ಸಮರ್ಥ ನಾಯಕನನ್ನು ಆಯ್ಕೆ ಮಾಡಿ: ಉಷಾ
ಬಂಗಾರಪೇಟೆ: ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಉತ್ತಮವಾಗಿ ದೇಶವನ್ನು ಕಾಯುವ ನಾಯಕನನ್ನು ಆಯ್ಕೆ ಮಾಡಬೇಕೆಂದು ತಹಶೀಲ್ದಾರ್ ಎಸ್.ಆರ್. ಉಷಾ ಹೇಳಿದರು.
ಪಟ್ಟಣದಲ್ಲಿ ಗುರುವಾರ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ನಿಮ್ಮ ಮತ ನಿಮ್ಮ ಹಕ್ಕು ಅರಿವು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಉತ್ತಮ, ಪ್ರಾಮಾಣಿಕ ಸರ್ಕಾರ ರಚನೆಗೆ ಪ್ರತಿಯೊಂದು ಮತ ಕೂಡ ಅತ್ಯ ಅಮೂಲ್ಯ ಎಂದರು. ಉತ್ತಮ ನಾಯಕರ ಆಯ್ಕೆಗೆ ಮತದಾನ ವರದಾನವಾಗಿದೆ. ಮುಕ್ತ, ನ್ಯಾಯಸಮ್ಮತ ಮತದಾನಕ್ಕಾಗಿ ಸೂಕ್ತ ವ್ಯವಸ್ಥೆ ಕಲ್ಪಿಸುವ ಸಿದ್ಧತೆ ನಡೆದಿದ್ದು, ಮತದಾರರು ನಿರ್ಭೀತರಾಗಿ ಮತ ಚಲಾಯಿಸಬೇಕು ಎಂದರು.
ಮತದಾನ ಪ್ರತಿಯೊಬ್ಬರ ಕರ್ತವ್ಯ. ಯಾವುದೇ ಪ್ರಭಾವಕ್ಕೆ ಒಳಗಾಗದೆ ಮತದಾರರು ಸ್ವಇಚ್ಛೆಯಿಂದ ಮತ ಚಲಾಯಿಸಬೇಕು. ಆಸೆ, ಆಮಿಷಗಳಿಗೆ ಒಳಗಾಗಬಾರದು ಎಂದು ತಿಳಿಸಿದರು.
ಮತದಾರರ ಪಟ್ಟಿಗೆ ಹೆಸರು ಸೇರಿಸುವ ಪ್ರಕ್ರಿಯೆ ಮಾ.16ರ ವರಿಗೆ ನಡೆಯಲಿದ್ದು, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ತಮ್ಮ ಹೆಸರು ನೋಂದಾಯಿಸಿ, ಮತದಾನದ ಹಕ್ಕು ಪಡೆಯಬೇಕು ಎಂದು ಮನವಿ ಮಾಡಿದರು.
ಪಟ್ಟಣದ ಹಳೆ ಗಾಂಧಿ ಭವನದಿಂದ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲು ಶಾಲಾ ಮಕ್ಕಳಿಂದ ಪ್ರಾರಂಭಗೊಂಡ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮೂಲ ಸ್ಥಾನದಲ್ಲಿ ಕೊನೆಯಾಯಿತು. ತಾಪಂ ಕಾರ್ಯ ನಿರ್ವಹಣಾಧಿಕಾರಿ ಕೆ.ಎಸ್.ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಜಯರಾಜು, ಕೃಷಿ ಸಹಾಯಕ ನಿರ್ದೇಶಕ ನಾಗರಾಜ್, ಪುರಸಭೆ ಮುಖ್ಯಾಧಿಕಾರಿ ಜಹೀರ್ ಅಬ್ಬಾಸ್, ಶಿಶು ಅಭಿವೃದ್ಧಿ ಅಧಿಕಾರಿ ಸಿ.ವಿ. ರಾಮನ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಿದ್ದರಾಜು ಇತರರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

