ನಂಬಿಗಾನಹಳ್ಳಿ ಶಾಲೆಗೆ ಜಿಲ್ಲಾ ಪರಿಸರ ಮಿತ್ರ ಪ್ರಶಸ್ತಿ
ಮಾಲೂರು: ತಾಲೂಕಿನ ನಂಬಿಗಾನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯು ಸತತ ಎರಡನೇ ಬಾರಿಗೆ ಜಿಲ್ಲಾ ಮಟ್ಟದ ಪರಿಸರ ಮಿತ್ರ ಶಾಲಾ ಪ್ರಶಸ್ತಿಗೆ ಪಾತ್ರವಾಗಿದೆ.
ಕೋಲಾರದ ಚೆನ್ನಯ್ಯ ರಂಗಮಂದಿರದಲ್ಲಿ ತಾಲೂಕಿನ ಚಿಕ್ಕ ಕುಂತೂರು ಕ್ಲಸ್ಟರ್ ವ್ಯಾಪ್ತಿಯ ನಂಬಿಗಾನಹಳ್ಳಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ವೆಂಕಟರಮಣಪ್ಪ ರವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಂದ ಎರಡನೇ ಬಾರಿಗೆ ಪ್ರಶಸ್ತಿ ಹಾಗೂ ಪಾರಿತೋಷಕ ಪಡೆದರು. ಶಾಲೆಯ ಸತತದ ಈ ಸಾಧನೆಗೆ ಕ್ಷೇತ್ರ ಶಿಕ್ಷಾಣಾಧಿಕಾರಿ ಸುಬ್ರಮಣ್ಯಂ, ಸಮನ್ವಯಾಧಿಕಾರಿ ಜಮೀರ್ ಪಾಷ, ಮುಖ್ಯ ಶಿಕ್ಷಕಿ ಕವಿತಾ ಹಾಗೂ ಎಸ್.ಡಿ.ಎಂ.ಸಿ. ಸದಸ್ಯ ವೆಂಕಟಸ್ವಾಮಪ್ಪ ಅಭಿನಂದಿಸಿದ್ದಾರೆ.
ದ್ವಿಚಕ್ರ ವಾಹನ, ಲಗೇಜ್ ಆಟೋ ಡಿಕ್ಕಿ: ಸವಾರ ಸಾವು
ಬಂಗಾರಪೇಟೆ: ದ್ವಿಚಕ್ರ ವಾಹನ ಮತ್ತು ಲಗೇಜ್ ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದ್ವಿಚಕ್ರ ಸವಾರ ಮೃತಪಟ್ಟು ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಕಳೆದ ರಾತ್ರಿ ಪಟ್ಟಣದಲ್ಲಿ ನಡೆದಿದೆ.
ತಾಲೂಕಿನ ನಾರಾಯಣಪುರ ಗ್ರಾಮದ ಆದಿನಾರಾಯಣ 24 ಎಂಬಾತನೆ ಮೃತಪಟ್ಟಿರುವ ವ್ಯಕ್ತಿಯಾಗಿದ್ದು,ಗಾಯಾಳು ಇದೇ ಗ್ರಾಮದ ಸೋಮಶೇಖರ್ ಇಬ್ಬರು ಬುಧವಾರ ರಾತ್ರಿ ಪಟ್ಟಣದಿಂದ ನಾರಾಯಣಪುರ ಗ್ರಾಮಕ್ಕೆ ಹೋಗಲು ನ್ಯಾಯಾಲಯದ ಬಳಿ ಹೋಗುತ್ತಿದ್ದಾಗ ಕೋಲಾರ ಕಡೆಯಿಂದ ರಬಸವಾಗಿ ಬರುತ್ತಿದ್ದ ಲಗೇಜ್ ಆಟೋಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಆದಿನಾರಾಯಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ರೈಲಿನಿಂದ ಬಿದ್ದು ಸಾವು: ಬುಧವಾರ ರಾತ್ರಿ ಪಟ್ಟಣದಿಂದ ಬೆಂಗಳೂರಿಗೆ ಹೋಗುತ್ತಿದ್ದ ರೈಲಿಗೆ ಕೆಜಿಎಫ್ನ ಮಾರಿಕುಪ್ಪಂ ನಿವಾಸಿ ಶಂಕರಪ್ಪ ಹತ್ತಲು ಹೋದಾಗ ಕಾಲು ಜಾರಿ ಕೆಳಗೆ ಬಿದ್ದು ರೈಲಿನ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣ ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದಾತರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

