ಮತದಾರರ ಮಾಹಿತಿ ಸಂಗ್ರಹಣೆಗೆ ಜಿಪಂ ಸಿಇಒ ಸೂಚನೆ
ಕೋಲಾರ: ಮತಗಟ್ಟೆ ಅಧಿಕಾರಿಗಳು ಕಡ್ಡಾಯವಾಗಿ ಪ್ರತಿಂದು ಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಣೆ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಸ್ವೀಪ್ ಸಮಿತಿಯ ಅಧ್ಯಕ್ಷರಾದ ವಿನೋತ್ ಪ್ರಿಯಾ ಸೂಚಿಸಿದರು.
ನಗರದ ಜಿ.ಪಂ. ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲೂಕು ಮತಗಟ್ಟೆ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿ ಅವರು, ಮಾ.9 ರಿಂದ 16ರವರೆಗೆ ಮೊದಲನೇ ಹಂತದ ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಮತದಾರ ಹೆಸರು ಸೇರ್ಪಡೆ, ಸ್ಥಳಾಂತರ ಮತ್ತು ನಿಧನರಾಗಿರಾಗಿರುವ ಮತದಾರರ ಪಟ್ಟೆಯನ್ನು ತಯಾರು ಮಾಡಿ ವರದಿ ನೀಡಬೇಕೆಂದು ಮತಗಟ್ಟೆ ಅಧಿಕಾರಿಗಳಿಗೆ ತಿಳಿಸಿದರು.
ಮತಪಟ್ಟಿಯೊಂದಿಗೆ ಪ್ರತಿ ಮನೆಗೆ ಭೇಟಿ ನೀಡಿ, ಮತದಾರರ ಮಾಹಿತಿಯನ್ನು ನಿಖರವಾಗಿ ಸಂಗ್ರಹಿಸಿ, ಯಾರೊಬ್ಬರು ಮತದಾರರು ಯಾವ ಮತಗಟ್ಟೆಯಲ್ಲಿ ಅವರ ಹೆಸರಿದೆಯೆಂಬ ಮಾಹಿತಿಯನ್ನು ನೀಡಬೇಕಾಗಿದೆ ಎಂದ ಅವರು, ಪ್ರತಿಯೊಂದು ಮತಗಟ್ಟೆಯಲ್ಲಿ ಮತದಾರರ ಪಟ್ಟೆಯನ್ನು ಪ್ರಕಟಿಸಬೇಕೆಂದು ಹೇಳಿದರು.
ಮತದಾರರು ನಿರ್ಭಯವಾಗಿ ಮತದಾನ ಮಾಡುವಂತೆ ಮತ್ತು ಮತದಾನದ ಹಕ್ಕುಗಳನ್ನು ತಿಳಿಸಬೇಕಾಗಿದ್ದು, ಮೊದಲ ಬಾರಿಗೆ ಮತದಾನ ಮಾಡುವಂತಹ ವ್ಯಕ್ತಿಗಳಿಗೆ ಯಾವ ರೀತಿ ಮತದಾನ ಮಾಡುಬೇಕು ಎಂಬುದರ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು. ಕಳೆದ ಬಾರಿಗಿಂತ ಈ ಸಲ ಮತದಾನ ಪ್ರಮಾಣ ಹೆಚ್ಚಾಗಬೇಕು, ಇದಕ್ಕಾಗಿ ಬೀದಿ ನಾಟಕ, ಕರಪತ್ರಗಳ ವಿತರಣೆ, ಬೈಕ್ ರ್ಯಾಲಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಂಡು ಜನತೆಯಲ್ಲಿ ಜಾಗೃತಿ ಮೂಡಿಸಬೇಕೆಂದರು.
ಸಂತೆಗಳಲ್ಲಿ ಮತದಾನದ ಅರಿವಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಕಾರದಿಂದ ಮತದಾನದ ಅರಿವನ್ನು ಜನರಿಗೆ ಮೂಡಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಬದನೂರು, ಯೋಜನಾ ನಿರ್ದೇಶಕ ಎಂ.ಸಿ. ಚಲುವರಾಜ್, ತಹಶೀಲ್ದಾರ್ ನಾಗರಾಜ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

