ಧಾರ್ಮಿಕ ಸಂಸ್ಥೆಗಳು ಸಮಾಜ ಸೇವೆಗೆ ಮುಂದಾಗಲಿ: ಸುರೇಂದ್ರ ಕುಮಾರ್
ಕೋಲಾರ: ಧಾರ್ಮಿಕ ಸಂಸ್ಥೆಗಳು ಸಮಾಜ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ಸಮಾಜದಲ್ಲಿನ ಅಸಮಾನತೆಯನ್ನು ತೊಡೆಯಬೇಕೆಂದು ಶ್ರೀಸೂರ್ಯನಾರಾಯಣ ಟ್ರಸ್ಟ್ ಅಧ್ಯಕ್ಷ ವಕೀಲ ಕೆ.ವಿ. ಸುರೇಂದ್ರ ಕುಮಾರ್ ಹೇಳಿದರು.
ನಗರದ ಅಂತರಗಂಗೆ ತಪ್ಪಲಲ್ಲಿರುವ ಶನಿಮಹಾತ್ಮ ದೇವಾಲಯದಲ್ಲಿ ಸೂರ್ಯನಾರಾಯಣ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಅಖಂಡ ಭಜನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಮಾಜದ ವಿವಿಧ ಸ್ತರಗಳಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳನ್ನು ತಮ್ಮ ಟ್ರಸ್ಟ್ ಗುರುತಿಸಿ ಗೌರವಿಸುವ ಮೂಲಕ ಸಮಾಜ ಸೇವೆಯನ್ನು ಪ್ರೋತ್ಸಾಹಿಸುತ್ತಿದೆಯೆಂದು ವಿವರಿಸಿದರು.
ಪ್ರತಿ ವಾರದ ಇಡೀ ರಾತ್ರಿ ಭಜನಾ ಕಾರ್ಯಕ್ರಮವನ್ನು ಆಯೋಜಿಸಿದ್ದ ಗಾಯಕ ಪೋಸ್ಟ್ ನಾರಾಯಣಸ್ವಾಮಿ ಟ್ರಸ್ಟ್ ವತಿಯಿಂದ ನೀಡಿದ ಸನ್ಮಾನ ಸ್ಪೀಕರಿಸಿ ಮಾತನಾಡಿ, ಸೂರ್ಯನಾರಾಯಣ ಟ್ರಸ್ಟ್ ಶನಿಮಹಾತ್ಮ ದೇವಾಲಯವನ್ನು ನಿರ್ಮಾಣ ಮಾಡಿ, ಅನೇಕ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆಯನ್ನು ಒದಗಿಸಿಕೊಡುತ್ತಿದೆಯೆಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪತ್ರಕರ್ತ ಕೆ.ಎಸ್. ಗಣೇಶ್ ಮಾತನಾಡಿ, ಸೂರ್ಯನಾರಾಯಣ ಟ್ರಸ್ಟ್ ಮುಂದಿನ ದಿನಗಳಲ್ಲಿ ಮತ್ತಷ್ಟು ಅಶಕ್ತರಿಗೆ ನೆರವಿನ ಹಸ್ತ ಚಾಚಲಿ ಎಂದರು. ಅಧ್ಯಕ್ಷತೆ ವಹಿಸಿದ್ದ ಕೆ.ಎಸ್.ಕಾಂತಮ್ಮ ಮಾತನಾಡಿ, ವಿಶ್ವ ಮಹಿಳಾ ದಿನಾಚರಣೆ ದಿನವೇ ಅಖಂಡ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಸೂರ್ಯನಾರಾಯಣ ಟ್ರಸ್ಟ್ ಮಹಿಳಾ ಕಲಾವಿದರನ್ನು ಹೆಚ್ಚಿನ ಸಂಖ್ಯೆಯಲ್ಲಿ ಗುರುತಿಸಿ ಪ್ರೋತ್ಸಾಹಿಸಲಿ ಎಂದರು.
ಪತ್ರಕರ್ತ ಕೋ.ನಾ. ಮಂಜುನಾಥ್ ಮಾತನಾಡಿ, ಧಾರ್ಮಿಕ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ರಿಯಲ್ ಎಸ್ಟೇಟ್ ಉದ್ಯಮ ನಡೆಸುವವರೇ ಹೆಚ್ಚಾಗಿರುವ ದಿನಗಳಲ್ಲಿ ಸೂರ್ಯನಾರಾಯಣ ಟ್ರಸ್ಟ್ ಸಂಪೂರ್ಣವಾಗಿ ಧಾರ್ಮಿಕ ಹಾಗೂ ಸೇವಾ ಕಾರ್ಯಕ್ರಮಗಳ ಜೊತೆಗೆ ಗುರು ಪರಂಪರೆಯನ್ನು ಮುದುವರೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದರು. ಕವಿ ಶರಣಪ್ಪ ಗಬ್ಬೂರು, ಪತ್ರಕರ್ತ ಕೆ.ಎಸ್. ಗಣೇಶ್ ಮತ್ತು ಭಜನಾ ತಂಡದ ಕಲಾವಿದರನ್ನು ಸನ್ಮಾನಿಸಲಾಯಿತು. ಸೂರ್ಯನಾರಾಯಣ ಟ್ರಸ್ಟ್ ಧರ್ಮದರ್ಶಿ ಜಿ. ವೆಂಕಟಸ್ವಾಮಿ, ಶಿಕ್ಷಕಿ ಎಂ.ಎಸ್. ಮಮತ, ಭಜನಾ ತಂಡದ ಕಲಾವಿದರಾದ ಮದ್ದೇರಿ ನಾರಾಯಣಸ್ವಾಮಿ, ಹನುಮಂತಪ್ಪ, ಯುವ ಕಲಾವಿದೆ ಸುಮಿತ್ರ ಮತ್ತು ತಂಡದವರಿಂದ ಭಕ್ತಿಗೀತೆಗಳು ಹಾಗೂ ತತ್ವಪದಗಳ ಗೀತೆ ಗಾಯನ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

