ಕೋಲಾರ

ರೇಷ್ಮೆ ಬೆಳೆಗಾರರ ಬೇಡಿಕೆಗಳ ಈಡೇರಿಕೆಗೆ ಆಯುಕ್ತರ ಭರವಸೆ

Published On :

ಕೋಲಾರ: ಜಿಲ್ಲಾ ರೇಷ್ಮೆ ಬೆಳೆಗಾರರ ಸಂಘದ ಮುಖಂಡರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತ ಜಿ. ಸತೀಶ್ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಆಯುಕ್ತ ಜಿ. ಸತೀಶ್ ಅವರು ರೇಷ್ಮೆ ಬೆಳೆಗಾರರ ಸಂಘದ ಮುಖಂಡರ ನಿಯೋಗದೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಚರ್ಚೆ ಮಾಡಿ ಬಾಕಿ ಇರುವ ಅನುದಾನದಲ್ಲಿ 1.50 ಕೋಟಿ ತಕ್ಷಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ, ಉಳಿದ ಎಲ್ಲಾ ಅನುದಾನಗಳನ್ನು ಹಂತ ಹಂತವಾಗಿ ಪಾವತಿಸುವುದಾಗಿ ಭರವಸೆ ನೀಡಿದ್ದಾರೆ. ಕೋಲಾರ ರೇಷ್ಮೆ ಗೂಡಿನ ಮಾರುಕಟ್ಟೆ ಅಭಿವೃದ್ಧಿ ಬಗ್ಗೆ ತುರ್ತಾಗಿ ಕ್ರಮ ಕೈಗೊಳ್ಳುವುದಾಗಿಯೂ ನಿಯೋಗಕ್ಕೆ ತಿಳಿಸಿದ್ದಾರೆ. ಕೋಲಾರ ಜಿಲ್ಲಾ ರೇಷ್ಮೆ ಬೆಳೆಗಾರರ ಅಭಿವೃದ್ಧಿ ಸಂಘದ ಜಿಲ್ಲಾದ್ಯಕ್ಷ ಕೋಡಿಕಣ್ಣೂರು ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಚಿಟ್ನಹಳ್ಳಿ ನಾಗರಾಜ, ಗೌರವಾಧ್ಯಕ್ಷ ಅಂಕತಟ್ಟಿ ಗೋವಿಂದರಾಜು, ಉಪಾಧ್ಯಕ್ಷ ಆಲಹಳ್ಳಿ ವೆಂಕಟೇಶಪ್ಪ, ತಾಲೂಕು ರೇಷ್ಮೆ ಬೆಳೆಗಾರರ ಅಭಿವೃದ್ಧಿ ಸಂಘದ ಅಧ್ಯಕ್ಷ ಶಿಂಗೊಂಡಹಳ್ಳಿ ಎ. ಅರ್ಜುನ್, ಪ್ರಧಾನ ಕಾರ್ಯದರ್ಶಿ ರಾಜಕಲ್ಲಹಳ್ಳಿ ಅಯ್ಯಪ್ಪಣ್ಣ ನಿಯೋಗದಲ್ಲಿದ್ದರು. ಸಭೆಯಲ್ಲಿ ಅಪರ ನಿರ್ದೇಶಕ ಡಿ. ರಾಜೇಂದ್ರ, ಬೆಂಗಳೂರು ವಿಭಾಗದ ಜಂಟಿ ನಿರ್ದೇಶಕ ಪ್ರಭಾಕರ, ರವೀಂದ್ರನಾಥ್, ಸುಮಾನ್‌ಸಿಂಗ್ ರೈತರ ಕುಂದುಕೊರತೆಗಳ ಬಗ್ಗೆ ಸಂವಾದ ನಡೆಸಿ ವಿವಿಧ ಬೇಡಿಕೆಗಳನ್ನು ಹಂತ ಹಂತವಾಗಿ ಬಗೆಹರಿಸುವುದಾಗಿ ತಿಳಿಸಿದ್ದಾರೆಂದು ಸಂಘದ ಪ್ರದಾನ ಕಾರ್ಯದರ್ಶಿ  ನಾಗರಾಜ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.