ಕೋಲಾರ

ಆಮಿಷಕ್ಕೆ ಒಳಗಾಗದೆ ಮತ ಹಕ್ಕು ಚಲಾಯಿಸಿ

Published On :

ಚಿಕ್ಕಬಳ್ಳಾಪುರ: ದೇಶದ ಪ್ರತಿಯೊಬ್ಬ ಮತದಾರ ನಿರ್ಲಕ್ಷ್ಯ ವಹಿಸದೇ ಕಡ್ಡಾಯವಾಗಿ ಮತದಾನದ ಹಕ್ಕನ್ನು ಚಲಾಯಿಸಬೇಕೆಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷೆ ನೀಲಾ ಮಂಜುನಾಥ್ ಸಲಹೆ ನೀಡಿದರು.
ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎನ್‌ಎಸ್‌ಎಸ್ ಘಟಕ ವತಿಯಿಂದ ಬುಧವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ವೀಪ್ ಕಾರ್ಯಕ್ರಮದ ಸುಭದ್ರ ಕ್ರಿಯಾಶೀಲ ಪ್ರಜಾಪ್ರಭುತ್ವಕ್ಕೆ ಮತದಾನದ ಮಹತ್ವ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡುತ್ತಿದ್ದರು.
ದೇಶದಲ್ಲಿ ಹದಿನೆಂಟು ವರ್ಷ ತುಂಬಿದ ಪ್ರತಿ ನಾಗರೀಕನಿಗೂ ಮತ ಚಲಾಯಿಸುವ ಹಕ್ಕನ್ನು ನೀಡಲಾಗಿದೆ. ಮತ ಅಮೂಲ್ಯವಾದುದು. ಯಾವುದೇ ಆಮಿಷಕ್ಕೆ ಒಳಗಾಗದೇ ಮತದಾನ ಮಾಡುವ ಮೂಲಕ ಮತದ ಪ್ರಾವಿತ್ಯವನ್ನು ಕಾಪಾಡಬೇಕೆಂದರು.
ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಕೋಡಿ ರಂಗಪ್ಪ ಮಾತನಾಡಿ, ಸುಭದ್ರ ಸರ್ಕಾರ ರಚನೆಯಲ್ಲಿ ಜನರ ಪಾಲ್ಗೊಳ್ಳುವಿಕೆ ಬಹುಮುಖ್ಯವಾದುದು.
 ಇದನ್ನು ಅರಿತುಕೊಂಡು ಮತದಾರರು ಪ್ರಾಮಾಣಿಕರನ್ನು ಚುನಾವಣೆಯಲ್ಲಿ ಆಯ್ಕೆ ಮಾಡಬೇಕು. ಆಗ ಮಾತ್ರ ಉತ್ತಮ ಜನಪರ ಆಡಳಿತವನ್ನು ನಿರೀಕ್ಷಿಸಲು ಸಾಧ್ಯವಾಗುತ್ತದೆ ಎಂದರು.
ಪ್ರಾಧ್ಯಾಪಕಿ ಜಿ. ಸುಧಾ ಮಾತನಾಡಿ, ಮತ ಹಾಕುವಂತಹುದನ್ನು ನಿರ್ಲಕ್ಷ್ಯದಿಂದ ಕಾಣಬಾರದು. ಜೊತೆಗೆ ಆಮಿಷಕ್ಕೊಳಗಾಗಿ ಅನರ್ಹರನ್ನು ಆಯ್ಕೆ ಮಾಡಬಾರದು ಎಂದರು.
ವಾರ್ತಾ ಇಲಾಖೆ ಸಹಾಯಕ ನಿರ್ದೇಶಕಿ ಡಾ.ಕೆ.ಎನ್. ಕವನ ಮಾತನಾಡಿದರು.
ಪ್ರಾಂಶುಪಾಲ ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಸಹ ಪ್ರಾಧ್ಯಾಪಕರಾದ ರಾಮಕೃಷ್ಣ, ಚಂದ್ರಪ್ಪ, ಜಿ.ಪಂ. ಅಧೀಕ್ಷಕ ರವಿಕುಮಾರ್ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.