'ಆಹಾರ ಭದ್ರತೆ ಕಲ್ಪಿಸುವಲ್ಲಿ ಯುಪಿಎ ವಿಫಲ'
ಚಿಂತಾಮಣಿ: ಕೇಂದ್ರ ಯುಪಿಎ ಸರ್ಕಾರ ಜನಸಾಮಾನ್ಯರಿಗೆ ಆಹಾರ ಭದ್ರತೆ ಕಲ್ಪಿಸುವಲ್ಲಿ ಸಂಪೂರ್ಣ ವಿಫಲಗೊಂಡಿರುವುದಾಗಿ ಡಿವೈಎಫ್ಐನ ಜಿಲ್ಲಾ ಸಂಚಾಲಕ ಕೃಷ್ಣಾರೆಡ್ಡಿ ಆರೋಪಿಸಿದರು.
ನಗರದ ಪ್ರಗತಿ ಗ್ರಾಮೀಣ ಬ್ಯಾಂಕ್ ಪಕ್ಕದಲ್ಲಿರುವ ಖಾಸಗಿ ಸಮುದಾಯ ಭವನದಲ್ಲಿ ಸೋಮವಾರ ಡಿವೈಎಫ್ಐ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಉದ್ದೇಶಿಸಿ ಮಾತನಾಡಿದರು. 16ನೇ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲು ರಾಹುಲ್ ಗಾಂಧಿಯನ್ನು ಪ್ರಧಾನಮಂತ್ರಿ ಮಾಡಲು ಹೊರಟಿರುವುದು ಸರಿಯಲ್ಲ. ದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಆಹಾರ ಭದ್ರತೆಯಿಲ್ಲದೆ ದೇಶ ಆಘಾತಕಾರಿ ಪರಿಸ್ಥಿತಿ ಎದುರಿಸುವಂತಾಗಿದೆ ಆಕ್ರೋಶ ವ್ಯಕ್ತಪಡಿಸಿದರು. ಗುಜರಾತ್ ಮಾದರಿಯಲ್ಲೇ ಅಭಿವೃದ್ಧಿ ಮಾಡುತ್ತೇನೆಂದು ಹೇಳುವ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರಮೋದಿ ಮಾಧ್ಯಮಗಳು ಬಿಂಬಿಸುತ್ತಿರುವುದು ಸರಿಯಷ್ಟೇ. ಕೋಮುವಾದಿ ಬಿಜೆಪಿವನ್ನು ಜನರು ತಿರಸ್ಕರಿಸುತ್ತಾರೆಂದು ಹೇಳಿದರು. ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ 2 ಮುಖಗಳಿದ್ದಂತೆ. ದೇಶದಲ್ಲಿನ ಬಡತನ, ಅಸ್ಪೃಶ್ಯತೆ ನಿರ್ಮೂಲನೆ ಮಾಡುವಲ್ಲಿ 2 ರಾಷ್ಟ್ರೀಯ ಪಕ್ಷಗಳು ಸಂಪೂರ್ಣ ವಿಫಲಗೊಂಡಿದೆಯೆಂದು ಹೇಳಿದರು. ಕಾರ್ಯಕ್ರಮಕ್ಕೂ ಮುನ್ನ ಡಿವೈಎಫ್ಐ ವತಿಯಿಂದ 16ನೇ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಯುವಜನ ಬಂದುಗಳನ್ನು ಅರಿವು ಮೂಡಿಸುವ ಕಿರು ಪುಸ್ತಕ ಬಿಡುಗಡೆ ಮಾಡಲಾಯಿತು. ನಂತರ ಸಭೆಯಲ್ಲಿ ನೀರಾವರಿ ತಜ್ಞ ದಿ. ಡಾಜಿ.ಎಸ್.ಪರಶಿವಯಯ್ಯನವರ ನಿಧನಕ್ಕೆ ಒಂದು ನಿಮಿಷದ ಕಾಲ ಮೌನ ಆಚರಿಸಲಾಯಿತು. ಡಿವೈಎಫ್ಐ ಉಪಾಧ್ಯಕ್ಷ ರಾಮು, ಕಾರ್ಯದರ್ಶಿ ನರಸಿಂಹ, ಶ್ರೀನಿವಾಸ್ ಯಾದವ್, ಖಜಾಂಚಿ ರಾಜು, ಮುಖಂಡರಾದ ಸೀನಾ, ಮಂಜುನಾಥ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

