ಪದವಿ ಪರೀಕ್ಷಾ ಶುಲ್ಕ ಏರಿಕೆ ಖಂಡಿಸಿ ಎಸ್ಎಫ್ಐ ಧರಣಿ
ಕೋಲಾರ: ಬೆಂಗಳೂರು ವಿಶ್ವ ವಿದ್ಯಾಲಯ ಪ್ರಸಕ್ತ ವರ್ಷದಲ್ಲಿ ಪದವಿ ಪರೀಕ್ಷಾ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿದೆ ಎಂದು ಆರೋಪಿಸಿ ಅಖಿಲ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ)ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರಗಾಲದಿಂದ ಬಡವರ ಜೀವನ ಪರಿಸ್ಥಿತಿ ದುಸ್ತರವಾಗಿದೆ. ಇಂತಹ ಸಂದರ್ಭದಲ್ಲಿ ಬೆಂಗಳೂರು ವಿವಿಯು ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದು ಸೂಕ್ತವಲ್ಲವೆಂದು ಮುಖಂಡರು ದೂರಿದರು.
ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಶುಲ್ಕ ಏರಿಕೆ ಸುತ್ತೋಲೆ ಹಿಂಪಡೆಯುವಂತೆ ಆದೇಶಿಬೇಕೆಂದು ಒತ್ತಾಯಿಸಿ ಸರ್ಕಾರ ಹಾಗೂ ಬೆಂಗಳೂರು ವಿವಿಗೆ ಜಿಲ್ಲಾಡಳಿತ ಮೂಲಕ ಮನವಿ ಸಲ್ಲಿಸಲಾಯಿತು.
ಬೇಡಿಕೆಗಳು: ಏರಿಕೆಯಾಗಿರುವ ಶುಲ್ಕ ನೀತಿಯನ್ನು ವಾಪಸು ಪಡೆಯಬೇಕು, ಪ್ರಸಕ್ತ ಸುತ್ತೋಲೆ ಪ್ರಕಾರ ಹೆಚ್ಚುವರಿಯಾಗಿ ಶುಲ್ಕವನ್ನು ಪಡೆದಿರುವುದನ್ನು ವಾಪಸು ವಿದ್ಯಾರ್ಥಿಗಳಿಗೆ ನೀಡಬೇಕು.
ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ ನೀತಿಗಳನ್ನು ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಪ್ರಕಟಿಸಬೇಕು, ಪ್ರತಿ ವರ್ಷ ಶೇ.10ರಷ್ಟು ಶುಲ್ಕ ಏರಿಕೆ ಕ್ರಮವನ್ನು ಕೈ ಬಿಡಬೇಕು, ವಿದ್ಯಾರ್ಥಿಗಳಲ್ಲಿ ಮೂಡುವ ಗೊಂದಲಗಳನ್ನು ನಿವಾರಿಸಲು ಸ್ಪಷ್ಟ ಮತ್ತು ಪಾರದರ್ಶಕ ಸುತ್ತೋಲೆ ಹೊರಡಿಸಬೇಕು, ಪ್ರಸಕ್ತ ಇರುವ ಶುಲ್ಕ ಅವಧಿ ಹೆಚ್ಚಿಸಬೇಕು ಹಾಗೂ ಶಿಕ್ಷಣದ ವ್ಯಾಪಾರೀಕರಣದ ನೀತಿಯನ್ನು ಕೈಬಿಡಬೇಕೆಂದು ವಿದ್ಯಾರ್ಥಿ ಮುಖಂಡರು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಎಸ್ಎಫ್ಐ ಮುಖಂಡರಾದ ಮಾರ್ಕಂಡಯ್ಯ, ಮುಸ್ತಾಫ್, ಸಿ. ಅಮರೇಶ್, ಗಾಯಿತ್ರಿ, ಬಾಲರಾಜ್, ನಟೇಶ್, ಸುರೇಶ್ ಸೇರಿದಂತೆ ಪದವಿ ವಿದ್ಯಾರ್ಥಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

