ಕೇಂದ್ರದಲ್ಲಿ ಸುಭದ್ರ ಸರ್ಕಾರಕ್ಕೆ 'ಕೈ' ಬೆಂಬಲಿಸಿ
Published On :
ಚಿಕ್ಕಬಳ್ಳಾಪುರ: ಕೇಂದ್ರದಲ್ಲಿ ಸುಭದ್ರ ಸರ್ಕಾರದ ರಚನೆಗಾಗಿ ಕಾಂಗ್ರೆಸ್ಸನ್ನು ಬೆಂಬಲಿಸಿ ದೇಶದ ಅಭಿವೃದ್ಧಿಗೆ ಸಹಕರಿಸಬೇಕೆಂದು ಶಾಸಕ ಡಾ. ಕೆ. ಸುಧಾಕರ್ ಮನವಿ ಮಾಡಿದರು.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕಳೆದ ಎರಡು ದಿನಗಳಿಂದಲೂ ಕೈಗೊಳ್ಳುತ್ತಿರುವ ಪಕ್ಷದ ಕಾರ್ಯಕರ್ತರ ಪಾದಯಾತ್ರೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ಚಿಕ್ಕಬಳ್ಳಾಪುರ ಕ್ಷೇತ್ರವು ಕಾಂಗ್ರೆಸ್ನ ಭದ್ರಕೋಟೆಯಾಗಿರುವುದರಿಂದ ಅಭಿವೃದ್ಧಿ ಕೆಲಸಗಳು ಇಲ್ಲಿ ತ್ವರಿತವಾಗಿ ನಡೆದುಕೊಂಡು ಬಂದಿದೆ. ಸರ್ಕಾರ ಕೋಟ್ಯಂತರ ರು. ಅನುದಾನವನ್ನು ನೀಡುವುದರ ಜೊತೆಗೆ ಈ ಭಾಗದ ಗಂಭೀರವಾದ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸುತ್ತಿದೆ.
ಇದನ್ನು ಮುಂದುವರೆಸಿಕೊಂಡು ಹೋಗಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತದಾರರು ತಮ್ಮ ಪೂರ್ಣ ಬೆಂಬಲವನ್ನು ನೀಡಬೇಕೆಂದರು.
ಕೇಂದ್ರ ಯುಪಿಎ ಸರ್ಕಾರ ಆಡಳಿತ ನಡೆಸಿದ ಸಂದರ್ಭದಲ್ಲಿ ಜಾರಿಗೆ ತಂದಿರುವ ಮಹತ್ತರವಾದ ಯೋಜನೆಗಳಿಂದ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗಿದೆ. ಅದರಲ್ಲೂ ಬಡ ಮತ್ತು ಮಧ್ಯಮ ವರ್ಗದ ಜನರ ಹಿತವನ್ನು ಕಾಪಾಡುವಲ್ಲಿ ಯಶಸ್ವಿಯಾಗಿದೆ. ಉದ್ಯೋಗ ಖಾತ್ರಿ ಯೋಜನೆಯಿಂದ ಕೇಂದ್ರ ಸರ್ಕಾರ ಕೋಟ್ಯಂತರ ರು. ಅನುದಾನವನ್ನು ನೀಡಿದ ಫಲವಾಗಿ ಅಭಿವೃದ್ಧಿ ಕೆಲಸಗಳನ್ನು ತ್ವರಿತಗತಿಯಲ್ಲಿ ಕೈಗೊಂಡು ಪ್ರಗತಿಯನ್ನು ಸಾಧಿಸಲು ಸಾಧ್ಯವಾಯಿತು. ಇನ್ನೂ ಆರ್ ಟಿಇ, ಆರ್ ಟಿಐ, ನಮ್ಮ ರಾಜ್ಯದಲ್ಲಿ ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಅನೇಕ ಯೋಜನೆಗಳು ಕ್ರಾಂತಿಕಾರಿ ಬದಲಾವಣೆಗಳನ್ನು ಉಂಟು ಮಾಡುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ವಾಪಸಂದ್ರದ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪೆರೇಸಂದ್ರ ಕಡೆಗೆ ಪಾದಯಾತ್ರೆಯನ್ನು ಕೈಗೊಂಡು ಶಾಸಕರು ಮತಯಾಚಿಸಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.