ಗ್ರಾಪಂ ಸದಸ್ಯನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಕೋಲಾರ: ಅಕ್ರಮವಾಗಿ ಎರಡು ನಲ್ಲಿ ಸಂಪರ್ಕ ಪಡೆದಿದ್ದನ್ನು ಪ್ರಶ್ನಿಸಿದರು ಎಂಬ ಕಾರಣದಿಂದ ತಾಲೂಕಿನ ಹುರಿಗಿಲಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ವಿ.ನಾರಾಯಣರೆಡ್ಡಿ ಅವರ ವಿರುದ್ಧ ಸುಳ್ಳು ಜಾತಿ ನಿಂದನೆ ಮೊಕದ್ದಮೆ ದಾಖಲು ಮಾಡಿರುವುದನ್ನು ಖಂಡಿಸಿ ಸಿಪಿಐ(ಎಂ) ವತಿಯಿಂದ ಜಿಲ್ಲಾ ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಎರಡು ನಲ್ಲಿ ಸಂಪರ್ಕ ಪಡೆದು ಗ್ರಾಮದ ಅರ್ಧಕ್ಕೂ ಹೆಚ್ಚಿನ ಮನೆಗಳಿಗೆ ನೀರು ಸರಬರಾಜು ಆಗದೇ ತೊಂದರೆ ನೀಡುತ್ತಿದ್ದ ರಮೇಶ್ ಬಾಬು ಮತ್ತು ಅವರ ಕುಟುಂಬದವರು ಹಲ್ಲೆಗೆ ಒಳಗಾದ ಗ್ರಾಪಂ ಸದಸ್ಯನಿಗೆ ನ್ಯಾಯ ಒದಗಿಸದೇ ಪ್ರತಿ ದೂರು ನೀಡದ ಆರೋಪಿಗಳು ನೀಡಿದ ದೂರು ತಕ್ಷಣ ಸ್ವೀಕರಿಸಿ ಪ್ರಕರಣ ದಾಖಲು ಮಾಡಿರುವುದು ಅನುಮಾನಕ್ಕೆ ಆಸ್ಪದವಾಗಿದೆ ಎಂದು ಪ್ರತಿಭಟನಾಕಾರರು ಜಿಲ್ಲಾ ಎಸ್ಪಿಗೆ ಪೊಲೀಸರ ವಿರುದ್ಧ ದೂರು ಹೇಳಿದರು. ಘಟನೆ ಕುರಿತು ಯಾವುದೇ ಪ್ರಾಥಮಿಕ ತನಿಖೆ ನಡೆಸದೇ ಪ್ರಕರಣ ದಾಖಲು ಮಾಡಲಾಗಿದ್ದು ಪೊಲೀಸರು ಒತ್ತಡಕ್ಕೆ ಒಳಗಾಗಿ ಪ್ರಕರಣ ದಾಖಲಿಸಿರುವುದು ಸ್ಪಷ್ಟವಾಗಿದೆ, ಕೂಡಲೇ ಮೊಕದ್ದಮೆಯನ್ನು ವಾಪಸು ಪಡೆಯಬೇಕು ಗ್ರಾಮಸ್ಥರು ನೀಡಿರುವ ದೂರನ್ನು ಕೂಡಲೇ ದಾಖಲಿಸಬೇಕು ಎಂದು ಒತ್ತಾಯಿಸಿದರು. ರೈತ ಮುಖಂಡ ವಿ. ನಾರಾಯಣರೆಡ್ಡಿರವರಿಗೆ ಪ್ರಾಣ ಬೆದರಿಕೆ ಹಾಕಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವರಿಗೆ ರಕ್ಷಣೆ ನೀಡಬೇಕೆಂದು ಪ್ರತಿಭಟನಾಕಾರರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯ ನೇತತ್ವವನ್ನು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ, ಕೆಪಿಆರ್ಎಸ್ಸ್ ಜಿಲ್ಲಾ ಮುಖಂಡ ಪಿ.ಆರ್. ಸೂರ್ಯಯನಾರಾಯಣ, ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ವಿ.ಗೀತಾ, ಮುಖಂಡರಾದ ಟಿ.ಎಂ. ವೆಂಕಟೇಶ್, ಎನ್.ಎನ್. ಶ್ರೀರಾಮ್, ವಿಜಯಕೃಷ್ಣ, ಎ.ವಿ. ರಮೇಶ್, ಗಂಗಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

