ಕೋಲಾರ

ಪರಮಶಿವಯ್ಯ ನಿಧನದಿಂದ ತುಂಬಲಾರದ ನಷ್ಟ: ಲಕ್ಷ್ಮಿನಾರಾಯಣರೆಡ್ಡಿ

Published On :

ಚಿಂತಾಮಣಿ: ಶಾಶ್ವತ ನೀರಾವರಿಗಾಗಿ ಕಳೆದ 3 ದಶಕಗಳಿಂದ ನಿರಂತರವಾಗಿ ಹೋರಾಟ ನಡೆಸಿದ ಡಾ.ಜಿ.ಎಸ್.ಪರಮಶಿವಯ್ಯ ನಿಧನರಾಗಿರುವುದು ಉಭಯ ಜಿಲ್ಲೆಗಳಿಗೆ ತುಂಬಲಾರದ ನಷ್ಟವಾಗಿದೆ ಎಂದು ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ ಸಂತಾಪ ವ್ಯಕ್ತಪಡಿಸಿದ್ದಾರೆ.  ನಗರದ ತಾಲೂಕು ಕಚೇರಿ ಮುಂಭಾಗದ ವೃತ್ತದಲ್ಲಿ ಮಂಗಳವಾರ ಮಧ್ಯಾಹ್ನ ಶಾಶ್ವತ ನೀರಾವರಿ ಯೋಜನೆಯ ರೂವಾರಿ ಡಾ.ಜಿ.ಎಸ್.ಪರಮಶಿವಯ್ಯ ಹೃದಯಾಘಾತದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ತಾಲೂಕು ವಿವಿಧ ಪ್ರಗತಿಪರ ಹಾಗೂ ಕನ್ನಡಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ 7 ಜಿಲ್ಲೆಗಳಿಗೆ ಶಾಶ್ವತವಾಗಿ ನೀರು ಕಲ್ಪಿಸಲು ಕಳೆದ 3 ದಶಕಗಳಿಗಿಂತ ಹೆಚ್ಚಾಗಿ ಸರ್ಕಾರಗಳ ಮೇಲೆ ಹೋರಾಟ ನಡೆಸಿದ ಧೀಮಂತ ನಾಯಕ ಪರಮಶಿವಯ್ಯ ಅವರ ಕೊಡುಗೆ ಅಪಾರವಾದುದು ಎಂದರು.
ತಾಲೂಕಿನ ವಿವಿಧ ಪ್ರಗತಿಪರ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರಾದ ಕೃಷ್ಣೋಜಿರಾವ್, ಬುಲೆಟ್ ರಮೇಶ್, ಕಲಾವಿದ ಮುನಿರೆಡ್ಡಿ, ಕುಂಟಿಗಡ್ಡೆ ಲಕ್ಷ್ಮಣ್,ನಾಗದೇನಹಳ್ಳಿ ನಾರಾಯಣಸ್ವಾಮಿ, ಊಲವಾಡಿ ಮುನಿನಾರಾಯಣಪ್ಪ, ಕನ್ನಡ ಅಶ್ವಥ್, ಪಂಕಜ್, ವಕೀಲ ಈಶ್ವರಗೌಡ, ಟಿ.ವಿ.ಪ್ರಕಾಶ್, ಆಸೀಫ್ ಸೇರಿದಂತೆ ಹಲವು ಮುಖಂಡರು ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.