ಕೋಲಾರ

ಮುನಿಯಪ್ಪರಿಂದ ಕ್ಷೇತ್ರದ ಅಭಿವೃದ್ಧಿ ಕೊಡುಗೆ ಶೂನ್ಯ

Published On :

ಶಿಡ್ಲಘಟ್ಟ: ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪನವರ ಕೊಡುಗೆ ಕ್ಷೇತ್ರದ ಅಭಿವೃದ್ಧಿಗೆ ಶೂನ್ಯ ಎಂದು ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಗೆಲುವು ಪಡೆದಿರುವ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಪ್ರತಿ ಚುನಾವಣೆಯಲ್ಲಿ ತಂತ್ರಗಾರಿಕೆ ಅನುಸರಿಸುತ್ತಿದ್ದಾರೆ. ಅವರು ಆರು ಬಾರಿ ಗೆಲುವು ಪಡೆದರೂ ತಮ್ಮ ಸ್ವಂತ ಊರಿನಲ್ಲೂ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಲ್ಲ ಎಂದು ಆರೋಪಿಸಿದರು.
ಚುನಾವಣೆಗಳು ಬಂದಾಗ ಮಾತ್ರ ಅಲ್ಪಸಂಖ್ಯಾತರ ಮತ ಪಡೆಯಲು ಗಾಳ ಹಾಕುವ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಬೆಂಬಲಿಗರು ಎಂದು ಬಿಂಬಿಸುತ್ತದೆ. ಆದರೆ ಈ ಬಾರಿ ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಅನುಯಾಯಿಗಳು ಎಂದು ಚಿಂತಿಸುವುದು ತಪ್ಪಾಗುತ್ತದೆ ಎಂದು ಆರೋಪಿಸಿದರು.
ಜೆಡಿಎಸ್ ಪಕ್ಷಕ್ಕೆ ಯಾರೇ ಅಭ್ಯರ್ಥಿಯಾದರೂ ಬೆಂಬಲಿಸುತ್ತೇವೆ ಎಂದರು.
 ರಾಜ್ಯ ಜೆಡಿಎಸ್ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿ ರಹಮತ್ತುಲ್ಲಾ, ಪುರಸಭಾ ಸದಸ್ಯ ಅಫಸರ್ ಪಾಷ, ಷಫಿವುಲ್ಲಾ, ಯೂಸೂಫ್, ಸಮೀವುಲ್ಲಾ, ಸೈಯದ್, ಅಕ್ರಂಪಾಷಾ, ಪೈರೋಜ್‌ಪಾಷಾ ಇದ್ದರು.
ಆಯ್ಕೆಯಲ್ಲಿ ಗೊಂದಲ: ಪಟ್ಟಣದ ಟಿಪ್ಪು ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಎಂ.ಪಿ. ಮುಶ್ತಾಕ್ ಅಹಮದ್ ತಮ್ಮನ್ನು ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ರಾಜ್ಯಾಧ್ಯಕ್ಷರು ನೇಮಕ ಮಾಡಿದ್ದಾರೆ ಎಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದ್ದಾರೆ.
ಅಲ್ತಾಫ್ ಜಾಗದಲ್ಲಿ ಶಕೀಲ್ ನವಾಝ್‌ರನ್ನು ನೇಮಕ ಮಾಡಿದ್ದಾರೆ. ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಶಕೀಲ್‌ನವಾಝ್‌ರನ್ನು ಹೆಚ್ಚುವರಿಯಾಗಿ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.