಕಳಿಗಾಗಿ ಇರುವ ಸರ್ಕಾರಿ ಅಂಗನವಾಡಿ ಕೇಂದ್ರಕ್ಕೆ ಸರಿಯಾದ ಕಟ್ಟಡವಿಲ್ಲದೆ ಹಳೆಯ ಶಿಥಿಲ ಶಾಲಾ ಕಟ್ಟಡದಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದು, ಮಕ್ಕಳು ಆತಂಕ ಸ್ಥಿತಿಯಲ್ಲಿ ಇರುವ ಬವಣೆ ಉಂಟಾಗಿದೆ.
ವೆಂಕಟರಾಜನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಪ್ರಾರಂಭವಾದ ದಿನದಿಂದ
ಅದಕ್ಕೆ ಸರಿಯಾದ ಕಟ್ಟಡ ವ್ಯವಸ್ಥೆ ಇಲ್ಲದೆ ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ 20ರಿಂದ 30 ಮಂದಿ ಮಕ್ಕಳು ಈ ಕೇಂದ್ರಕ್ಕೆ ಬರುತ್ತಿದ್ದು, ಕೇಂದ್ರದಲ್ಲಿ ಎಲ್ಲಾ ಸೌಲಭ್ಯಗಳು ಸಿಗುತ್ತಿದೆ. ಆದರೆ, ಶಿಥಿಲ ಕಟ್ಟಡದ ಒಳಗೆ ಮಕ್ಕಳು ಇರುವ ಪರಿಸ್ಥಿತಿ ಉಂಟಾಗಿದೆ. ಈ ಬಗ್ಗೆ ಹತ್ತು ಹಲವು ಬಾರಿ ಗ್ರಾಮಸ್ಥರು ತಾಲೂಕು ಉನ್ನತ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ತಾಲೂಕು ಹಾಗೂ ಜಿಲ್ಲಾಡಳಿತ ಗಮನ ಹರಿಸಿ ನೂತನ ಅಂಗನವಾಡಿ ಕೇಂದ್ರ ನಿರ್ಮಿಸಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

'ಭಿಕ್ಷಾಟನೆ ದೇಶದಿಂದ ಉಚ್ಚಾಟನೆಯಾಗಲಿ'
ಗೌರಿಬಿದನೂರು: ಇಂದಿನ ಕಂಪ್ಯೂಟರ್ ಯುಗದಲ್ಲೂ ಭಿಕ್ಷಾಟನೆ ಸಾಮಾಜಿಕ ಪಿಡುಗಾಗಿ ಉಳಿದಿರುವುದು ದೇಶದ ದೌರ್ಭಾಗ್ಯವೇ ಸರಿ ಎಂದು ಕೋಲಾರ ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕಿ  ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಸೋಮವಾರ ನಡೆದ ನಿರಾಶ್ರಿತರ ಪರಿಹಾರ ಕೇಂದ್ರದ  ದಿಢೀರ್ ದಾಳಿಯಲ್ಲಿ  15ಕ್ಕೂ ಹೆಚ್ಚು ಭಿಕ್ಷುಕರನ್ನು ತಮ್ಮ ವಶಕ್ಕೆ ತೆಗೆದುಕೊಂಡ ನಂತರ ಅವರು ಮಾತನಾಡಿ ಮೇಲಿನಂತೆ ಅಭಿಪ್ರಾಯಪಟ್ಟರು.  
ಅಂದಿನ ಮೈಸೂರು ಮಹಾರಾಜ ಜಯಚಾಮರಾಜ ಒಡೆಯರ್ ಮುಂದಾಲೋಚನೆಯಿಂದ ಬೆಂಗಳೂರು ಹೊರವಲಯದಲ್ಲಿ ನಿರಾಶ್ರಿತರ ಪರಿಹಾರ ಕೆಂದ್ರ ಸ್ಥಾಪಿಸಿ. ಭಿಕ್ಷಾಟನೆ ತಡೆಗೆ ನಾಂದಿ ಹಾಡಿದರು. ಈ ನಿಟ್ಟಿನಲ್ಲಿ ಕೋಲಾರ, ಬಿಜಾಪುರ, ರಾಯಚೂರು, ಬಳ್ಳಾರಿ, ಬೆಳಗಾಂ, ಚಿತ್ರದುರ್ಗ, ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ ಲ್ಲೆಗಳಲ್ಲಿ ಸಮಾಜ ಕಲ್ಯಾಣ ವತಿಯಿಂದ ಕೇಂದ್ರ ಪರಿಹಾರ ಸಂಯುಕ್ತ ಆಶ್ರಯದಲ್ಲಿ ನಿರಾಶ್ರಿತರ ವಸತಿ ನಿಲಯ ಸ್ಥಾಪಿಸಿ ಭಿಕ್ಷಾಟನೆ ನಿರ್ಮೂಲನೆಗೆ ಶ್ರಮಿಸಲಾಗುತ್ತಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.