ಕೋಲಾರ

ಮಾಸ್ತಿ ವಸತಿ ಶಾಲೆಯ ಪ್ರವೇಶ ಪರೀಕ್ಷೆಗೆ 850 ವಿದ್ಯಾರ್ಥಿಗಳು

Published On :

ಕೋಲಾರ: ಮಾಸ್ತಿ ವೆಂಕಟೇಶ ಅಯ್ಯಂಗಾರ್ ವಸತಿ ಶಾಲೆಯ 2014-15ನೇ ಸಾಲಿನ 6ನೇ ತರಗತಿಯ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಗೆ ಒಟ್ಟು 1,005 ವಿದ್ಯಾರ್ಥಿಗಳು ನೊಂದಾಯಿಸಿದ್ದು, 850 ಮಂದಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ಜಿಲ್ಲಾ ಪರೀಕ್ಷಾ ನೋಡೆಲ್ ಅಧಿಕಾರಿ ನಾಗೇಂದ್ರಪ್ರಸಾದ್ ತಿಳಿಸಿದರು.
ಜಿಲ್ಲೆಯ ಎಲ್ಲಾ ತಾಲೂಕು, ಶೈಕ್ಷಣಿಕಯ ವಲಯಗಳಲ್ಲೂ ಈ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿತ್ತು, ಕೋಲಾರ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಬಿಜಾಪುರ, ಗುಲ್ಬರ್ಗ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಯ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದಿದ್ದಾರೆಂದು ತಿಳಿಸಿದರು.
ಈ ವಸತಿ ಶಾಲೆಯಲ್ಲಿ ಜಿಲ್ಲೆಯ 25 ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಜಿಲ್ಲೆಗಳ 25 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 50 ಮಂದಿ ದಾಖಲಾತಿಗೆ ಅವಕಾಶವಿದೆ. ಪ್ರವೇಶಕ್ಕೆ ಅರ್ಹರಾದ ವಿದ್ಯಾರ್ಥಿಗಳಿಗೆ ಮಾಸ್ತಿ ಶಾಲೆಯಲ್ಲಿ ಊಟ, ವಸತಿ,ಸಮವಸ್ತ್ರ, ಪುಸ್ತಕ ಸೇರಿದಂತೆ ಉಚಿತ ಶಿಕ್ಷಣದ ಪ್ರಯೋಜನ ದೊರೆಯಲಿದೆ ಎಂದು ತಿಳಿಸಿದರು. ಬಂಗಾರಪೇಟೆ ತಾಲೂಕಿನಲ್ಲಿ 185 ಮಂದಿ ಪರೀಕ್ಷೆಗೆ ನೊಂದಾಯಿಸಿದ್ದು, 158 ಮಂದಿ ಹಾಜರಾಗಿದ್ದರು. ಕೆಜಿಎಫ್ ಶೈಕ್ಷಣಿಕ ತಾಲೂಕಿನಲ್ಲಿ 62ಕ್ಕೆ 58 ಹಾಜರಿ, ಕೋಲಾರ 290ಕ್ಕೆ 242, ಮಾಲೂರು 221ಕ್ಕೆ 165ಮಂದಿ,ಮುಳಬಾಗಿಲು 140ಕ್ಕೆ 116, ಹಾಗೂ ಶ್ರೀನಿವಾಸಪುರ ತಾಲೂಕಿನಲ್ಲಿ 107 ಮಂದಿ ನೊಂದಾಯಿಸಿದ್ದು, 101 ಮಕ್ಕಳು ಹಾಜರಾಗಿದ್ದರು ಎಂದು ನಾಗೇಂದ್ರಪ್ರಸಾದ್ ತಿಳಿಸಿದರು.
ಕೋಲಾರದಲ್ಲಿ ಪರೀಕ್ಷಾ ಉಸ್ತುವಾರಿಯನ್ನು ತಾಲೂಕು ನೋಡೆಲ್ ಅಧಿಕಾರಿ ರಾಮಚಂದ್ರಾರೆಡ್ಡಿ ವಹಿಸಿದ್ದು, ಶಿಕ್ಷಕರಾದ ರಾಮಚಂದ್ರಪ್ಪ, ಮುನಿರಾಜು ಮತ್ತಿತರರು ಪರೀಕ್ಷಾ ಕೇಂದ್ರ ಮೇಲ್ವಿಚಾರಕರಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.