ನನ್ನನ್ನೊಮ್ಮೆ ಗೆಲ್ಲಿಸಿ: ಜೆಡಿಎಸ್ ಅಭ್ಯರ್ಥಿ ಕೇಶವ ಮತಯಾಚನೆ
ಚಿಂತಾಮಣಿ: ಬಡ ರೈತ,ಕೂಲಿ ಕಾರ್ಮಿಕ ಕುಟುಂಬದಿಂದ ಬಂದ ಹಾಗೂ ಕೋಲಾರ ಜಿಲ್ಲೆಯವನೇ ಆದ ನನ್ನನ್ನು ಒಮ್ಮೆ ಗೆಲ್ಲಿಸಿ ಸಂಸತ್ಗೆ ಕಳುಹಿಸಿ ಕೊಡಿ ಎಂದು ಕೋಲಾರ ಲೋಕಸಭಾ ಮೀಸಲು ಕ್ಷೇತ್ರದಿಂದ ಜೆಡಿಎಸ್ನಿಂದ ಲೋಕಸಭೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿ ಕೇಶವ್ ಮತದಾರರನ್ನು ಕೋರಿದರು.
ತಾಲೂಕಿನ ಮುರುಗಮಲ್ಲದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಹೋಬಳಿ ಮಟ್ಟದ ಸಮಾವೇಶದಲ್ಲಿ ಮಾತನಾಡಿ ಮತಯಾಚಿಸಿದರು.
ಕಳೆದ 6 ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದಿರುವ ಕೇಂದ್ರ ಸಚಿವ ಮುನಿಯಪ್ಪ ಕೋಲಾರ ಕ್ಷೇತ್ರಕ್ಕೆ ಅಭಿವೃದ್ಧಿ ಕಾರ್ಯ ಏನನ್ನೂ ಮಾಡದೆ ನೋಡೋಣ, ಮಾಡೋಣ ಎಂದು ಜನರ ಕಿವಿಯಲ್ಲಿ ಹೂ ಮುಡಿಸುವ ಕೆಲಸಕ್ಕೆ ಮುಂದಾಗಿರುವುದೇ ಅವರ ಸಾಧನೆಯೆಂದು ಆರೋಪಿಸಿದರು. ದಯವಿಟ್ಟು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಅಧಿಕ ಮತಗಳಿಂದ ಜಯಶೀಲರನ್ನಾಗಿ ಮಾಡಬೇಕೆಂದು ವಿನಂತಿಸಿದರು.
ಶಾಸಕ ಜೆ.ಕೆ.ಕೃಷ್ಣರೆಡ್ಡಿ ಮಾತನಾಡಿ, ಕೇಂದ್ರದ ಯುಪಿಎ ಸರ್ಕಾರ ಜನಸಾಮಾನ್ಯರ ಮೇಲೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾಡಿದರು. 3 ದಶಕಗಳಿಂದ ಕೇಂದ್ರ ಸಚಿವರು ಅಭಿವೃದ್ಧಿ ನೆಪ ಹೂಡಿ ದೆಹಲಿಯಲ್ಲಿ ಕುಳಿತು ಕಾಲಹರಣ ಮಾಡಿದರೆ ವಿನಾ ಅಭಿವೃದ್ಧಿ ಕೆಲಸ ಏನೂ ಮಾಡಿಲ್ಲವೆಂದು ಕೇಂದ್ರ ಸಚಿವ ಮುನಿಯಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.
ಅಧ್ಯಕ್ಷತೆ ವಹಿಸಿದ್ದ ಕೋಲಾರ ಮಾಜಿ ಸಚಿವ ಶ್ರೀನಿವಾಸಗೌಡ ಮಾತನಾಡಿ, ಕೇಂದ್ರ ಸಚಿವ ಮುನಿಯಪ್ಪ ಏನೊಂದು ಅಭಿವೃದ್ಧಿ ಕೈಗೊಂಡಿಲ್ಲ. ಚುನಾವಣಾ ಸಂದರ್ಭದಲ್ಲಿ ಗಿಮಿಕ್ ರಾಜಕಾರಣ ಮಾಡುತ್ತಾ ಒಬ್ಬರ ಮೇಲೆ ಒಬ್ಬರನ್ನು ಗೂಬೆ ಕೂರಿಸುವ ಕೆಲಸ ಮಾಡಿ ಲೇವಡಿ ಮಾಡಿದರು.
ಮುಖಂಡ ಟಿ.ಎನ್.ರಾಜಗೋಪಾಲ್, ಯನುಮಲಪಾಡಿ ಚಂದ್ರಾರೆಡ್ಡಿ, ಬೊಮ್ಮನಹಳ್ಳಿ ವೆಂಕಟರೆಡ್ಡಿ, ಮಾಜಿ ತಾ. ಅಧ್ಯಕ್ಷ ರಾಗುಟ್ಟಹಳ್ಳಿ ರಘುನಾಥರೆಡ್ಡಿ, ಕೃಷ್ಣಮೂರ್ತಿ, ಸನಾವುಲ್ಲಾ, ದಿನ್ನಮಿಂದಹಳ್ಳಿ ಬೈರಾರೆಡ್ಡಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

