ಪಪಂ ಅಧ್ಯಕ್ಷ ಗಾದಿ ಯಾರ ಮಡಿಲಿಗೆ?
ಗುಡಿಬಂಡೆ: ಸ್ಥಳೀಯ ಪಪಂನ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ಇಂದು ಚುನಾವಣೆ ನಡೆಯಲಿದ್ದು, ಚುನಾಯಿತ ಪಕ್ಷಗಳಲ್ಲಿ ಬಹುಮತವಿಲ್ಲದ ಕಾರಣ ಜೆಡಿಎಸ್, ಕೆಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ಒಂದಾಗಿದ್ದು, ಕಾಂಗ್ರೆಸ್ಅನ್ನು ಅಧಿಕಾರದಿಂದ ದೂರವಿಡುವ ತಂತ್ರೋಪಾಯಗಳನ್ನು ರೂಪಿಸುವ ಸಲುವಾಗಿ ಹೊರರಾಜ್ಯ ಪ್ರವಾಸ ಕೈಗೊಂಡಿದ್ದರು. ಬುಧವಾರ ವಾಪಸ್ಸಾಗಲಿದ್ದಾರೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.
ಸರ್ಕಾರದ ಆದೇಶದಂತೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ(ಬಿಸಿಎಂಎ), ಉಪಾಧ್ಯಕ್ಷ ಸ್ಥಾನ ಸಮಾನ್ಯ ವರ್ಗಕ್ಕೆ ಮೀಸಲಾಗಿದೆ. ಇದರಂತೆ ಅಧ್ಯಕ್ಷ ಸ್ಥಾನಕ್ಕೆ ಚುನಾಯಿತ ಪಕ್ಷಗಳ ಪೈಕಿ ಕಾಂಗ್ರೆಸ್ನಲ್ಲಿ ಒಬ್ಬ ಸದಸ್ಯ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಇಬ್ಬರು ಸದಸ್ಯರು ಅರ್ಹರಾಗಿದ್ದಾರೆ. ಆದರೆ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ಗೆ ಅಧಿಕಾರ ಗದ್ದುಗೆ ಏರಲು ಬಹುಮತದ ಕೊರತೆಯಿದೆ. ಹೀಗಾಗಿ ದ್ವಿತೀಯ ಸ್ಥಾನದಲ್ಲಿರುವ ಜೆಡಿಎಸ್ ಸದಸ್ಯರು ಉಳಿದ ಮೂರು ಜನ ಸದಸ್ಯರೊಂದಿಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಅನ್ನು ವಿರೋಧ ಸ್ಥಾನದಲ್ಲಿ ಕೂರಿಸಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಕೆಜೆಪಿ- ಪಕ್ಷೇತರ ಅಭ್ಯರ್ಥಿಗಳೇನಾದರೂ ಕಾಂಗ್ರೆಸ್ ಆಮಿಷಕ್ಕೆ ಒಳಗಾಗಬಹುದೆಂಬ ದೂರದೃಷ್ಟಿಯಿಂದ ಜೆಡಿಎಸ್ ಸ,ದಸ್ಯರು ಅವರನ್ನು ಹೊರರಾಜ್ಯ ಪ್ರವಾಸ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.
ಬಹುಮತದ ಕೊರತೆ ಎದುರಿಸುತ್ತಿರುವ ಕಾಂಗ್ರೆಸ್ ಸದಸ್ಯರು ಪಕ್ಷೇತರ ಅಭ್ಯರ್ಥಿಯಾಗಿ ಜಯ ಗಳಿಸಿದ ಶಾಸಕ ಸುಬ್ಬಾರೆಡ್ಡಿ ಮತದಿಂದ ಅಧಿಕಾರ ಚುಕ್ಕಾಣಿ ಗಿಟ್ಟಿಸಿಕೊಳ್ಳಬಹುದೆಂಬ ಲೆಕ್ಕಾಚಾರದಲ್ಲಿದ್ದಾರೆ. ಶಾಸಕ ಮತ ಚಲಾಯಿಸಿದರೂ ಕಾಂಗ್ರೆಸ್ ಜೆಡಿಎಸ್ ಮೈತ್ರಿಕೂಟ ಎರಡಕ್ಕೂ ಸಮಾನ ಬಹುಮತ ಪ್ರಾಪ್ತವಾಗುತ್ತದೆ. ಇದರಿಂದ ಟಾಸ್ ಮೂಲಕ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳನ್ನು ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

