ದೇವರ ಹೆಸರಿನಲ್ಲಿ ಅವ್ಯವಹಾರ: ಆರೋಪ
ಕೆಜಿಎಫ್: ದೇವರ ಹೆಸರಿನಲ್ಲಿ ಲಕ್ಷಾಂತರ ಹಣ ವಸೂಲಿ ಮಾಡಿದ ಚಿನ್ನದ ರಥ ಟ್ರಸ್ಟ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ವೈ. ಸಂಪಂಗಿ ಲೆಕ್ಕಾಚಾರ ಟ್ರಸ್ಟ್ಗೆ ನೀಡದೆ ಅವ್ಯವಹಾರ ಮಾಡಿದ್ದಾರೆ ಎಂದು ಮಾಜಿ ಶಾಸಕ ಎಂ. ಭಕ್ತವತ್ಸಲಂ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ 75 ವರ್ಷಗಳಿಂದ ಕೆಜಿಎಫ್ ಕ್ಷೇತ್ರದ ಸುಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವದಲ್ಲಿ ದಲಿತ ಸಮುದಾಯದವರಿಗೆ ಹೊರತು ಪಡಿಸಿ ಉಳಿದವರಿಗೆ ರಥೋತ್ಸವ ನಡೆಸಲು ಮುಜರಾಯಿ ಇಲಾಖೆಯಿಂದ ಅನುಮತಿ ನೀಡಲಾಗುತ್ತಿದೆ. ಆದರೆ ದಲಿತ ಸಮುದಾಯದವರಿಗೂ ಈ ಜಾತ್ರೆಯಲ್ಲಿ ರಥೋತ್ಸವ ನಡೆಸಲು ಅನುಮತಿ ನೀಡಬೇಕು ಎಂದು ವೈ. ಸಂಪಂಗಿ ಕಳೆದ ಮೂರು ವರ್ಷಗಳ ಹಿಂದೆ ಶಾಸಕರಾಗಿದ್ದಾಗ ಜಿಲ್ಲಾಧಿಕಾರಿಗಳಿಗೆ ಹಾಗೂ ಮುಜರಾಯಿ ಇಲಾಖೆ ಮನವಿ ಮಾಡಿ ಸರ್ಕಾರದಿಂದ ಅನುಮೋದನೆ ಪಡೆದು ಚಿನ್ನದ ರಥ ಎಂಬ ಹೆಸರಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ.
ಆದರೆ ಟ್ರಸ್ಟ್ ಹೆಸರಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಲಕ್ಷಾಂತರ ಹಣ ವಸೂಲಿ ಮಾಡಿದ್ದು ಟ್ರಸ್ಟ್ಗೆ ಯಾವುದೇ ಖರ್ಚು ವೆಚ್ಚಗಳ ಬಗ್ಗೆ ಲೆಕ್ಕಾಚಾರ ನೀಡದ ಕಾರಣ ಅಸಮಾದಾನಗೊಂಡ ಟ್ರಸ್ಟ್ನ ಮುಖಂಡರು ನೂತನ ದಲಿತ್ ಚಾರಿಟಬಲ್ ಟ್ರಸ್ಟ್ಗೆ ಸೇರ್ಪಡೆಯಾಗಿದ್ದಾರೆ. ಬಿಜಿಎಂಎಲ್ ಚಿನ್ನದ ಗಣಿ ಪ್ರದೇಶದ 78 ಪಂಚಾಯಿತಿ ಸೇರಿದಂತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಆರ್ಪಿಐ, ಸಿಪಿಎಂ ಮತ್ತು ಇತರೆ ಪಕ್ಷಗಳ ಮುಖಂಡರು ಹಾಗೂ ವಿವಿಧ ಸಂಘಟನೆಯ ಮುಖಂಡರ ಸಭೆ ನಡೆಸಿ ಈ ತೀರ್ಮಾನ ಕೈಗೊಂಡು ದಲಿತ ಗೋಲ್ಡನ್ ಚಾರಿಟಬಲ್ ಟ್ರಸ್ಟ್ ಹೆಸರನ್ನು ನೋಂದಾಯಿಸಲಾಗಿದ್ದು ಅದಕ್ಕೆ ಮಾಜಿ ಶಾಸಕ ಎಸ್. ರಾಜೇಂದ್ರನ್, ಉಪಾಧ್ಯಕ್ಷರಾಗಿ ಡಿ. ಜಯಪಾಲ್, ಕಾರ್ಯದರ್ಶಿಯಾಗಿ ಎಂ. ಭಕ್ತವತ್ಸಲಂ ಅವರನ್ನು ಆಯ್ಕೆ ಮಾಡಲಾಗಿದ್ದು, ಮಾ.22ರಂದು ದಲಿತ ಸಮುದಾಯದ ರಥೋತ್ಸವ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಮಾಜಿ ಶಾಸಕ ವೈ. ಸಂಪಂಗಿ ಭಾಗವಹಿಸಲು ಅಡ್ಡಿಯಿಲ್ಲ ಎಂದು ತಿಳಿಸಿದರು.
ದೇವರ ಹೆಸರಿನಲ್ಲಿ ಮಾಡುತ್ತಿರುವ ಕಾರ್ಯಕ್ರಮಕ್ಕೆ ನಾಲ್ಕು ವರ್ಷಗಳಿಂದ ನಾವುಗಳು ಯಾವುದೇ ಅಡ್ಡಿ ಮಾಡಿಲ್ಲ. ದಲಿತ ರಥೋತ್ಸವ ಬರೀ ಮಾಜಿ ಶಾಸಕ ವೈ. ಸಂಪಂಗಿಗೆ ಮಾತ್ರ ಸೀಮಿತವಲ್ಲ. ಅದು ಮೀಸಲು ಕ್ಷೇತ್ರ ಕೆಜಿಎಫ್ನ ಲಕ್ಷಾಂತರ ದಲಿತರಿಗೆ ಸೇರಿದೆ. ಈ ಜಾತ್ರೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಎಲ್ಲರೂ ಒಗ್ಗೂಡಿ ಜಾತ್ರೆಯನ್ನು ನಡೆಸಬೇಕು ಎಂದು ಕೋಲಾರ ಜಿಲ್ಲಾಧಿಕಾರಿಗಳು ಕರೆದಿದ್ದ ಸಭೆಯಲ್ಲಿ ತಿಳಿಸಿದ್ದು, ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಿರುವ ಹಿನ್ನಲೆಯಲ್ಲಿ ಎಲ್ಲರೂ ಜಾತ್ರೆಯನ್ನು ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಎಸ್. ರಾಜೇಂದ್ರನ್ ಮಾತನಾಡಿ, ದಲಿತ ಗೋಲ್ಡನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಡೆಯಲಿರುವ ರಥೋತ್ಸವದಲ್ಲಿ ತಿರುಮಲ ಗೋಪುರ ಮಾದರಿಯಲ್ಲಿ ದೇವರ ರಥವನ್ನು ಹಗ್ಗದಿಂದ ಎಳೆದು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗುತ್ತದೆ. ರಥೋತ್ಸವಕ್ಕೆ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ಗೋಪಾಲ್, ಶೇಖರ್, ಕರುನಾನಿಧಿ, ಸುರೇಶ್ಬಾಬು, ಪ್ರಸಾದ್, ಅನಿತಾಕುಮಾರಿ, ತಂಗತಾಯಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

