ಕೋಲಾರ

ಒಟ್ಟಾದ ಹಾಲಿ, ಮಾಜಿ ಶಾಸಕರ ಬೆಂಬಲಿಗರು

Published On :

ಚಿಂತಾಮಣಿ: ಲೋಕಸಭಾ ಮೀಸಲು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ. ಕೇಶವ್ ಪರ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಹಾಗೂ ಮಾಜಿ ಶಾಸಕ ಎಂ.ಸಿ. ಸುಧಾಕರ್ ಬೆಂಬಲಿತ ಕಾರ್ಯಕರ್ತರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಆಶ್ಚರ್ಯ ಮೂಡಿಸಿದೆ.
ಕೋಲಾರ ಲೋಕಸಭಾ ಮೀಸಲು ಕ್ಷೇತ್ರದ ಅಭ್ಯರ್ಥಿ ಕೆ. ಕೇಶವ್ ಚುನಾವಣಾ ಪ್ರಚಾರ ಸಭೆಯಲ್ಲಿ ಉಬಯ ನಾಯಕರ ಬೆಂಬಲಿಗರು ಕಾಣಿಸಿಕೊಂಡಿದ್ದಾರೆ. ಶತಾಯ ಗತಾಯ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪರನ್ನು ಸೋಲಿಸಲು ಈಗಾಗಲೇ ಮಾಜಿ ಶಾಸಕ ಸುಧಾಕರ್ ವ್ಯೂವ ರಚಿಸಿದ್ದಾರೆ. ಇದರಿಂದ ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಮಾಧ್ಯಮ ಕೇಂದ್ರಕ್ಕೆ ನೋಡಲ್ ಅಧಿಕಾರಿ ನೇಮಕ
ಕೋಲಾರ:
ನಾಮಪತ್ರ ಸ್ವೀಕೃತಿ ಮತ್ತು ಅಭ್ಯರ್ಥಿಗಳ ಆಸ್ತಿ ವಿವರಗಳ ಅಫಿಡವಿಟ್ ಬಗ್ಗೆ ಹಾಗೂ ಲೋಕಸಭಾ ಚುನಾವಣೆಯ ಇತರೆ ಮಾಹಿತಿಗಳನ್ನು ಜನರಿಗೆ ತಿಳಿಸಲು ಜಿಲ್ಲಾ ಮಟ್ಟದಲ್ಲಿ ಮಾಧ್ಯಮ ಕೇಂದ್ರದ ನೋಡಲ್ ಅಧಿಕಾರಿಗಳಾಗಿ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸಿ.ಎಂ. ರಂಗಾರೆಡ್ಡಿ ಅವರನ್ನು ನೇಮಕ ಮಾಡಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಿ.ಕೆ. ರವಿ ಅವರು ಆದೇಶ ಹೊರಡಿಸಿದ್ದಾರೆ. ಮಾಧ್ಯಮ ಕೇಂದ್ರವು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕಾರ್ಯನಿರ್ವಹಿಸಲಿದೆ.
 ನೋಡಲ್ ಅಧಿಕಾರಿಯ ಸಂಪರ್ಕ ದೂರವಾಣಿ 9449648196 ಆಗಿರುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.