ಜೆಡಿಎಸ್ ಅಭ್ಯರ್ಥಿ ಘೋಷಣೆಗೆ ಕ್ಷಣಗಣನೆ
ಚಿಕ್ಕಬಳ್ಳಾಪುರ: ಸ್ಥಳೀಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ಕುರಿತು ಕುತೂಹಲಕ್ಕೆ ತೆರೆ ಎಳೆಯಲಿರುವ ಚಿಕ್ಕಬಳ್ಳಾಪುರ ಜೆಡಿಎಸ್ ಕಾರ್ಯಕರ್ತರ ಸಮಾವೇಶಕ್ಕೆ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಣಕ್ಕಿಳಿಯುತ್ತಾರೆ ಎನ್ನುವುದು ಜೆಡಿಎಸ್ ಕಾರ್ಯಕರ್ತರ ಆಶಯ. ಚಿಕ್ಕಬಳ್ಳಾಪುರವನ್ನು ಜಿಲ್ಲೆಯನ್ನಾಗಿ ಘೋಷಿಸಿದ ಕೀರ್ತಿ ಕುಮಾರಸ್ವಾಮಿಯವರಿಗೆ ಸಲ್ಲುತ್ತದೆ.
ಇಲ್ಲಿ ಅವರು ಚುನಾವಣೆಗೆ ನಿಂತರೆ ಜೆಡಿಎಸ್ಗೆ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಬೀಗುತ್ತಿದ್ದಾರೆ. ಇಲ್ಲಿ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಇದೇ ನಿರ್ಧಾರದ ಪರ ಒಲವು ಹೆಚ್ಚಾಗಿದೆ. ಆದರೆ, ರಾಮನಗರದ ಜನರ ಅಭಿಪ್ರಾಯಗಳನ್ನು ತಿಳಿದು ತಮ್ಮ ಅಂತಿಮ ನಿರ್ಧಾರವನ್ನು ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಘೋಷಿಸುವುದಾಗಿ ಸ್ವತಃ ಕುಮಾರಸ್ವಾಮಿ ತಿಳಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ನಗರದ ಹೊರ ವಲಯದಲ್ಲಿರುವ ನಂದಿ ಕೋಲ್ಡ್ ಸ್ಟೋರೇಜ್ ಬಳಿ ಮಾ.20 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಜೆಡಿಎಸ್ ಕಾರ್ಯಕರ್ತರ ಸಮಾವೇಶಕ್ಕಾಗಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ.
ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಎರಡು ಕಡೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದು ಒಂದು ಲಕ್ಷ ಕಾರ್ಯಕರ್ತರು ಆಗಮಿಸುವ ನಿರೀಕ್ಷೆಯನ್ನು ಜೆಡಿಎಸ್ ಹೊಂದಿದೆ. ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕೃಷ್ಣಪ್ಪ, ಮಾಜಿ ಸಚಿವ ಜಮೀರ್ ಅಹಮದ್, ಶಾಸಕರಾದ ಎಂ. ರಾಜಣ್ಣ, ಜೆ.ಕೆ. ಕೃಷ್ಣಾರೆಡ್ಡಿ, ಪಿಳ್ಳಮುನಿಶಾಮಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ. ನಾಗರಾಜ್ ಸೇರಿದಂತೆ ಮಾಜಿ ಸಚಿವರು ಮತ್ತು ಮಾಜಿ ಶಾಸಕರು ಭಾಗವಹಿಸುತ್ತಿದ್ದು ಕುಮಾರಸ್ವಾಮಿಯವರ ನಿರ್ಧಾರ ತಿಳಿಯಲು ಪಕ್ಷದ ಕಾರ್ಯಕರ್ತರು ಕಾತುರದಿಂದ ಎದುರು ನೋಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

